ರಾಜ್ಯ

ರಾಜ್ಯಪಾಲರ ಭಾಷಣ ಯಶಸ್ವೀ ಸರ್ಕಾರದ ಯಶೋಗಾಥೆ: ಈಶ್ವರ ಖಂಡ್ರೆ

ಬೆಂಗಳೂರು: ರಾಜ್ಯಪಾಲರು ಉಭಯ ಸದನ ಉದ್ದೇಶಿಸಿ ಇಂದು ಮಾಡಿದ ಭಾಷಣ ಯಶಸ್ವೀ ಸರ್ಕಾರದ ಯಶೋಗಾಥೆಯಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.

ರಾಜ್ಯಪಾಲರ ಭಾಷಣಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಇದು ಸರ್ಕಾರದ ಸಾಧನೆಗಳನ್ನು ಸಮರ್ಥವಾಗಿ ತೆರೆದಿಟ್ಟಿರುವುದಲ್ಲದೇ, ಹೊಸ ಯೋಜನೆಗಳ ಮೂಲಕ ರಾಜ್ಯದ ಅಭಿವೃದ್ಧಿಗೆ ದಿಕ್ಸೂಚಿಯಾಗಿದೆ ಎಂಬುದನ್ನು ಭಾಷಣ ಸ್ಪಷ್ಟವಾಗಿ ಸಾರಿದೆ ಎಂದು ಹೇಳಿದ್ದಾರೆ.

ಗ್ಯಾರಂಟಿಗಳು ಮತ್ತು ಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನದಿಂದ ಅಸಮಾನತೆ ತಗ್ಗಿದ್ದರೆ, ರಾಜ್ಯವನ್ನು 1 ಟ್ರಿಲಿಯನ್ ಡಾಲರ್ ಆರ್ಥಿಕ ರಾಜ್ಯ ಮಾಡುವ ನಿಟ್ಟಿನಲ್ಲಿ ಸಮಗ್ರ ಹಾಗೂ ಸಮರ್ಥ ಪ್ರಯತ್ನ ಮಾಡುವ ಸಂಕಲ್ಪ ರಾಜ್ಯದ ಜನರಲ್ಲಿ ಮತ್ತು ಹೂಡಿಕೆದಾರರಲ್ಲಿ ಹೊಸ ಹುಮ್ಮಸ್ಸು ಮೂಡಿಸಿದೆ ಎಂದು ಖಂಡ್ರೆ ಹೇಳಿದ್ದಾರೆ.

ಕಲ್ಯಾಣ ಕರ್ನಾಟಕ ಪ್ರದೇಶವೂ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳು ಪ್ರಾದೇಶಿಕ ಅಸಮತೋಲದಿಂದ ನಲುಗಿವೆ. ಪ್ರಾದೇಶಿಕ ಅಸಮಾನತೆ ಹೋಗಲಾಡಿಸಲು 2002ರಲ್ಲಿ ರಚಿಸಲಾಗಿದ್ದ ಡಾ. ಡಿ.ಎಂ. ನಂಜುಂಡಪ್ಪ ವರದಿ ಆಧರಿಸಿ ಈವರೆಗೆ 37662 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ. ವೆಚ್ಚ ಮಾಡಿದ ಸಂಪನ್ಮೂಲದ ಪರಿಣಾಮ ಹಾಗೂ ಮುಂದುವರಿದ ಪ್ರಾದೇಶಿಕ ಅಸಮತೋಲನ ಕುರಿತು ಅಧ್ಯಯನ ಮಾಡಲು ನೇಮಕ ಮಾಡಲಾಗಿರುವ ಸಮಿತಿ ನೀಡುವ ವರದಿ ಆಧರಿಸಿ ಅಭಿವೃದ್ಧಿಗೆ ಮುಂದಾಗುವುದಾಗಿ ಘೋಷಿಸಿರುವುದು ಉತ್ತಮ ನಡೆಯಾಗಿದೆ.

