ರಾಜ್ಯ

MLA ನಾಮ ನಿರ್ದೇಶನಕ್ಕೆ ಗ್ರೀನ್‌ ಸಿಗ್ನಲ್‌ ನೀಡಿದ ರಾಜ್ಯಪಾಲರು

ಬೆಂಗಳೂರು : ಮೈಸೂರು ಮೂಲದ ಪತ್ರಕರ್ತ ಕೆ.ಶಿವಕುಮಾರ್, ಕೆಪಿಸಿಸಿ ಸಾಮಾಜಿಕ ಜಾಲತಾಣದ ಮುಖ್ಯಸ್ಥ ರಮೇಶ್ ಬಾಬು ಸೇರಿದಂತೆ ನಾಲ್ವರನ್ನು ರಾಜ್ಯಪಾಲರು ಭಾನುವಾರ ವಿಧಾನ ಪರಿಷತ್ತಿಗೆ ನಾಮಕರಣ ಮಾಡಿದ್ದಾರೆ.

ಕಳೆದ ಹಲವು ದಿನಗಳಿಂದ ನನಗೆ ಬಿದ್ದಿದ್ದ ನಾಲ್ವರ ಹೆಸರುಗಳನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರದ ಶಿಫಾರಸ್ಸಿಗೆ ಸಹಿ ಹಾಕಿದ್ದಾರೆ.  ರಮೇಶ್ ಬಾಬು ‌, ಶಿವಕುಮಾರ್ ,ಅನಿವಾಸಿ ಭಾರತೀಯ ಸಮಿತಿಯ ಉಪಾಧ್ಯಕ್ಷೆ ಭಾರತಿ ಕೃಷ್ಣ ಮತ್ತು ದಲಿತ ಮುಖಂಡ ಎಪ್.ಹೆಚ್ ಜಕ್ಕಪ್ಪನವರನ್ನು ವಿಧಾನ ಪರಿಷತ್ಗೆ ನಾಮಕರಣ ಮಾಡಲಾಗಿದೆ.

ಮೂವರು 6 ವರ್ಷಗಳ ಅವಧಿಗೆ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಆದರೆ ರಮೇಶ್‌ ಬಾಬು ಅವರ ಅಧಿಕಾರ ಅವಧಿ 2026ರ ಜುಲೈ 21ರ ವರೆಗೆ ಮಾತ್ರ ಇರಲಿದೆ.

ಸರ್ಕಾರದಿಂದ ನಾಮನಿರ್ದೇಶನಗೊಂಡಿದ್ದ ಕಾಂಗ್ರೆಸ್‌ ಯು.ಬಿ. ವೆಂಕಟೇಶ್ ಮತ್ತು ಪ್ರಕಾಶ್ ಕೆ. ರಾಥೋಡ್ ಅವರ ಅವಧಿ 2024ರ ಅಕ್ಟೋಬರ್‌ನಲ್ಲಿ ಮತ್ತು ಜೆಡಿಎಸ್‌ನ ಕೆ.ಎ ತಿಪ್ಪೇಸ್ವಾಮಿ ಅವರ ಅವಧಿ 2025ರ ಜನವರಿ ವೇಳೆಗೆ ಮುಕ್ತಾಯಗೊಂಡಿತ್ತು. ಉಪ ಚುನಾವಣೆಯಲ್ಲಿ ಸ್ಪರ್ಧಿಸುವ ಉದ್ದೇಶದಿಂದ ಸಿ.ಪಿ. ಯೋಗೇಶ್ವ‌ರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಸ್ಥಾನಗಳು ಖಾಲಿಯಾಗಿದ್ದವು. 7 ತಿಂಗಳ ಹಗ್ಗ ಜಗ್ಗಾಟದ ಬಳಿಕ ಸರ್ಕಾರ ನಾಮ ನಿರ್ದೇಶನ ಮಾಡಿ ಅಧಿಕೃತ ಆದೇಶ ಹೊರಡಿಸಿದೆ.

ರಾಜ್ಯಪಾಲರು ಭಾರತದ ಸಂವಿಧಾನದ 171(3)(ಇ) ವಿಧಿಯಡಿಯಲ್ಲಿ ನಾಲ್ವರನ್ನು ವಿಧಾನ ಪರಿಷತ್ತಿಗೆ ನಾಮನಿರ್ದೇಶನ ಮಾಡಿದ್ದಾರೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಭಾನುವಾರ ಹೊರಡಿಸಿದ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದೆ.

ಜನತಾ ಪ್ರಾತಿನಿಧ್ಯ ಕಾಯ್ದೆ 1951 ರ ಸೆಕ್ಷನ್ 74 ಮತ್ತು ಸೆಕ್ಷನ್ 156(2) ರ ಅಡಿಯಲ್ಲಿ ಹೊರಡಿಸಲಾದ ಅಧಿಸೂಚನೆಯಲ್ಲಿ, ಸಾಂವಿಧಾನಿಕ ನಿಬಂಧನೆಗಳಿಗೆ ಅನುಗುಣವಾಗಿ ನೇಮಕಾತಿಗಳನ್ನು ಮಾಡಲಾಗಿದೆ ಎಂದು ತಿಳಿಸಲಾಗಿದೆ.

ರಾಜ್ಯಪಾಲರ ಹೆಸರಿನಲ್ಲಿ ಆದೇಶವನ್ನು ಬಿಡುಗಡೆ ಮಾಡಲಾಗಿದ್ದು, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಚುನಾವಣೆಗಳು) ಸರ್ಕಾರದ ಅಧೀನ ಕಾರ್ಯದರ್ಶಿ ಮಧು ಎ. ಸಿ. ಅವರು ಸಹಿ ಮಾಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ವಿದ್ಯುತ್ ಕಡಿತ ಮುಂಚಿತವಾಗಿ ಪ್ರಕಟಿಸಿ

ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…

5 hours ago

ಓದುಗರ ಪತ್ರ: ಖುಷಿ ಕೊಡುವ ಮಾತುಗಳಷ್ಟೇ ಸ್ಪಂದನೆಯೂ ಮುಖ್ಯ

ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…

6 hours ago

ಓದುಗರ ಪತ್ರ: ಬ್ಯಾಂಕ್ ಒಕ್ಕೂಟಗಳಿಗೆ ಜವಾಬ್ದಾರಿ ಇರಲಿ

ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…

6 hours ago

ಪ್ರಶಸ್ತಿ ಪ್ರದಾನದಿಂದ ಚಿತ್ರೋತ್ಸವವರೆಗೆ ಹೊಸ ಪಯಣ

ವೈಡ್‌ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…

6 hours ago

ಜಂಬೂಸವಾರಿಯಲ್ಲಿ ಸ್ತಬ್ಧ ಚಿತ್ರಗಳ ‘ತ್ರಿಸಂಗಮ’

ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…

6 hours ago