ಬೆಂಗಳೂರು: ವಿಧಾನಸೌಧದಲ್ಲಿ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಬೇಕಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕೇವಲ ಎರಡನೇ ಮಾತಿನಲ್ಲಿ ಭಾಷಣ ಮುಗಿಸಿ ತೆರಳಿದರು.
ನರೇಗಾ ಯೋಜನೆ ಹೆಸರು ಬದಲಾವಣೆ ಆಕ್ಷೇಪಿಸಿ ರಾಜ್ಯ ಸರ್ಕಾರ ಇಂದಿನಿಂದ ವಿಧಾನಮಂಡಲ ಜಂಟಿ ಅಧಿವೇಶನ ನಡೆಸುತ್ತಿದೆ.
ಭಾರೀ ಹೈಡ್ರಾಮಾ ಬಳಿಕ ಕೊನೆಗೂ ವಿಧಾನಸೌಧಕ್ಕೆ ಆಗಮಿಸಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು, ಎರಡನೇ ಮಾತಿನಲ್ಲಿ ಭಾಷಣ ಮುಗಿಸಿ ರಾಜ್ಯ ಸರ್ಕಾರ ಸಿದ್ಧಪಡಿಸಿದ್ದ ಭಾಷಣವನ್ನು ಓದದೇ ತೆರಳಿದರು.
ಈ ವೇಳೆ ಬಿ.ಕೆ.ಹರಿಪ್ರಸಾದ್ ಅವರು ರಾಜ್ಯಪಾಲರನ್ನು ಅಡ್ಡಗಟ್ಟಿ ಭಾಷಣವನ್ನು ಸಂಪೂರ್ಣವಾಗಿ ಓದುವಂತೆ ಆಗ್ರಹಿಸಿದ್ದಾರೆ. ಆದರೆ ಯಾವುದಕ್ಕೂ ಕ್ಯಾರೇ ಎನ್ನದೇ ರಾಜ್ಯಪಾಲರು ಅಲ್ಲಿಂದ ತೆರಳಿದ್ದಾರೆ.
ರಾಜ್ಯಪಾಲರ ನಡೆಗೆ ಆಕ್ರೋಶ ವ್ಯಕ್ತಪಡಿಸಿದ ಸಿಎಂ ಸಿದ್ದರಾಮಯ್ಯ ಅವರು, ಕೇಂದ್ರ ಸರ್ಕಾರ ಮನರೇಗಾ ಬದಲು ವಿಬಿ ರಾಮ ಜೀ ಹೆಸರು ತಂದಿದ್ದಾರೆ. ಅದನ್ನು ನಾವು ವಿರೋಧ ಮಾಡಿದ್ದೇವೆ. ಇದನ್ನು ಕೂಲಂಕುಷವಾಗಿ ಚರ್ಚಿಸಲೆಂದೇ ಜಂಟಿ ಅಧಿವೇಶನ ಕರೆದಿದ್ದೇವೆ. ಆದರೆ ರಾಜ್ಯಪಾಲರು ನಾವು ಸಿದ್ಧಪಡಿಸಿರುವ ಭಾಷಣವನ್ನು ಓದದೇ ತೆರಳಿದ್ದಾರೆ. ಇದು ಸರಿಯಲ್ಲ. ವರ್ಷದ ಮೊದಲ ಅಧಿವೇಶನದಲ್ಲಿ ರಾಜ್ಯಪಾಲರು ಭಾಷಣ ಮಾಡಬೇಕು ಎಂದು ರಾಜ್ಯಪಾಲರ ನಡೆಗೆ ಆಕ್ರೋಶ ವ್ಯಕ್ತಪಡಿಸಿದರು.
ಚೆನ್ನೈ : ನಟ, ರಾಜಕಾರಣಿ ವಿಜಯ್ ಅವರ ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಪಕ್ಷಕ್ಕೆ ಚುನಾವಣಾ ಆಯೋಗವು ಗುರುವಾರ ಚಿಹ್ನೆ…
ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ತಾಳು ಬೆಟ್ಟದಿಂದ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…
ಬೆಂಗಳೂರು : ಮೊದಲ ವರ್ಷದ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು ಸಚಿವ ಸಂಪುಟ ಸಿದ್ಧಪಡಿಸಿದ ಭಾಷಣವನ್ನು ಓದದೇ, ಸಂವಿಧಾನದ ವಿಧಿಗಳನ್ನು ಉಲ್ಲಂಘನೆ…
ಸುತ್ತೂರು : ಕೇವಲ 1 ಎಕರೆ ಪ್ರದೇಶದಲ್ಲಿ ಸುಮಾರು 102 ಮಾದರಿಯ ವಿವಿಧ ತಳಿಯ ಬೆಳೆಗಳನ್ನು ಬೆಳೆಯಬಹುದೆಂಬುದನ್ನು ಸಾಬೀತು ಪಡಿಸಲಾಗಿದೆ.…
ದಕ್ಷಿಣ ಕನ್ನಡ: ದಕ್ಷಿಣ ಭಾರತದ ನಾಗರಾಧನೆಯ ಹೆಸರಾಂತ ಪುಣ್ಯಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣು ದೇವಸ್ಥಾನದ ಆದಾಯ 2025ರ ನವೆಂಬರ್ ಹಾಗೂ…
ಬೆಂಗಳೂರು: ಕಾಂಗ್ರೆಸ್ ಸರ್ಕಾರ ತನ್ನ ವೈಫಲ್ಯಗಳನ್ನು ಮುಚ್ಚಿಹಾಕಲು ಹಾಗೂ ದ್ವೇಷ ರಾಜಕಾರಣ ಮಾಡಲು ಸದನವನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ರಾಜ್ಯ…