Mysore
24
overcast clouds

Social Media

ಗುರುವಾರ, 09 ಏಪ್ರಿಲ 2026
Light
Dark

ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರ ಪ್ರಾಸಿಕ್ಯೂಷನ್‌ ಅನುಮತಿ ವಿಚಾರ: ಸಿಎಂ ಪರ ಬ್ಯಾಟ್‌ ಬೀಸಿದ ಕೇಂದ್ರ ಸಚಿವ ವಿ.ಸೋಮಣ್ಣ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ವಿ.ಸೋಮಣ್ಣ ಅವರು ಸಿಎಂ ಸಿದ್ದರಾಮಯ್ಯ ಪರ ಬ್ಯಾಟ್‌ ಬೀಸಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಸಿಎಂ ಆಗಿ ಮುಂದುವರೆದರೆ ನನ್ನಷ್ಟು ಖುಷಿ ಪಡುವ ವ್ಯಕ್ತಿ ಮತ್ತೊಬ್ಬರಿಲ್ಲ. ಸಿದ್ದರಾಮಯ್ಯ ಬುದ್ಧಿವಂತ, ನುರಿತ ರಾಜಕಾರಣಿ. ಮುಂದೆ ಏನು ಮಾಡಬೇಕು ಎಂಬುದು ಸಿದ್ದರಾಮಯ್ಯರಿಗೆ ಗೊತ್ತಿದೆ ಎಂದರು.

ನಾನು ಹಾಗೂ ಸಿಎಂ ಸಿದ್ದರಾಮಯ್ಯ ಅವರು ಬಹಳ ಆತ್ಮೀಯವಾಗಿ ಕೆಲಸ ಮಾಡಿದ್ದೇವೆ. ನಿನ್ನೆಯೂ ಸಹ ಸಿದ್ದರಾಮಯ್ಯರ ಜೊತೆ ಮಾತನಾಡಿದ್ದೇನೆ. ಪ್ರಾಸಿಕ್ಯೂಷನ್‌ಗೆ ಅನುಮತಿ ವಿಚಾರಕ್ಕೆ ಸಂಬಂಧಿಸಿದಂತೆ ಕಾನೂನು ಏನು ಹೇಳುತ್ತೋ ಅದು ಆಗುತ್ತೆ ಎಂದರು.

ಒಟ್ಟಾರೆ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದು, ಬಿಜೆಪಿ ನಾಯಕರು ಸಿದ್ದು ರಾಜೀನಾಮೆಗೆ ಆಗ್ರಹಿಸಿದ್ರೆ, ಇತ್ತ ಕೇಂದ್ರ ಸಚಿವ ವಿ.ಸೋಮಣ್ಣ ಸಿಎಂ ಪರ ಬ್ಯಾಟ್‌ ಬೀಸಿದ್ದಾರೆ.

Tags:
error: Content is protected !!