ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಮಸೂದೆ ವಾಪಸ್
ದ್ವೇಷ ಭಾಷಣ, ಅಪರಾಧಗಳ ಪ್ರತಿಬಂಧಕ ಮಸೂದೆಯೂ ಹಿಂದಕ್ಕೆ
ಬೆಂಗಳೂರು : ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೂ ಬೆಳಗಾವಿಯ ಚಳಿಗಾಲದ ಅಧಿವೇಶನದ ಉಭಯ ಸದನಗಳಲ್ಲಿ ಅಂಗೀಕರಿಸಿದ್ದ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕ ಸೇರಿದಂತೆ 3 ಮಸೂದೆಗಳನ್ನು ರಾಜ್ಯಪಾಲರು ವಾಪಸ್ ಕಳುಹಿಸಿದ್ದಾರೆ.
ಮೈಸೂರಿನ ರಾಜವಂಶಸ್ಥೆ ಪ್ರಮೋದಾ ದೇವಿ ಅವರು, ವಿರೋಧ ವ್ಯಕ್ತ ಪಡಿಸಿದ ಹಿನ್ನೆಲೆಯಲ್ಲಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಹಾಗೂ ಪರಿಶಿಷ್ಟ ಜಾತಿಗಳ ಉಪ ವರ್ಗೀಕರಣ ಮಸೂದೆಯನ್ನು ರಾಜ್ಯಪಾಲರು ಸರ್ಕಾರಕ್ಕೆ ಹಿಂತಿರುಗಿದ್ದಾರೆ.
ಈ ಎರಡು ಮಸೂದೆಗಳ ಬಗ್ಗೆ ಹೆಚ್ಚಿನ ಸ್ಪಷ್ಟತೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಕೇಳಿದ್ದಾರೆ. ಉಳಿದಂತೆ ರಾಜ್ಯ ಸರ್ಕಾರ ಕಳುಹಿಸಿದ್ದ 22 ಮಸೂದೆಗಳ ಪೈಕಿ 19 ಮಸೂದೆಗಳಿಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ.
ಈ ಸಂಬಂಧ ಶುಕ್ರವಾರ ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗಳು ಮಾಧ್ಯಮ ಪ್ರಕಟಣೆ ಹೊರಡಿಸಿ, ಮಾಹಿತಿ ನೀಡಿದ್ದಾರೆ.
ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷಾಪರಾಧಗಳ ಪ್ರತಿಬಂಧಕ ವಿಧೇಯಕ ಕುರಿತು ಇನ್ನೂ ಯಾವುದೇ ತೀರ್ಮಾನ ಕೈಗೊಂಡಿಲ್ಲ. ದ್ವೇಷ ಭಾಷಣ ಮಸೂದೆ ಬಗ್ಗೆ ಕಾನೂನು ತಜ್ಞರ ಜೊತೆ ಚರ್ಚಿಸಲು ರಾಜ್ಯಪಾಲರು ಚಿಂತನೆ ಮಾಡಿದ್ದಾರೆ ಎನ್ನಲಾಗಿದೆ. ರಾಷ್ಟ್ರಪತಿಗಳಿಗೂ ದ್ವೇಷ ಭಾಷಣ ಮಸೂದೆ ಕಳಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ದ್ವೇಷ ಭಾಷಣ ಮಸೂದೆಗೆ ಸಹಿ ಹಾಕದಂತೆ ಬಿಜೆಪಿ ನಾಯಕರು ಹಾಗೂ ಹಿಂದೂಪರ ಸಂಘಟನೆಗಳು ರಾಜ್ಯಪಾಲರಿಗೆ ಮನವಿ ಮಾಡಿದ್ದವು. ಈ ಹಿನ್ನೆಲೆ ಈ ಮಸೂದೆ ಬಗ್ಗೆ ರಾಜ್ಯಪಾಲರು ವಿಸ್ತೃತ ಪರಿಶೀಲನೆ ಮಾಡುವ ಸಾಧ್ಯತೆ ಇದೆ.
ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ: ಮೈಸೂರು ಜಿಲ್ಲೆಯ ಚಾಮುಂಡಿ ಬೆಟ್ಟದಲ್ಲಿರುವ ಶ್ರೀ ಚಾಮುಂಡೇಶ್ವರಿ ದೇವಾಲಯ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳ ಅಭಿವೃದ್ಧಿ, ನಿರ್ವಹಣೆಗಾಗಿ ಅಸ್ತಿತ್ವದಲ್ಲಿರುವ ಒಂದು ಪ್ರಾಧಿಕಾರವಾಗಿದ್ದು, ಇತ್ತೀಚೆಗೆ ಈ ಪ್ರಾಧಿಕಾರವನ್ನು ಸ್ಥಾಪಿಸಲು ಕರ್ನಾಟಕ ಸರ್ಕಾರವು ಹೊಸ ಕಾಯ್ದೆ ಜಾರಿಗೆ ತಂದಿತ್ತು. ಆದರೆ ಮೈಸೂರು ರಾಜಮನೆತನದ ಆಸ್ತಿ ವಿವಾದಗಳಿಂದಾಗಿ ಇದರ ರಚನೆ ನ್ಯಾಯಾಲಯದಲ್ಲಿ ಇದೆ.
ರಾಜವಂಶಸ್ಥರ ವಾದವೇನು?