ವಸತಿ ಸಮಸ್ಯೆಯ ಪರಿಹಾರಕ್ಕೆ, ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ, ಯುವಜನರ ಕೌಶಲ್ಯಾಭಿವೃದ್ಧಿಗೆ ರೂಪಿಸಿರುವ ಕಾರ್ಯಕ್ರಮಗಳ ಬಗ್ಗೆಯೂ ಭಾಷಣದಲ್ಲಿ ಪ್ರಸ್ತಾಪಿಸಲಾಗಿದ್ದು, ಇದೆಲ್ಲವೂ ಯುವ ಜನರಲ್ಲಿ ಹೊಸ ಚೈತನ್ಯ ಮೂಡಿಸುವುದರ ಜೊತೆಗೆ ರಾಜ್ಯದ ಅಭಿವೃದ್ಧಿಗೆ ಪೂರಕವಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಅರಣ್ಯ ಇಲಾಖೆಯ ಸಾಧನೆ ಪ್ರಸ್ತಾಪಕ್ಕೆ ಸಂತಸ:
ರಾಜ್ಯಪಾಲರ ಭಾಷಣದಲ್ಲಿ ಅರಣ್ಯ, ಪರಿಸರ ಇಲಾಖೆಯ ಕಾರ್ಯಸಾಧನೆಯ ಪ್ರಸ್ತಾಪ ಸಂತಸ ತಂದಿದೆ. ಅರಣ್ಯ ಒತ್ತುವರಿ ತೆರವು, ಹೊಸ ಅರಣ್ಯ ಪ್ರದೇಶದ ಸೇರ್ಪಡೆ, ಬೆಂಗಳೂರಿನಲ್ಲಿ ಹೊಸದಾಗಿ 153 ಎಕರೆ ಪ್ರದೇಶದಲ್ಲಿ ಬೃಹತ್ ಉದ್ಯಾನ ನಿರ್ಮಾಣ, ಬೆಂಗಳೂರು ನಗರದಲ್ಲಿ ಹಸಿರು ವಲಯ ಸಂರಕ್ಷಿಸಲು ಮತ್ತು ಪಕ್ಷಿಗಳ ನೆಲೆ ಕಾಪಾಡಲು 5678 ಎಕರೆ ಪ್ರದೇಶವನ್ನು ಗ್ರೇಟರ್ ಹೆಸರಘಟ್ಟ ಸಂರಕ್ಷಿತ ಹುಲ್ಲುಗಾವಲು ಎಂದು ಘೋಷಿಸಿರುವುದನ್ನೂ ರಾಜ್ಯಪಾಲರು ತಮ್ಮ ಭಾಷಣದಲ್ಲಿ ಪ್ರಸ್ತಾಪಿಸಿರುವುದು ಪರಿಸರ ಸಂರಕ್ಷಣೆಯ ತಮ್ಮ ಕಾರ್ಯಕ್ಕೆ ಮತ್ತಷ್ಟು ಸ್ಫೂರ್ತಿ ತಂದಿದೆ ಎಂದು ಈಶ್ವರ ಖಂಡ್ರೆ ಹೇಳಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಸಿಎಂಗೆ ವಿದ್ಯಾರ್ಥಿಗಳ ಪತ್ರ

ಮಹಾದೇಶ್ ಎಂ ಗೌಡ ಹನೂರು: ತಮ್ಮ ಊರಿನಿಂದ ದೂರದಲ್ಲಿರುವ ಶಾಲಾ ಕಾಲೇಜುಗಳಿಗೆ ಹೋಗುವುದಕ್ಕೆ ಸಮರ್ಪಕವಾಗಿ ಬಸ್ ಸೌಲಭ್ಯ ಕಲ್ಪಿಸಲು ಕೋರಿ…

34 mins ago

ದಿವ್ಯ ಎಂಬ ಅಂದಿನ ಕಾಲದ ಪಣ ಪರೀಕ್ಷೆ

ಬಿ.ಎಸ್.ವಿನಯ್ ಮೊನ್ನೆ ಯಳಂದೂರಿನ ಬೀದಿಯಲ್ಲಿ ಸಾಗುತ್ತಿದ್ದಾಗ ಬಳೆಮಂಟಪದ ಮುಂದೆ ಪರಿಚಿತ ಹಿರಿಯರೊಬ್ಬರು ಎದುರಾದರು. ‘ಯಜಮಾನರೇ, ಕಾರ್ಯಕ್ರಮಕ್ಕೆ ಯಾಕೆ ಬರಲಿಲ್ಲ?’ ಕೇಳಿದರೆ…

40 mins ago

ಎಮ್ಮೆ ನಿನಗೆ ಸಾಟಿ ಇಲ್ಲ…

ವಿನುತ ಕೋರಮಂಗಲ ನಮ್ಮ ಹಟ್ಟಿಯಿಂದ ನಾಲ್ಕೈದು ಕಿ.ಮೀ. ದೂರವಿರುವ ನಮ್ಮೂರಿನ ಕೆರೆಯ ಅಂಗಳಕ್ಕೆ ನಾವೇನು ನಡೆದುಕೊಂಡು ಹೋಗುತ್ತಿರಲಿಲ್ಲ. ಗಂಗೆ ಎಂದು…

44 mins ago

ಭಾನುವಾರದ ಪುರವಣಿಗಳಲ್ಲಿ ಸಾಹಿತ್ಯ ಯಾಕೆ ಮಾಯ?

ಅಕ್ಷತಾ ಖಾಲಿ ಹಾಳೆಯ ಒಂದೇ ಮಗ್ಗುಲಿನಲ್ಲಿ ಚಿತ್ತಿಲ್ಲದಂತೆ ಬರೆದು, ಪದ ಮಿತಿಯನ್ನು ಬೆರಳು ಲೆಕ್ಕದಲ್ಲಿ ಎಣಿಸಿ, ಪತ್ರಿಕೆಯ ವಿಳಾಸಕ್ಕೆ ಕಳುಹಿಸಿದ…

48 mins ago

ಹನೂರು: ಏಕಕಾಲದಲ್ಲೇ ಕಾಣಿಸಿಕೊಂಡ ಎರಡು ಚಿರತೆಗಳು

ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…

12 hours ago