ರಾಜ್ಯ

ಮಾರ್ಚ್.‌11ರಿಂದ ಸರ್ಕಾರಿ ವೈದ್ಯರ ಮುಷ್ಕರ

ಬೆಂಗಳೂರು: ಸರ್ಕಾರದ ಶಿಸ್ತುಕ್ರಮಕ್ಕೂ ಕ್ಯಾರೆ ಎನ್ನದ ಸರ್ಕಾರಿ ವೈದ್ಯರು ತಮ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ರಾಜ್ಯಾದ್ಯಂತ ಮಾ.11ರಿಂದ ನಡೆಸಲು ಉದ್ದೇಶಿಸಿರುವ ಮುಷ್ಕರದಿಂದ ಹಿಂದೆ ಸರಿಯದಿರಲು ತೀರ್ಮಾನಿಸಿದ್ದಾರೆ.

ಕರ್ತವ್ಯಕ್ಕೆ ಗೈರು ಹಾಜರಾಗುವ ಸರ್ಕಾರಿ ಆಸ್ಪತ್ರೆಗಳ ವೈದ್ಯರ ವಿರುದ್ಧ ಶಿಸ್ತು ಕ್ರಮ ಜರುಗಿಸುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹಾಗೂ ಇಲಾಖೆಯ ಪ್ರಧಾನಕಾರ್ಯದರ್ಶಿ ಹರ್ಷಗುಪ್ತ ಎಚ್ಚರಿಕೆ ಕೊಟ್ಟಿದ್ದರು.

ಆದರೆ ಸರ್ಕಾರದ ಯಾವುದೇ ಎಚ್ಚರಿಕೆಗೂ ಬಗ್ಗದ ಕರ್ನಾಟಕ ವೈದ್ಯಕೀಯ ಸಂಘಗಳು ಈಗಾಗಲೇ ತೀರ್ಮಾನಿಸಿರುವಂತೆ ಮಾ.11ರಂದು ರಾಜ್ಯದ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ಜಿಲ್ಲಾ ಆರೋಗ್ಯ ಕೇಂದ್ರಗಳಲ್ಲೂ ಒಪಿಡಿ ಸೇವೆಯನ್ನು ಬಂದ್ ಮಾಡಿ ಅನಿರ್ದಿಷ್ಟ ಅವಧಿವರೆಗೆ ಮುಷ್ಕರವನ್ನು ನಡೆಸಲು ಒಮ್ಮತದ ತೀರ್ಮಾನಕ್ಕೆ ಬಂದಿದ್ದಾರೆ.

ವೈದ್ಯರ ವಿರುದ್ಧ ಸರ್ಕಾರ ಶಿಸ್ತುಕ್ರಮ ಸೇರಿದಂತೆ ಸೇವೆಯಿಂದ ಅಮಾನತುಪಡಿಸುವುದು, ವಜಾಗೊಳಿಸುವುದು ಇಲ್ಲವೇ ಅಗತ್ಯ ಸೇವಾ ನಿರ್ವಹಣಾ ಕಾಯ್ದೆ(ಎಸ್ಮಾ) ಜಾರಿ ಮಾಡಿದರೂ ಸರಿಯೇ ನಾವು ಮುಷ್ಕರದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಸಂಘದ ಪದಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಈಗಲೂ ಕಾಲ ಮಿಂಚಿಲ್ಲ. ಸರ್ಕಾರ ವೈದ್ಯರ ಬೇಡಿಕೆಗಳನ್ನು ಸಕಾರಾತ್ಮಕವಾಗಿ ಪರಿಗಣಿಸಿ ಮಾತುಕತೆಗೆ ಆಹ್ವಾನಿಸಿದರೆ ಮಾತುಕತೆಗೆ ಸಿದ್ದರಿದ್ದೇವೆ. ಅದನ್ನು ಬಿಟ್ಟು ಶಿಸ್ತು ಕ್ರಮ ಇಲ್ಲವೇ ಕಾನೂನಿನ ಮೂಲಕ ಬೆದರಿಸಲು ಬಂದರೆ ನಾವು ಹೆದರುವುದಿಲ್ಲ ಎನ್ನುತ್ತಿದ್ದಾರೆ ವೈದ್ಯಾಧಿಕಾರಿಗಳು.

ನಾವು ಸರ್ಕಾರದ ಮುಂದಿಟ್ಟಿರುವ ಬೇಡಿಕೆಗಳು ನಿನ್ನೆ-ಮೊನ್ನೆಯದಲ್ಲ. ಹಲವಾರು ವರ್ಷಗಳ ಬೇಡಿಕೆ ಇದಾಗಿದೆ. ಈಗ ನಾಳೆ ಎನ್ನುತ್ತಲೇ ಕಾಲಹರಣ ಮಾಡುತ್ತಿದೆ. ನಾವು ಸಾಕಷ್ಟು ತಾಳೆಯಿಂದಲೇ ಕರ್ತವ್ಯಕ್ಕೆ ಹಾಜರಾಗಿದ್ದೇವೆ. ಪುನಃ ಅದೇ ರೀತಿ ನಮನ್ನು ಬೆದರಿಸಲು ಬಂದರೆ ಈ ಬಾರಿ ಹೆದರುವುದಿಲ್ಲ ಎಂದು ಹೇಳುತ್ತಿದ್ದಾರೆ.