ಚಾಮುಂಡೇಶ್ವರಿ ದೇವಿಯು ಮೈಸೂರಿನ ರಾಜವಂಶಸ್ಥರ ಮನೆ ದೇವರಾಗಿದ್ದು, ಮೈಸೂರಿನ ಮಹಾರಾಜರು ದೇವಾಲಯದ ಪೋಷಕರಾಗಿದ್ದರು. ಚಾಮುಂಡಿ ಬೆಟ್ಟದಲ್ಲಿರುವ ಶ್ರೀ ಚಾಮುಂಡಿ ದೇವಾಲಯ ಮತ್ತು ಮಹಾಬಲೇಶ್ವರ, ನಾರಾಯಣಸ್ವಾಮಿ, ಉತ್ತನಹಳ್ಳಿ ಜ್ವಾಲಾಮುಖಿ ಮತ್ತು ನಂದಿ ದೇವಾಲಯಗಳು ಹಿಂದಿನ ರಾಜವಂಶಸ್ಥರ ಖಾಸಗಿ ಸ್ವತ್ತಾಗಿವೆ. ದೇವಾಲಯಗಳು ಮತ್ತು ಅವುಗಳು ಆಸ್ತಿಯನ್ನು ಅಕ್ರಮವಾಗಿ ರಾಜ್ಯ ಸರ್ಕಾರ ವಶಕ್ಕೆ ಪಡೆಯುವುದಕ್ಕೆ ರಾಜವಂಸ್ಥರು ಆಕ್ಷೇಪಿಸಿದ್ದು, ಚಾಮುಂಡಿ ಬೆಟ್ಟದ ಮಾಲೀಕತ್ವಕ್ಕೆ ಸಂಬಂಧಿಸಿದ ಪ್ರಕರಣವು ಹೈಕೋರ್ಟ್‌ನ ವಿಭಾಗೀಯ ಪೀಠದಲ್ಲಿ ಮೇಲ್ಮನವಿಯ ರೂಪದಲ್ಲಿ ವಿಚಾರಣೆಗೆ ಬಾಕಿ ಇರುವಾಗ ರಾಜ್ಯ ಸರ್ಕಾರವು ಕಾಯಿದೆ ರೂಪಿಸಿರುವುದು ಕಾನೂನುಬಾಹಿರ. ಶಾಸಕಾಂಗದ ಸಮರ್ಥತೆ ಮೀರಿ ಕಾಯಿದೆ ರೂಪಿಸಲಾಗಿದ್ದು, ಕಾಯಿದೆಯ ನಿಬಂಧನೆಗಳು ಅಸಾಂವಿಧಾನಿಕವಾಗಿವೆ. ಆಕ್ಷೇಪಾರ್ಹ ಕಾಯಿದೆಯು ಅರ್ಜಿದಾರೆ ಪ್ರಮೋದಾ ದೇವಿ ಒಡೆಯರ್ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸಿರುವುದರಿಂದ ಅದನ್ನು ರದ್ದುಪಡಿಸಬೇಕು ಎಂದು ಕೋರಿದ್ದರು.
ಬೆಂಗಳೂರು : ಎಸ್‍ಎಸ್‍ಎಲ್‍ಸಿ ಪೂರ್ವಸಿದ್ಧತಾ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಿಧ ಜಿಲ್ಲೆಗಳ ಶಾಲಾ ಶಿಕ್ಷಕರು, ಸಹ ಶಿಕ್ಷಕರು,…
ಹನೂರು : ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಸನಿಹದಲ್ಲಿರುವ ತೊಳಸಿಕೆರೆ ಗ್ರಾಮದ ದುಮ್ಮತಂಬಡಿ ಅವರಿಗೆ ಸೇರಿದ ಹಸು ಜಮೀನಿನಲ್ಲಿ ಮೇಯುತ್ತಿದ್ದಾಗ…
ನಂಜನಗೂಡು : ʻಹತ್ತೂರು ಜಾತ್ರೆಗೆ ಸುತ್ತೂರು ಜಾತ್ರೆʼ ಸಮ ಎಂಬ ಗಾದೆ ಹೊಂದಿರುವ ಜಗದ್ಗುರು ಶ್ರೀ ಶಿವರಾತ್ರಿಶ್ವರ ಶಿವಯೋಗಿಗಳ ಜಾತ್ರಾ…
ಕಿಕ್ಕೇರಿ : ಗ್ರಾಮೀಣ ಬದುಕಿನ ಸವಾಲುಗಳ ನಡುವೆ ಬೆಳೆದ ರೈತನ ಮಗಳು ತನ್ನ ಅಕ್ಷರಾಸಕ್ತಿಯಿಂದ ಇಡೀ ತಾಲ್ಲೂಕಿನ ಹೆಮ್ಮೆಯ ಮಗಳಾಗಿ…
ಚಿಕ್ಕಾಡೆ ಗ್ರಾಮದಲ್ಲಿ ಘಟನೆ; ಮೂವರ ಬಂಧನ ಪಾಂಡವಪುರ : ಜಮೀನು ವಿಚಾರವಾಗಿ ದಾಯಾದಿಗಳ ನಡುವೆ ನಡೆಯುತ್ತಿದ್ದ ಕಲಹ ಕೊಲೆಯಲ್ಲಿ ಅಂತ್ಯ…
ಮಂಡ್ಯ : ತಾಲ್ಲೂಕಿನ ಕಚ್ಚಿಗೆರೆ ಗ್ರಾಮದ ದಲಿತ ಮಹಿಳೆ ರಜನಿ ಎಂಬವರ ಮೇಲೆ ಹಲ್ಲೆ ನಡೆಸಿ ದೌರ್ಜನ್ಯ ಎಸಗಿರುವ ಆರೋಪಿಗಳನ್ನು…