ಬೆಂಗಳೂರು: ವಿಧಾನಮಂಡಲದಲ್ಲಿ ಅನುಮೋದನೆ ಪಡೆದಿದ್ದ 3 ವಿಧೇಯಕಗಳಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅಂಕಿತ ಹಾಕಿದ್ದಾರೆ.
ಕರ್ನಾಟಕ ಸಾರ್ವಜನಿಕ ಪರೀಕ್ಷಾ ವಿಧೇಯಕ, ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ, ಕರ್ನಾಟಕ ಪುರಸಭೆಗಳು ಹಾಗೂ ಇತರೆ ಕಾನೂನು ವಿಧೇಯಕಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸಹಿ ಹಾಕಿದ್ದಾರೆ.
ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಅವರು, ಕೆಲವು ಸ್ಪಷ್ಟನೆ ಕೇಳಿ ವಿಧೇಯಕಗಳನ್ನು ರಾಜ್ಯಪಾಲರು ವಾಪಸ್ ಕಳುಹಿಸಿದ್ದರು. ಸರ್ಕಾರದ ಸ್ಪಷ್ಟನೆ ನಂತರ ವಿಧೇಯಕಗಳಿಗೆ ಅಂಕಿತ ಸಿಕ್ಕಿದೆ ಎಂದು ತಿಳಿಸಿದ್ದಾರೆ.
ಇನ್ನು 11 ವಿಧೇಯಕಗಳ ಪೈಕಿ 3 ವಿಧೇಯಕಗಳಿಗೆ ರಾಜ್ಯಪಾಲರು ಅಂಕಿತ ಹಾಕಿದ್ದು, ಇನ್ನೂ 8 ವಿಧೇಯಕಗಳೀಗೆ ಅನುಮೋದನೆ ಪಡೆಯುವುದು ಬಾಕಿ ಇದೆ.