ರಾಜ್ಯ

ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದಾರೆ: ಸಚಿವ ಎಂ.ಬಿ.ಪಾಟೀಲ್‌ ಅಕ್ರೋಶ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯುಷನ್‌ಗೆ ಅನುಮತಿ ನೀಡಿರುವುದು ಷಡ್ಯಂತ್ರದ ಒಂದು ಭಾಗ ಎಂದು ಸಚಿವ ಎಂ.ಬಿ.ಪಾಟೀಲ್‌ ಕಿಡಿಕಾರಿದ್ದಾರೆ.

ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯುಷನ್‌ಗೆ ಅನುಮತಿ ನೀಡಿರುವ ಸಂಬಂಧ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದಾರೆ. ರಾಜಭವನ ಈಗ ಬಿಜೆಪಿ ಕಚೇರಿಯಾಗಿದೆ. ಈ ಬೆಳವಣಿಗೆಗಳಿಂದ ಬಿಜೆಪಿಯವರು ಮುಂದೆ ಪಶ್ಚಾತ್ತಾಪ ಪಡಬೇಕಾಗುತ್ತದೆ ಎಂದು ಕಿಡಿಕಾರಿದರು.

ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ರಾಜಭವನಕ್ಕೆ ಸಮರ್ಪಕ ಮಾಹಿತಿ ಕೊಟ್ಟಿದ್ದರು. ಆದರೂ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ಅವರಿಗೆ ನೋಟೀಸ್‌ ಕೊಟ್ಟರು. ಆಗಲೇ ನಮ್ಮ ಪಕ್ಷದವರಿಗೆ ರಾಜ್ಯಪಾಲರ ವಿರುದ್ಧ ಅನುಮಾನ ಬಂದಿತ್ತು. ಇದನ್ನು ರಾಜ್ಯದ ಜನತೆ ಸಹಿಸಿಕೊಳ್ಳುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರದ ಬಿಜೆಪಿ ಸರ್ಕಾರ ಕರ್ನಾಟಕವನ್ನು ಗುರಿ ಮಾಡಿಕೊಂಡು ರಾಜಕಾರಣ ಮಾಡುತ್ತಿದೆ. ನಮ್ಮ ಪಕ್ಕಕ್ಕೆ ಹೆಚ್ಚಿನ ಬಹುಮತ ಬಂದಿರುವ ಕಾರಣಕ್ಕೆ ಇದನ್ನು ಸಹಿಸಲು ಆಗುತ್ತಿಲ್ಲ. ಹೀಗಾಗಿ ಸಿಎಂ ಸಿದ್ದರಾಮಯ್ಯ ಅವರ ಮೇಲೆ ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಸಿದ್ದರಾಮಯ್ಯನವರ ಕುಟುಂಬಕ್ಕೆ ಬದಲಿ ನಿವೇಶನ ಕೊಟ್ಟಿದ್ದು ಬಿಜೆಪಿ ಸರ್ಕಾರ. ವಸ್ತುಸ್ಥಿತಿ ಹೀಗಿರುವಾಗ ಸಿದ್ದರಾಮಯ್ಯರನ್ನು ಬಲಿಪಶು ಮಾಡಲು ಸಂಚು ನಡೆಸುತ್ತಿರುವುದು ಖಂಡನೀಯ ಎಂದು ಕಿಡಿಕಾರಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಅರಳುವ ಪ್ರತಿಭೆಗಳಿಗೆ ಸಮಯ ಹೆಚ್ಚು ಸಿಗಲಿ

ಖ್ಯಾತನಾಮರಿಗೆ ವೇದಿಕೆಯ ಕಾರ್ಯಕ್ರಮದಲ್ಲಿ ಸ್ವಲ್ಪ ಕಡಿಮೆ ಸಮಯ ದೊರೆತರೂ ಪರವಾಗಿಲ್ಲ. ಅರಳುವ ಪ್ರತಿಭೆಗಳಿಗೆ ಸಾಕಷ್ಟು ಸಮಯ ಸಿಗಬೇಕೆಂಬ ಆಶಯ ಇರಬೇಕೆಂದು…

31 mins ago

ಅಗಲಿದ ದೃಶ್ಯಬ್ರಹ್ಮ ಸಿಂಗೀತಂ, ‘ನಟಸಮ್ರಾಟ್’ ನಾನಾ

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ   ಜಲಸಂರಕ್ಷಣೆಯ ಬೃಹತ್ ಕ್ರಾಂತಿಯನ್ನೇ ಮಾಡಿದ ಪಾಟೇಕರ್ ಭಾರತೀಯ ಚಿತ್ರರಂಗದ ಇತಿಹಾಸದಲ್ಲಿ ಕೆಲವೊಮ್ಮೆ ಕಾಲವು ತರುವ…

32 mins ago

ಮಹಾಲಯ ಅಮಾವಾಸ್ಯೆಗೆ ಮ.ಬೆಟ್ಟ ಸಜ್ಜು

ಮಹಾದೇಶ್ ಎಂ.ಗೌಡ ೩ ದಿನಗಳ ಜಾತ್ರೆಗೆ ಲಕ್ಷಾಂತರ ಭಕ್ತರ ಆಗಮನ ನಿರೀಕ್ಷೆ; ಪ್ರಾಧಿಕಾರದಿಂದ ಸಕಲ ಸಿದ್ಧತೆ  ಹನೂರು: ಮಹಾಲಯ ಅಮಾವಾಸ್ಯೆ…

38 mins ago

ಮಹೇಂದ್ರನ ಸುತ್ತ ಅನುಮಾನದ ಹುತ್ತ!

ಚಿರಂಜೀವಿ ಸಿ.ಹುಲ್ಲಹಳ್ಳಿ ಕಬಿನಿ ಕಿಂಗ್ ಮಹೇಂದ್ರ ತಾಲೀಮು ಅರ್ಧಕ್ಕೆ ಮೊಟಕು ಆತಂಕದಲ್ಲಿ ದಸರಾ ಗಜಪಡೆಯ ಅಭಿಮಾನಿಗಳು ಮೈಸೂರು: ಮಹಾಭಾರತದ ಭೀಮನ…

46 mins ago

ನಲ್ಲೂರು ಅಮಾನಿ ಕೆರೆಗೆ ಹರಿದು ಬಂದ ನೀರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ ವ್ಯಾಪ್ತಿಯಲ್ಲಿ ಕೃಪೆ ತೋರಿದ ವರುಣ ಮಳೆ ಮುಂದುವರಿದರೆ ತಾಲ್ಲೂಕಿನ ದೊಡ್ಡ ಕೆರೆ ತುಂಬುವುದು ಖಚಿತ  ಗುಂಡ್ಲುಪೇಟೆ:…

51 mins ago

ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು: ಸಿಎಂ ಡಿಕೆಶಿ ಬಾಂಬ್

ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

15 hours ago