ಬೆಳಗಾವಿ: ವಕ್ಫ್ ಆಸ್ತಿ ಆರೋಪಕ್ಕೆ ಸಂಬಂಧಿಸಿದಂತೆ ಅಲ್ಪಸಂಖ್ಯಾತರ ಆಯೋಗದ ಮಾಜಿ ಅಧ್ಯಕ್ಷ ಅನ್ವರ್ ಮಾಣಿಪ್ಪಾಡಿ ಅವರಿಗೆ 150 ಕೋಟಿ ರೂ. ಆಮಿಷವೊಡ್ಡಿರುವ ಬಗ್ಗೆ ರಾಜ್ಯ ಸರ್ಕಾರ ಸಿಬಿಐ ತನಿಖೆಗೆ ವಹಿಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಪ್ರಿಯಾಂಕ ಖರ್ಗೆ ಮಾಡಿರುವ ಆರೋಪ ಕುರಿತು ಅಧಿವೇಶನದಲ್ಲಿ ಮಾತನಾಡಿದ ವಿಜಯೇಂದ್ರ ಅವರು, ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ಪ್ರಿಯಾಂಕ್ ಅವರು ಹಿಂದಿನ ಅಲ್ಪಸಂಖ್ಯಾತರ ಆಯೋಗ ಅಧ್ಯಕ್ಷರ ಹೆಸರು ಹೇಳಿ ನನ್ನ ಮೇಲೆ ಆರೋಪ ಮಾಡಿದ್ದಾರೆ. ವಕ್ಫ್ ಆಸ್ತಿ ಕಬಳಿಕೆ ವಿಚಾರವಾಗಿ ಮಾಣಿಪ್ಪಾಡಿ ವರದಿ ನೀಡಿದ್ದರು. ನಂತರ ಉಪಲೋಕಾಯುಕ್ತ ನ್ಯಾ.ಆನಂದ್ 2016ರಲ್ಲಿ ವರದಿ ನೀಡಿದ್ದರು. ಆದರೆ ಅಂದಿನ ಸಿಎಂ ಈ ವರದಿಯನ್ನೆಲ್ಲಾ ಮುಚ್ಚಿ ಹಾಕಿದ್ದರು ಎಂದು ಆಡಳಿತ ಪಕ್ಷದ ವಿರುದ್ಧ ಆರೋಪಿಸಿದರು.
ಹಗರಣಗಳ ಸುಳಿಯಲ್ಲಿ ಸಿಲುಕಿರುವ ಸಿಎಂ ಸಿದ್ದರಾಮಯ್ಯ ಅವರು, ತಮ್ಮ ವಿರುದ್ಧದ ಆರೋಪಗಳನ್ನು ಬೇರೆಡೆಗೆ ತಿರುಗಿಸಲು ಈ ವಿಷಯಗಳನ್ನು ಮುನ್ನಲೆಗೆ ತರುತ್ತಿದ್ದಾರೆ ಎಂದು ಕಿಡಿಕಾರಿದರು.
ಸಿದ್ದರಾಮಯ್ಯ ಅವರಿಗೆ ಸಿಬಿಐ ಮೇಲೆ ತುಂಬಾ ವಿಶ್ವಾಸವಿದೆ ಎನ್ನುವ ಆಗಿದೆ. ಅವರಿಗೆ ಧೈರ್ಯವಿದ್ದರೆ 150 ಕೋಟಿ ರೂ. ಆಮಿಷದ ಆರೋಪದ ಜೊತೆಯಲ್ಲಿ ಅನ್ವರ್ ಮಾಣಿಪ್ಪಾಡಿ ಅನ್ವರ್ ವರದಿಯನ್ನು ಸಿಬಿಐಗೆ ವಹಿಸಲಿ ಎಂದು ಆಗ್ರಹಿಸಿದರು.
ಬೆಂಗಳೂರು: ಒಳಮೀಸಲಾತಿ ಬಗ್ಗೆ ಹಲವು ವರ್ಷಗಳಿಂದ ಇದ್ದ ಗೊಂದಲಗಳಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ತೆರೆ ಎಳೆದಿದೆ. ಸಿಎಂ ಸಿದ್ದರಾಮಯ್ಯ…
ಸೋಮವಾರಪೇಟೆ: ತಾಲೂಕಿನ ತೋಳೂರುಶೆಟ್ಟಳ್ಳಿ ಗ್ರಾಮದಲ್ಲಿನ ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು.…
ನವದೆಹಲಿ: ಆಮ್ ಆದ್ಮಿ ಪಕ್ಷಕ್ಕೆ ಬಿಗ್ ಶಾಕ್ ಎದುರಾಗಿದ್ದು, ರಾಘವ್ ಚಡ್ಡಾ ಸೇರಿದಂತೆ ಏಳು ರಾಜ್ಯಸಭಾ ಸಂಸದರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.…
ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಗೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.…
ಬೆಂಗಳೂರು: ಕೃಷಿ ಕ್ಷೇತ್ರದಲ್ಲಿನ ಹೊಸ ಬದಲಾವಣೆಗಳು ಪ್ರತಿ ರೈತರನ್ನೂ ತಲುಪಬೇಕು. ಈ ದಿಸೆಯಲ್ಲಿ ಎಫ್‌ಕೆಸಿಸಿಐನ ಪ್ರಯತ್ನ ಉತ್ತಮವಾಗಿದೆ ಎಂದು ಮುಖ್ಯಮಂತ್ರಿ…
ಬೆಂಗಳೂರು: ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ಬರೆಯುವ ವೇಳೆ ವಿದ್ಯಾರ್ಥಿನಿ ಮೂಗಿಗೆ ಟೇಪ್ ಹಾಕಿದ ಪ್ರಕರಣ ಮಾಸುವ ಮುನ್ನವೇ ಐವರು ವಿದ್ಯಾರ್ಥಿಗಳ…