ರಾಜ್ಯ

ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ಕೇಳಿದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ತಮ್ಮ ಪತ್ನಿ ಪಾರ್ವತಿ ಅವರಿಗೆ ನಿವೇಶನ ಹಂಚಿಕೆ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಸಿಎಂ ಸಿದ್ದರಾಮಯ್ಯರಿಂದ ಪ್ರತಿಕ್ರಿಯೆ ಕೇಳಿದ್ದಾರೆ.

ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ವರ್ಗಾಯಿಸಲು ಮತ್ತು ಸಿಎಂ ರಾಜೀನಾಮೆಗೆ ಕೋರಿ ಬಿಜೆಪಿ ಶಾಸಕರ ನಿಯೋಗ ಜುಲೈ.25ರಂದು ರಾಜ್ಯಪಾಲರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿತ್ತು.

ಈ ಹಿನ್ನೆಲೆಯಲ್ಲಿ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು, ಸಿಎಂ ಸಿದ್ದರಾಮಯ್ಯರಿಂದ ಉತ್ತರ ಕೇಳುವುದು ಅನಿವಾರ್ಯ. ಹೀಗಾಗಿ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯಗೆ ಪ್ರತಿಕ್ರಿಯೆ ನೀಡುವಂತೆ ಸೂಚಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಗೃಹ ಸಚಿವ ಪರಮೇಶ್ವರ್‌ ಅವರು, ಇದು ರಾಜಕೀಯ ಪ್ರೇರಿತ ಎಂದು ನಂಬಲು ಕಾರಣವಿದೆ ಎಂದು ಆರೋಪಿಸಿದ್ದಾರೆ.
ಒಂದು ವೇಳೆ ರಾಜ್ಯಪಾಲರು ಶೋಕಾಸ್‌ ನೋಟಿಸ್‌ ನೀಡಲು ಮುಂದಾದರೆ ನಾವು ಇದನ್ನು ರಾಜಕೀಯ ಪ್ರೇರಿತ ಎಂದು ಪರಿಗಣಿಸಬೇಕಾಗುತ್ತದೆ ಎಂದು ಹೇಳಿದ್ದಾರೆ.

ಇನ್ನು ರಾಜ್ಯಪಾಲರ ನಡೆಗೆ ಕಾಂಗ್ರೆಸ್‌ ಶಾಸಕರು ಹಾಗೂ ಸಚಿವರು ಕೂಡ ಕಿಡಿಕಾರಿದ್ದು, ಇದು ರಾಜಕೀಯ ಪ್ರೇರಿತ ಎಂದು ವಾಗ್ದಾಳಿ ನಡೆಸಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಭಾಷೆ, ಬದುಕು ಕಲಿಸಿದ ನನ್ನಪ್ಪ

ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…

11 mins ago

ಗಾಂಧಿ ಅಭಿಯಾನ ಅರಿವಿನ ಯಾನ | ಮತಗಳ ಪರಿಚಯ

ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…

26 mins ago

ರೆಟ್ರೋ ಫೋಟೋಗಳ ಹೊಸ ಅಲೆ

ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…

39 mins ago

ಮಹಾಪಂಚ್‌ ಕಾರ್ಟೂನ್‌

  ಮಹಾಪಂಚ್‌ ಕಾರ್ಟೂನ್‌ | ಸೆಪ್ಟಂಬರ್‌ 12 ಶನಿವಾರ

42 mins ago

ಒಳ್ಳೆಯತನಕ್ಕೂ ಕೆಟ್ಟತನಕ್ಕೂ ಜಾತಿ ಮಾನದಂಡ ಅಲ್ಲ

ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…

47 mins ago

ಓದುಗರ ಪತ್ರ | ‘ಅಕ್ಕ’ ಸಮ್ಮೇಳನದಲ್ಲೂ ‘ನಂದಿನಿ’ ಮಿಂಚಿಂಗ್!

ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…

54 mins ago