ರಾಜ್ಯ

ತಾವು ಹೇಳಿದ್ದೇ ನಡೆಯಬೇಕೆನ್ನುವ ರಾಜ್ಯಾಪಲರು: ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಕುಲಪತಿ ನೇಮಕಾತಿ ವಿಚಾರದಲ್ಲಿ ತಾವು ಹೇಳಿದ್ದೇ ನಡೆಯಬೇಕು ಎನ್ನುವ ಹಾಗೆ ರಾಜ್ಯಾಪಾಲರು ನಡೆದುಕೊಳ್ಳುತ್ತಿದ್ದಾರೆ ಎಂದು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಆಕ್ರೋಶ ವ್ಯಕ್ತಪಡಿಸಿದರು.

ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‌ ರಾಜ್‌ ವಿಶ್ವವಿದ್ಯಾಲಯಕ್ಕೆ ಕುಲಪತಿ ನೇಮಕ ವಿಚಾರದಲ್ಲಿ ಸಿಎಂಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋತ್‌ ಅವರ ನಡೆಗೆ ಆಕ್ಷೇಪ ವ್ಯಕ್ತಪಡಿಸಿದ ಪ್ರಿಯಾಂಕ್‌ ಖರ್ಗೆ ಅವರು, ಸದನ ಅಂಗೀಕರಿಸಿದ ಮಸೂದೆಗೆ ಕಿಮ್ಮತ್ತು ಇಲ್ಲವೇ ಎಂದು ಪ್ರಶ್ನಿಸಿದರು.

ಕುಲಪತಿ ನೇಮಕಾತಿ ವಿಚಾರದಲ್ಲಿ ಮುಕ್ತ ಅವಕಾಶಕ್ಕಾಗಿ ನಾವು ಮಸೂದೆ ಮಂಡಿಸಿ, ಎರಡೂ ಸದನಗಳಲ್ಲಿ ಅಂಗೀಕರಿಸಿದ್ದೇವೆ. ಆದರೆ, ರಾಜ್ಯಪಾಲರಿಗೆ ಇಷ್ಟ ಆಗಿಲ್ಲ ಎಂದಾದರೆ ನಾವೇನು ಮಾಡಲು ಆಗುತ್ತದೆ ಎಂದರು.

ಮಸೂದೆಗಳನ್ನ ಮಂಡಿಸಿ ಅಂಗೀಕರಿಸಲು ವಿಧಾನಸಭೆಯೇ ಸುಪ್ರೀಂ ಎಂದು ಸರ್ವೋಚ್ಛ ನ್ಯಾಯಾಲಯ ಹೇಳಿದೆ. ಆದರೂ, ರಾಜ್ಯಾಪಾಲರು ಒಪ್ಪದೇ ಇರುವುದು ದುರದೃಷ್ಟಕರ ಎಂದರು.

ಆಂದೋಲನ ಡೆಸ್ಕ್

Recent Posts

ಕಾಡಾನೆ ದಾಳಿಗೆ 75 ತೆಂಗಿನ ಮರ ನಾಶ: ಬೆಳೆ ಪರಿಹಾರಕ್ಕೆ ರೈತ ಕುಟುಂಬದ ಮನವಿ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…

3 hours ago

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ

ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…

4 hours ago

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್ ನೀಡಿದ ಸುಪ್ರೀಂಕೋರ್ಟ್‌

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್‌ ಸೂಚನೆ ನೀಡಿದೆ.…

5 hours ago

ಕೋಟೆ ಟಿಎಪಿಸಿಎಂಎಸ್: ನಾಳೆ ಮೈತ್ರಿ ಪಕ್ಷದ 8 ಸದಸ್ಯರ ರಾಜೀನಾಮೆ ಭವಿಷ್ಯ ನಿರ್ಧಾರ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…

5 hours ago

ಓದುಗರ ಪತ್ರ: ಸಿಗಲಿ ನ್ಯಾಯ!

ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…

11 hours ago

ಓದುಗರ ಪತ್ರ: ಸರ್ಕಾರಿ ಶಾಲಾ, ಕಾಲೇಜುಗಳೆಂದರೆ ತಾತ್ಸಾರವೇಕೆ?

ಇತ್ತೀಚೆಗೆ ಮೈಸೂರಿನ ಪ್ರತಿಷ್ಠಿತ ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ ನಡೆದ ಅಂತರ ಕಾಲೇಜು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಭಾಗವಹಿಸಿದ್ದೆ. ನಗರದ ಸರ್ಕಾರಿ ಹಾಗೂ…

11 hours ago