ನಮ್ಮನ್ನು ಜೈಲಿಗಟ್ಟಿದರೂ ಸರಿಯೇ. ಮುಷ್ಕರ ಕೈಬಿಡುವುದಿಲ್ಲ. ಸಚಿವರು ಮತ್ತು ಅಧಿಕಾರಿಗಳು ತಕ್ಷಣವೇ ಮಾತುಕತೆಗೆ ಆಹ್ವಾನಿಸಿದರೆ ಚರ್ಚೆಗೆ ಸಿದ್ದರಿದ್ದೇವೆ. ಆದರೆ ಸರ್ಕಾರ ನಮನ್ನು ಕಾನೂನಿನ ಮೂಲಕ ಕಟ್ಟಿ ಹಾಕಲು ಮುಂದಾದರೆ ನಮಗೂ ಕೂಡ ಕಾನೂನು ಮೂಲಕವೇ ಹೋರಾಟ ನಡೆಸಲು ಗೊತ್ತು ಎಂದು ಪದಾಧಿಕಾರಿಗಳು ತಿಳಿಸಿದ್ದಾರೆ.

 

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ವೈಯಕ್ತಿಕ ದ್ವೇಷ: ಕಾರ್ಮಿಕನನ್ನು ಕೊಲೆಗೈಯ್ದು ಶರಣಾದ ಆರೋಪಿ

ಚೆಟ್ಟಳ್ಳಿ: ಕಾಫಿ ತೋಟದ ಲೈನ್ ಮನೆಯಲ್ಲಿ ವಾಸವಿದ್ದ ಕಾರ್ಮಿಕನೊಬ್ಬ ಮತ್ತೊಬ್ಬ ಕಾರ್ಮಿಕನನ್ನು ಹತ್ಯೆಗೈದು ಪೊಲೀಸ್ ಠಾಣೆಗೆ ಬಂದು ಶರಣಾದ ಘಟನೆ…

2 mins ago

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರೇ ಈಗ ರಾಜ್ಯಸಭೆ ಅಭ್ಯರ್ಥಿ

ನವದೆಹಲಿ: ರಾಜ್ಯಸಭೆ ಚುನಾವಣೆಗೆ ಬಿಜೆಪಿ 9 ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತಿನ್‌ ನಬಿನ್‌ ಅವರು ಬಿಹಾರದಿಂದ…

8 mins ago

ದುಬೈನಲ್ಲಿ ಸಿಲುಕಿರುವ ಕನ್ನಡಿಗರಿಗೆ ವಿಡಿಯೋ ಕಾಲ್‌ ಮಾಡಿ ಧೈರ್ಯ ಹೇಳಿದ ವಿಜಯೇಂದ್ರ

ಬೆಂಗಳೂರು: ಅಮೇರಿಕಾ, ಇಸ್ರೇಲ್‌-ಇರಾನ್‌ ಯುದ್ಧ ನಡೆಯುತ್ತಿರುವ ಸಂದರ್ಭದಲ್ಲಿ ದುಬೈನಲ್ಲಿ ಸಿಲುಕಿ ಆತಂಕದಲ್ಲಿರುವ ಕನ್ನಡಿಗರ ಜೊತೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮಾತನಾಡಿ…

27 mins ago

ಬೂದಬಾಳು ಗ್ರಾಮದ ಕೆರೆಗೆ ಬಾಗಿನ ಸಮರ್ಪಿಸಿದ ಶಾಸಕ ಎಂ.ಆರ್.ಮಂಜುನಾಥ್

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬರಪೀಡಿತ ಪ್ರದೇಶಗಳಲ್ಲಿ ಒಂದಾದ ಬೂದಬಾಳು ಕೆರೆಗೆ ಕಾವೇರಿ ನದಿ ಮೂಲದಿಂದ…

40 mins ago

ಸರ್ಕಾರದಿಂದ ಸಿಗುವ ಸೌಲಭ್ಯವನ್ನು ಪ್ರತಿಯೊಬ್ಬ ರೈತರಿಗೂ ದೊರಕಿಸಿ: ಬಿಜೆಪಿ ಜಿಲ್ಲಾಧ್ಯಕ್ಷ ನಿರಂಜನ್ ಕುಮಾರ್

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಷೇರುದಾರರು ನಿಮ್ಮ ಮೇಲೆ ವಿಶ್ವಾಸವಿಟ್ಟು ಕೃಷಿ ಪತ್ತಿನ ಸಹಕಾರ ಸಂಘದ…

1 hour ago

ಹಾರ್ಮುಜ್‌ ಜನಸಂಧಿಯನ್ನು ಮುಚ್ಚಿದ ಇರಾನ್: ತೈಲ ಬೆಲೆಯಲ್ಲಿ ಭಾರೀ ಏರಿಕೆ

ಟೆಹರಾನ್:‌ ಅಮೇರಿಕಾ ಹಾಗೂ ಇಸ್ರೇಲ್‌ ದೇಶಗಳು ಇರಾನ್‌ ಜೊತೆ ನಡೆಸುತ್ತಿರುವ ಯುದ್ಧವು ಇದೀಗ ವಿಶ್ವದ ಅತ್ಯಂತ ನಿರ್ಣಾಯಕ ಇಂಧನ ಮಾರ್ಗಗಳಲ್ಲಿ…

1 hour ago