ರಾಜ್ಯ

ಸರ್ಕಾರಿ ಶಾಲೆಯಲ್ಲಿ ಓದುವ ಪಿಯು ಮಕ್ಕಳಿಗೆ ಉಚಿತ ನೀಟ್‌ ತರಬೇತಿ: ಮಧು ಬಂಗಾರಪ್ಪ

ಬೆಂಗಳೂರು: ಸರ್ಕಾರಿ ಕಾಲೇಜುಗಳಲ್ಲಿ ಓದುವ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಅನೇಕ ಯೋಜನೆಗಳು ರೂಪಿಸುತ್ತಿದೆ.

ಸರ್ಕಾರಿ ಕಾಲೇಜುಗಳಲ್ಲಿ ಓದುವ ವಿದ್ಯಾರ್ಥಿಗಳಿಗೆ ಉಚಿತ ನೀಟ್-ಸಿಇಟಿ ತರಬೇತಿ ನೀಡುವ ಕಾರ್ಯಕ್ರಮವನ್ನು ಈ ವರ್ಷದಿಂದ ಶಿಕ್ಷಣ ಇಲಾಖೆ ಜಾರಿ ಮಾಡಲು ಮುಂದಾಗಿದೆ.

ಈ ಬಗ್ಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರತಿಕ್ರಿಯೆ ನೀಡಿದ್ದು, 25 ಸಾವಿರ ಮಕ್ಕಳಿಗೆ ತರಬೇತಿ ನೀಡಲಾಗುತ್ತಿದೆ. ಈ ಯೋಜನೆಗೆ 12 ಕೋಟಿ ರೂಪಾಯಿ ಖರ್ಚು ಮಾಡುತ್ತಿದ್ದೇವೆ. ಈ ವರ್ಷದಿಂದಲೇ ತರಬೇತಿ ಕಾರ್ಯಕ್ರಮ ನಡೆಯಲಿದೆ. ಆನ್‌ಲೈನ್‌ನಲ್ಲೂ ತರಬೇತಿ ನಡೆಯಲಿದೆ ಎಂದು ಮಾಹಿತಿ ನೀಡಿದರು.

ವಿದ್ಯಾರ್ಥಿಗಳಿಗೆ ಉಚಿತವಾಗಿಯೇ ಸರ್ಕಾರದ ಕಡೆಯಿಂದ ತರಬೇತಿ ನೀಡಲಾಗುತ್ತದೆ. ಈ ಮೂಲಕ ವಿದ್ಯಾರ್ಥಿಗಳಿಗೆ ತುಂಬಾ ಅನುಕೂಲವಾಗಲಿದ್ದು, ನಮ್ಮ ಸರ್ಕಾರ ವಿದ್ಯಾರ್ಥಿಗಳ ಏಳಿಗೆಗೆ ಶ್ರಮ ವಹಿಸುತ್ತಿದೆ ಎಂದರು.

ಇದರ ಜೊತೆಗೆ 8, 9 ಹಾಗೂ 10ನೇ ತರಗತಿ ವಿಜ್ಞಾನ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ನೀಡುವ ಮರು ಸಿಂಚನ ಕಾರ್ಯಕ್ರಮ ಜಾರಿ ಮಾಡಲಾಗಿದೆ. ಇದರಿಂದ ವಿದ್ಯಾರ್ಥಿಗಳಿಗೆ ತುಂಬಾ ಅನುಕೂಲವಾಗಲಿದೆ ಎಂದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ನಮ್ಮ ತಂದೆ ಯಾವುದೇ ತಪ್ಪು ಮಾಡಿಲ್ಲ: ಯತೀಂದ್ರ ಸಿದ್ದರಾಮಯ್ಯ

ಮೈಸೂರು: “ನಮ್ಮ ತಂದೆ ಯಾವುದೇ ತಪ್ಪು ಮಾಡಿಲ್ಲ. ಹಾಗಾಗಿಯೇ ಅವರು ಧೈರ್ಯವಾಗಿ ಮಾತನಾಡುತ್ತಿದ್ದಾರೆ!” ಸ್ಟಿಂಗ್ ಕಾರ್ಯಾಚರಣೆ ವಿಚಾರವಾಗಿ ಮೈಸೂರಿನಲ್ಲಿ ಯತೀಂದ್ರ…

