ಬೆಂಗಳೂರು: ಕುಲಪತಿ ನೇಮಕಾತಿ ವಿಚಾರದಲ್ಲಿ ತಾವು ಹೇಳಿದ್ದೇ ನಡೆಯಬೇಕು ಎನ್ನುವ ಹಾಗೆ ರಾಜ್ಯಾಪಾಲರು ನಡೆದುಕೊಳ್ಳುತ್ತಿದ್ದಾರೆ ಎಂದು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದರು.
ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯಕ್ಕೆ ಕುಲಪತಿ ನೇಮಕ ವಿಚಾರದಲ್ಲಿ ಸಿಎಂಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋತ್ ಅವರ ನಡೆಗೆ ಆಕ್ಷೇಪ ವ್ಯಕ್ತಪಡಿಸಿದ ಪ್ರಿಯಾಂಕ್ ಖರ್ಗೆ ಅವರು, ಸದನ ಅಂಗೀಕರಿಸಿದ ಮಸೂದೆಗೆ ಕಿಮ್ಮತ್ತು ಇಲ್ಲವೇ ಎಂದು ಪ್ರಶ್ನಿಸಿದರು.
ಕುಲಪತಿ ನೇಮಕಾತಿ ವಿಚಾರದಲ್ಲಿ ಮುಕ್ತ ಅವಕಾಶಕ್ಕಾಗಿ ನಾವು ಮಸೂದೆ ಮಂಡಿಸಿ, ಎರಡೂ ಸದನಗಳಲ್ಲಿ ಅಂಗೀಕರಿಸಿದ್ದೇವೆ. ಆದರೆ, ರಾಜ್ಯಪಾಲರಿಗೆ ಇಷ್ಟ ಆಗಿಲ್ಲ ಎಂದಾದರೆ ನಾವೇನು ಮಾಡಲು ಆಗುತ್ತದೆ ಎಂದರು.
ಮಸೂದೆಗಳನ್ನ ಮಂಡಿಸಿ ಅಂಗೀಕರಿಸಲು ವಿಧಾನಸಭೆಯೇ ಸುಪ್ರೀಂ ಎಂದು ಸರ್ವೋಚ್ಛ ನ್ಯಾಯಾಲಯ ಹೇಳಿದೆ. ಆದರೂ, ರಾಜ್ಯಾಪಾಲರು ಒಪ್ಪದೇ ಇರುವುದು ದುರದೃಷ್ಟಕರ ಎಂದರು.
ನವದೆಹಲಿ: ಇಂದು ಸಂಜೆ ಐದು ರಾಜ್ಯಗಳ ವಿಧಾನಸಭೆ ಚುನಾವಣೆಗೆ ದಿನಾಂಕ ಪ್ರಕಟವಾಗುವ ಸಾಧ್ಯತೆಯಿದೆ. ಇಂದು ಸಂಜೆ ನಾಲ್ಕು ಗಂಟೆಗೆ ಕೇಂದ್ರ…
ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲ ಝಳ ಹೆಚ್ಚಾಗುತ್ತಿರುವ ಬೆನ್ನಲ್ಲೇ ಮೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…
ಮಹೇಶ್ ಕರೋಠಿ ಕಿಕ್ಕೇರಿ: ಇಲ್ಲಿಗೆ ಸಮೀಪದ ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕ್ಯಾತನಹಳ್ಳಿ ಗ್ರಾಮದಲ್ಲಿ ಕಳೆದ ೨-೩ ವರ್ಷಗಳಿಂದ ಹಲವು…
ನೆಂಟರಿಷ್ಟರು ಮನೆಗೆ ಬಂದರು ಎಂದರೆ... ಏನು ಎತ್ತ, ಹೇಗೆ ಅವರ ಆತಿಥ್ಯ? ಇಂಥ ಸಂಕಷ್ಟಗಳಿಗೆಲ್ಲಾ ಕಾರಣ,ಬಂದ್ ಆಗಿರುವ ಆ ಹಾರ್ಮುಜ್…
ಮೈಸೂರಿನಿಂದ ಎಚ್.ಡಿ.ಕೋಟೆ ಮಾರ್ಗದಲ್ಲಿ ಬರುವ ಮಾದಾಪುರ ಗ್ರಾಮದಿಂದ ಕೆ. ಬೆಳತ್ತೂರು ಹಾಗೂ ಲೆಂಕೆ ಗ್ರಾಮದವರೆಗೂ ರಸ್ತೆ ಡಾಂಬರೀಕರಣವಾಗಿದೆ. ಈ ರಸ್ತೆಯಲ್ಲಿ…
ಜಾತ್ರೆಗಳು ಹಾಗೂ ಹಬ್ಬಗಳು ಗ್ರಾಮದ ಎಲ್ಲಾ ಜನರು ಒಟ್ಟುಗೂಡಿ ಮಾಡುವ ಕಾರ್ಯಕ್ರಮವಾಗಿವೆ. ಇದರಲ್ಲಿ ಜನರ ಒಗ್ಗಟ್ಟು, ಪರಸ್ಪರ ಸಹಕಾರ ಕಾಣುತ್ತೇವೆ.…