ಬೆಂಗಳೂರು: ಒಂದೆಡೆ ಗ್ಯಾರಂಟಿ ಯೋಜನೆಗಳನ್ನು ನೀಡುವ ರಾಜ್ಯ ಸರ್ಕಾರ ಇನ್ನೊಂದೆಡೆ ಬೆಲೆ ಏರಿಕೆಯನ್ನು ಮಾಡುತ್ತಲೇ ಬಂದಿದೆ ಎಂಬ ಸಾರ್ವಜನಿಕರ ಆರೋಪ ಕೇಳಿಬರುತ್ತಿದೆ.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಈಗಾಗಲೇ ಮೂರ್ನಾಲ್ಕು ಬಾರಿ ಮದ್ಯದ ದರವನ್ನು ಏರಿಕೆ ಮಾಡಲಾಗಿದೆ. ಇದೀಗ ಐದನೇ ಬಾರಿಗೆ ಅಬಕಾರಿ ಸುಂಕವನ್ನು ಪರಿಷ್ಕರಿಸಲು ಸರ್ಕಾರ ಸಜ್ಜಾಗಿದ್ದು, ಮೇ.1ರಿಂದ ಹೊಸ ದರಗಳು ಜಾರಿಗೆ ಬರಲಿದೆ.
ರಾಜ್ಯದ ಮದ್ಯ ಅಬಕಾರಿ ತೆರಿಗೆ ವ್ಯವಸ್ಥೆಯನ್ನು ಪರಿಶೀಲಿಸಲು ಕರ್ನಾಟಕ ಸರ್ಕಾರ ರಚಿಸಿದ್ದ ಸಂಪನ್ಮೂಲ ಸಂಗ್ರಹ ಸಮಿತಿ ಇತ್ತೀಚೆಗೆ ತನ್ನ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದೆ. ಈ ವರದಿಯಲ್ಲಿ ಮದ್ಯದ ಅಂಶದ ಆಧಾರದ ಮೇಲೆ ತೆರಿಗೆ ವಿಧಿಸಲು ಶಿಫಾರಸು ಮಾಡಲಾಗಿತ್ತು. ಹೀಗಾಗಿ ಶೀಘ್ರದಲ್ಲೇ ಅಬಕಾರಿ ತೆರಿಗೆ ಪರಿಷ್ಕರಣೆಯಾಗಲಿದ್ದು, ಮದ್ಯದ ದರ ಏರಿಕೆಯಾಗುವ ಸಾಧ್ಯತೆಯಿದೆ.
ಒಂದು ಫುಲ್ ಬಾಟಲ್ ಮದ್ಯದ ಮೇಲೆ ಎಂಆರ್‌ಪಿ ದರದಲ್ಲಿ ಸುಮಾರು 50 ರಿಂದ 100 ರೂಪಾಯಿಗಳಷ್ಟು ಹೆಚ್ಚಳವಾಗಲಿದ್ದು, ಬಾರ್ ಮತ್ತು ರೆಸ್ಟೋರೆಂಟ್‌ಗಳಲ್ಲಿ ಸರ್ವಿಸ್ ಚಾರ್ಜ್ ಸೇರಿ ಈ ಹೊರೆ ಮತ್ತಷ್ಟು ಹೆಚ್ಚಾಗಲಿದೆ.
ಕಳೆದ ಮೂರು ವರ್ಷಗಳ ಅವಧಿಯಲ್ಲಿ ಐದನೇ ಬಾರಿಗೆ ದರ ಏರಿಕೆ ಮಾಡುತ್ತಿರುವುದಕ್ಕೆ ಮದ್ಯಪ್ರಿಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರ ತನ್ನ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಕುಡುಕರನ್ನೇ ಟಾರ್ಗೆಟ್ ಮಾಡುತ್ತಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.
ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…
ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…
ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…
ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…
ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…