Mysore
28
clear sky

Social Media

ಶುಕ್ರವಾರ, 23 ಜನವರಿ 2026
Light
Dark

ಭಾಷಣ ಓದದೇ ತೆರಳಿದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌: ಕಾಂಗ್ರೆಸ್‌ ನಾಯಕರಿಂದ ಹೈಡ್ರಾಮಾ

ಬೆಂಗಳೂರು: ವಿಧಾನಸೌಧದಲ್ಲಿ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಬೇಕಿದ್ದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಕೇವಲ ಎರಡನೇ ಮಾತಿನಲ್ಲಿ ಭಾಷಣ ಮುಗಿಸಿ ತೆರಳಿದರು.

ನರೇಗಾ ಯೋಜನೆ ಹೆಸರು ಬದಲಾವಣೆ ಆಕ್ಷೇಪಿಸಿ ರಾಜ್ಯ ಸರ್ಕಾರ ಇಂದಿನಿಂದ ವಿಧಾನಮಂಡಲ ಜಂಟಿ ಅಧಿವೇಶನ ನಡೆಸುತ್ತಿದೆ.

ಭಾರೀ ಹೈಡ್ರಾಮಾ ಬಳಿಕ ಕೊನೆಗೂ ವಿಧಾನಸೌಧಕ್ಕೆ ಆಗಮಿಸಿದ್ದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು, ಎರಡನೇ ಮಾತಿನಲ್ಲಿ ಭಾಷಣ ಮುಗಿಸಿ ರಾಜ್ಯ ಸರ್ಕಾರ ಸಿದ್ಧಪಡಿಸಿದ್ದ ಭಾಷಣವನ್ನು ಓದದೇ ತೆರಳಿದರು.

ಈ ವೇಳೆ ಬಿ.ಕೆ.ಹರಿಪ್ರಸಾದ್‌ ಅವರು ರಾಜ್ಯಪಾಲರನ್ನು ಅಡ್ಡಗಟ್ಟಿ ಭಾಷಣವನ್ನು ಸಂಪೂರ್ಣವಾಗಿ ಓದುವಂತೆ ಆಗ್ರಹಿಸಿದ್ದಾರೆ. ಆದರೆ ಯಾವುದಕ್ಕೂ ಕ್ಯಾರೇ ಎನ್ನದೇ ರಾಜ್ಯಪಾಲರು ಅಲ್ಲಿಂದ ತೆರಳಿದ್ದಾರೆ.

ರಾಜ್ಯಪಾಲರ ನಡೆಗೆ ಆಕ್ರೋಶ ವ್ಯಕ್ತಪಡಿಸಿದ ಸಿಎಂ ಸಿದ್ದರಾಮಯ್ಯ ಅವರು, ಕೇಂದ್ರ ಸರ್ಕಾರ ಮನರೇಗಾ ಬದಲು ವಿಬಿ ರಾಮ ಜೀ ಹೆಸರು ತಂದಿದ್ದಾರೆ. ಅದನ್ನು ನಾವು ವಿರೋಧ ಮಾಡಿದ್ದೇವೆ. ಇದನ್ನು ಕೂಲಂಕುಷವಾಗಿ ಚರ್ಚಿಸಲೆಂದೇ ಜಂಟಿ ಅಧಿವೇಶನ ಕರೆದಿದ್ದೇವೆ. ಆದರೆ ರಾಜ್ಯಪಾಲರು ನಾವು ಸಿದ್ಧಪಡಿಸಿರುವ ಭಾಷಣವನ್ನು ಓದದೇ ತೆರಳಿದ್ದಾರೆ. ಇದು ಸರಿಯಲ್ಲ. ವರ್ಷದ ಮೊದಲ ಅಧಿವೇಶನದಲ್ಲಿ ರಾಜ್ಯಪಾಲರು ಭಾಷಣ ಮಾಡಬೇಕು ಎಂದು ರಾಜ್ಯಪಾಲರ ನಡೆಗೆ ಆಕ್ರೋಶ ವ್ಯಕ್ತಪಡಿಸಿದರು.

 

 

Tags:
error: Content is protected !!