Mysore
30
overcast clouds

Social Media

ಮಂಗಳವಾರ, 14 ಜುಲೈ 2026
Light
Dark

ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲ ಗೆಹ್ಲೋಟ್‌

ಬೆಂಗಳೂರು: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ರಾಜೀನಾಮೆ ಪತ್ರವನ್ನು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಇಂದು ಅಂಗೀಕರಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಸಂವಿಧಾನಬದ್ಧವಾಗಿ ರಾಜೀನಾಮೆ ಪತ್ರವನ್ನು ಅಂಗೀಕರಿಸಿದ್ದಾರೆ. ಈ ಬಗ್ಗೆ ಲೋಕಭವನದಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ.

ಹೊಸ ಸರ್ಕಾರ ರಚನೆಯಾಗುವವರೆಗೂ ಇನ್ನೂ 2-3 ದಿನಗಳ ಕಾಲ ಸಿದ್ದರಾಮಯ್ಯ ಅವರು ಹಂಗಾಮಿ ಸಿಎಂ ಆಗಿ ಮುಂದುವರಿಯಲಿದ್ದಾರೆ.

ಇನ್ನು ಮಾಹಿತಿ ಪ್ರಕಾರ ನಾಳೆ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ನಡೆಯುವ ಸಾಧ್ಯತೆಯಿದ್ದು, ಸಿಎಲ್‌ಪಿ ನಾಯಕನಾಗಿ ಡಿಕೆಶಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.

ಎಲ್ಲವೂ ಅಂದುಕೊಂಡತೆ ನಡೆದರೆ ಸೋಮವಾರ ಸಂಹೆ ಗೋದೂಳಿ ಮುಹೂರ್ತದಲ್ಲಿ ಡಿ.ಕೆ.ಶಿವಕುಮಾರ್‌ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

 

Tags:
error: Content is protected !!