7 hours ago

ನಮ್ಮದು ಸೌಜನ್ಯದ ಭೇಟಿಯಷ್ಟೇ: ಮಾಜಿ ಸಿಎಂ ಸಿದ್ದರಾಮಯ್ಯ

ಮೈಸೂರು:  ಭೇಟಿ ಮಾಡೋಕೆ ಬರ್ತಾರೆ ಕಣಯ್ಯ… ಅದರಲ್ಲೇನು?” ರಮೇಶ್ ಜಾರಕಿಹೊಳಿ ಹಾಗೂ ನರೇಂದ್ರ ಸ್ವಾಮಿ ಭೇಟಿ ವಿಚಾರವಾಗಿ ಮಾಧ್ಯಮಗಳು ಕೇಳಿದ…

7 hours ago

ಸ್ಟೇ ತಗೋಬಾರದಿತ್ತು, ಫೈಟ್ ಮಾಡಬೇಕಿತ್ತು – ಮೈಸೂರಿನಲ್ಲಿ ಸಿದ್ದು ಭೇಟಿಯಾದ ರಮೇಶ್‌ ಜಾರಕಿಹೊಳಿ

ಮೈಸೂರು: “ಸ್ಟೇ ತಗೋಬಾರದಿತ್ತು, ಧೈರ್ಯವಾಗಿ ಫೈಟ್ ಮಾಡಬೇಕಿತ್ತು!” ವಿವಾದಿತ ಸ್ಟಿಂಗ್ ಕಾರ್ಯಾಚರಣೆ ವಿಚಾರದಲ್ಲಿ ಸಿದ್ದರಾಮಯ್ಯ ಅವರ ನಡೆ ಕುರಿತು ಮಾಜಿ…

7 hours ago

ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಯಲ್ಲಿ ಈ ಬಾರಿ ಚಿನ್ನದ ಅಂಬಾರಿ ಹೊರಲಿದ್ದಾನೆ ಪ್ರಶಾಂತ

ಮೈಸೂರು: ಅಭಿಮನ್ಯು ಆನೆ ನಿವೃತ್ತಿಯಾದ ಬಳಿಕ ದಸರಾ ಗಜಪಡೆಯ ಮುಂದಿನ ಕ್ಯಾಪ್ಟನ್ ಯಾರು ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಭಾರೀ ಕುತೂಹಲ…

7 hours ago

ರೇಣುಕಾಸ್ವಾಮಿಗೆ ಕುಟುಕು ಜೀವ; ದರ್ಶನ್ ರೋಷ ಭಾವ

ರೇಣುಕಾಸ್ವಾಮಿ ಕತ್ತಿನ ಮೇಲೆ ಕಾಲಿಟ್ಟು ಅದುಮುತ್ತಿದ್ದ ದರ್ಶನ್ ತನ್ನ ಕೈಯಲ್ಲಿದ್ದ ಸಿಗರೇಟ್‌ನಿಂದ ರೇಣುಕಾಸ್ವಾಮಿಯ ಎದೆಯ ಭಾಗಕ್ಕೆ ಸುಟ್ಟರು  " ನಾನು…

8 hours ago

ರೇಣುಕಾಸ್ವಾಮಿ ಎದೆಯ ಮೇಲೆ ನಿಂತು ಅದುಮುತ್ತಿದ್ದ ದರ್ಶನ್

ಕಾಫಿ ಜೊತೆ ಸಿಗರೇಟ್ ಸೇದುತ್ತಾ ದಿಢೀರನೆ ಬಂದು ಒದ್ದ ದರ್ಶನ್, ನಂತರ ಮರ್ಮಾಂಗಕ್ಕೆ ಎರಡು ಬಾರಿ ಒದೆತ ರೇಣುಕಾಸ್ವಾಮಿಗೆ ಬೀಳುತ್ತಿದ್ದ…

8 hours ago