Governor Gehlot's
ಬೆಂಗಳೂರು : ಮೈಸೂರು ಮೂಲದ ಪತ್ರಕರ್ತ ಕೆ.ಶಿವಕುಮಾರ್, ಕೆಪಿಸಿಸಿ ಸಾಮಾಜಿಕ ಜಾಲತಾಣದ ಮುಖ್ಯಸ್ಥ ರಮೇಶ್ ಬಾಬು ಸೇರಿದಂತೆ ನಾಲ್ವರನ್ನು ರಾಜ್ಯಪಾಲರು ಭಾನುವಾರ ವಿಧಾನ ಪರಿಷತ್ತಿಗೆ ನಾಮಕರಣ ಮಾಡಿದ್ದಾರೆ.
ಕಳೆದ ಹಲವು ದಿನಗಳಿಂದ ನನಗೆ ಬಿದ್ದಿದ್ದ ನಾಲ್ವರ ಹೆಸರುಗಳನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರದ ಶಿಫಾರಸ್ಸಿಗೆ ಸಹಿ ಹಾಕಿದ್ದಾರೆ. ರಮೇಶ್ ಬಾಬು , ಶಿವಕುಮಾರ್ ,ಅನಿವಾಸಿ ಭಾರತೀಯ ಸಮಿತಿಯ ಉಪಾಧ್ಯಕ್ಷೆ ಭಾರತಿ ಕೃಷ್ಣ ಮತ್ತು ದಲಿತ ಮುಖಂಡ ಎಪ್.ಹೆಚ್ ಜಕ್ಕಪ್ಪನವರನ್ನು ವಿಧಾನ ಪರಿಷತ್ಗೆ ನಾಮಕರಣ ಮಾಡಲಾಗಿದೆ.
ಮೂವರು 6 ವರ್ಷಗಳ ಅವಧಿಗೆ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಆದರೆ ರಮೇಶ್ ಬಾಬು ಅವರ ಅಧಿಕಾರ ಅವಧಿ 2026ರ ಜುಲೈ 21ರ ವರೆಗೆ ಮಾತ್ರ ಇರಲಿದೆ.
ಸರ್ಕಾರದಿಂದ ನಾಮನಿರ್ದೇಶನಗೊಂಡಿದ್ದ ಕಾಂಗ್ರೆಸ್ ಯು.ಬಿ. ವೆಂಕಟೇಶ್ ಮತ್ತು ಪ್ರಕಾಶ್ ಕೆ. ರಾಥೋಡ್ ಅವರ ಅವಧಿ 2024ರ ಅಕ್ಟೋಬರ್‌ನಲ್ಲಿ ಮತ್ತು ಜೆಡಿಎಸ್‌ನ ಕೆ.ಎ ತಿಪ್ಪೇಸ್ವಾಮಿ ಅವರ ಅವಧಿ 2025ರ ಜನವರಿ ವೇಳೆಗೆ ಮುಕ್ತಾಯಗೊಂಡಿತ್ತು. ಉಪ ಚುನಾವಣೆಯಲ್ಲಿ ಸ್ಪರ್ಧಿಸುವ ಉದ್ದೇಶದಿಂದ ಸಿ.ಪಿ. ಯೋಗೇಶ್ವರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಸ್ಥಾನಗಳು ಖಾಲಿಯಾಗಿದ್ದವು. 7 ತಿಂಗಳ ಹಗ್ಗ ಜಗ್ಗಾಟದ ಬಳಿಕ ಸರ್ಕಾರ ನಾಮ ನಿರ್ದೇಶನ ಮಾಡಿ ಅಧಿಕೃತ ಆದೇಶ ಹೊರಡಿಸಿದೆ.
ರಾಜ್ಯಪಾಲರು ಭಾರತದ ಸಂವಿಧಾನದ 171(3)(ಇ) ವಿಧಿಯಡಿಯಲ್ಲಿ ನಾಲ್ವರನ್ನು ವಿಧಾನ ಪರಿಷತ್ತಿಗೆ ನಾಮನಿರ್ದೇಶನ ಮಾಡಿದ್ದಾರೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಭಾನುವಾರ ಹೊರಡಿಸಿದ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದೆ.
ಜನತಾ ಪ್ರಾತಿನಿಧ್ಯ ಕಾಯ್ದೆ 1951 ರ ಸೆಕ್ಷನ್ 74 ಮತ್ತು ಸೆಕ್ಷನ್ 156(2) ರ ಅಡಿಯಲ್ಲಿ ಹೊರಡಿಸಲಾದ ಅಧಿಸೂಚನೆಯಲ್ಲಿ, ಸಾಂವಿಧಾನಿಕ ನಿಬಂಧನೆಗಳಿಗೆ ಅನುಗುಣವಾಗಿ ನೇಮಕಾತಿಗಳನ್ನು ಮಾಡಲಾಗಿದೆ ಎಂದು ತಿಳಿಸಲಾಗಿದೆ.
ರಾಜ್ಯಪಾಲರ ಹೆಸರಿನಲ್ಲಿ ಆದೇಶವನ್ನು ಬಿಡುಗಡೆ ಮಾಡಲಾಗಿದ್ದು, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಚುನಾವಣೆಗಳು) ಸರ್ಕಾರದ ಅಧೀನ ಕಾರ್ಯದರ್ಶಿ ಮಧು ಎ. ಸಿ. ಅವರು ಸಹಿ ಮಾಡಿದ್ದಾರೆ.
• ಅನಧಿಕೃತ ಜಾಹೀರಾತು ಹಾಕಿದರೆ ಕ್ರಿಮಿನಲ್ ಕೇಸ್ • ವಿಧಾನಸಭೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಜಾಹೀರಾತು ನೀತಿ ಮಸೂದೆ ಮಂಡನೆ,…
ಬೆಂಗಳೂರು : ರಾಜ್ಯದಲ್ಲಿ ವಕ್ಛ್ ಆಸ್ತಿಗಳ ಒತ್ತುವರಿಯನ್ನು ತೆರವುಗೊಳಿಸಿ ಆಸ್ತಿಗಳನ್ನು ಮರಳಿ ಪಡೆಯಲು ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ವಸತಿ,…
ಮಳವಳ್ಳಿ : ಒಳಮೀಸಲಾತಿ ಹೆಸರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಉದ್ದೇಶಪೂರ್ವಕವಾಗಿ ಪರಿಶಿಷ್ಟ ಜಾತಿಗಳನ್ನು ಒಡೆಯುವ ನೀತಿಯನ್ನು ಅನುಸರಿಸಿದೆ…
ಚಾಮರಾಜನಗರ : ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಯುಗಾದಿ, ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ಸೌಹಾರ್ದ ಸಭೆ…
ಮಂಡ್ಯ : 2027ರ ಜನಗಣತಿಯು ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ನಡೆಯುತ್ತಿರುವುದರಿಂದ, ಕಾರ್ಯಾಚರಣೆಯನ್ನು ದೋಷರಹಿತವಾಗಿ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಕುಮಾರ ಅವರು ತಾಂತ್ರಿಕ…
ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡನೇ ಶನಿವಾರ ಹಾಗೂ ಯುಗಾದಿ…