ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ವಿ.ಸೋಮಣ್ಣ ಅವರು ಸಿಎಂ ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಸಿಎಂ ಆಗಿ ಮುಂದುವರೆದರೆ ನನ್ನಷ್ಟು ಖುಷಿ ಪಡುವ ವ್ಯಕ್ತಿ ಮತ್ತೊಬ್ಬರಿಲ್ಲ. ಸಿದ್ದರಾಮಯ್ಯ ಬುದ್ಧಿವಂತ, ನುರಿತ ರಾಜಕಾರಣಿ. ಮುಂದೆ ಏನು ಮಾಡಬೇಕು ಎಂಬುದು ಸಿದ್ದರಾಮಯ್ಯರಿಗೆ ಗೊತ್ತಿದೆ ಎಂದರು.
ನಾನು ಹಾಗೂ ಸಿಎಂ ಸಿದ್ದರಾಮಯ್ಯ ಅವರು ಬಹಳ ಆತ್ಮೀಯವಾಗಿ ಕೆಲಸ ಮಾಡಿದ್ದೇವೆ. ನಿನ್ನೆಯೂ ಸಹ ಸಿದ್ದರಾಮಯ್ಯರ ಜೊತೆ ಮಾತನಾಡಿದ್ದೇನೆ. ಪ್ರಾಸಿಕ್ಯೂಷನ್‌ಗೆ ಅನುಮತಿ ವಿಚಾರಕ್ಕೆ ಸಂಬಂಧಿಸಿದಂತೆ ಕಾನೂನು ಏನು ಹೇಳುತ್ತೋ ಅದು ಆಗುತ್ತೆ ಎಂದರು.
ಒಟ್ಟಾರೆ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದು, ಬಿಜೆಪಿ ನಾಯಕರು ಸಿದ್ದು ರಾಜೀನಾಮೆಗೆ ಆಗ್ರಹಿಸಿದ್ರೆ, ಇತ್ತ ಕೇಂದ್ರ ಸಚಿವ ವಿ.ಸೋಮಣ್ಣ ಸಿಎಂ ಪರ ಬ್ಯಾಟ್ ಬೀಸಿದ್ದಾರೆ.
ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…
ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…
ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…
ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…
ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…