ಶಿವಮೊಗ್ಗ: ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯುಷನ್‌ಗೆ ಅನುಮತಿ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.
ಈ ಬಗ್ಗೆ ಶಿವಮೊಗ್ಗದಲ್ಲಿ ಮಾತನಾಡಿದ ಮಾಜಿ ಡಿಸಿಎಂ ಕೆ.ಎಸ್.ಈಶರಪ್ಪ ಅವರು, ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯುಷನ್‌ಗೆ ಅನುಮತಿ ಕೊಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಜಾಪ್ರಭುತ್ವದಲ್ಲಿ ಕಾನೂನಿಗೆ ಗೌರವ ಕೊಡಬೇಕು ಎಂದರು.
ನನ್ನ ಮೇಲೆ ಆಪಾದನೆ ಬಂದಾಗ ನಾನು ರಾಜೀನಾಮೆ ಕೊಟ್ಟು ತನಿಖೆಗೆ ಸಹಕಾರ ಕೊಟ್ಟಿದ್ದೇನೆ. ಹಾಗಾಗಿ ಸಿಎಂ ಸಿದ್ದರಾಮಯ್ಯ ಅವರು ಸಹ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ತನಿಖೆಗೆ ಸಹಕರಿಸಲಿ ಎಂದು ಆಗ್ರಹಿಸಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಈ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರ ಶ್ರೀಮತಿಯವರನ್ನು ಎಲ್ಲಿ ಸೇರಿಸಿಬಿಡುತ್ತಾರೋ ಎಂಬ ಅನುಮಾನವಿದೆ. ಪಾಪ ಅವರು ಗೌರಮ್ಮರ ರೀತಿ ಇದ್ದವರು. ಅವರ ಮೇಲೆ ಅಂತಹ ಆಪಾದನೆ ಬಾರದೇ ಇರಲಿ ಎಂದರು.
ಕಾನೂನಿಗೆ ಮುಂದೆ ಎಲ್ಲರೂ ಒಂದೇ. ಹಾಗಾಗಿ ಕಾನೂನಿಗೆ ತಲೆಬಾಗಲೇಬೇಕು. ಆದ್ದರಿಂದ ಸಿದ್ದರಾಮಯ್ಯ ಅವರು, ತನಿಖೆಗೆ ಸಹಕರಿಸುತ್ತಾರೆ ಎಂಬ ನಂಬಿಕೆಯಿದೆ ಎಂದರು.
‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…
ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…
ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…
ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್ ಅಕಾಡೆಮಿ ಮೈಸೂರು ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…
ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…