ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಗಾಂಧಿವಾದದಿಂದ ಮಾವೋವಾದಕ್ಕೆ ಹೊರಳಿದೆ ಎಂದು ಮಾಜಿ ಸಚಿವ ವಿ.ಸುನೀಲ್ ಕುಮಾರ್ ಸರ್ಕಾರದ ನಕ್ಸಲ್ ಪ್ಯಾಕೇಜ್ ಬಗ್ಗೆ ಮತ್ತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ಪ್ರಕಟಣೆ ಹೊರಡಿಸಿರುವ ಅವರು, ಫೇಸ್‌ಬುಕ್‌ನಲ್ಲಿ ಸರ್ಕಾರದ ನಡೆಯನ್ನು ಖಂಡಿಸಿದರೆ ಪ್ರಕರಣ ದಾಖಲಿಸಿ ಜೈಲಿಗೆ ಕಳುಹಿಸುವವರು, ಈಗ ಬಂದೂಕು ಹಿಡಿದು ಗುಂಡಿಟ್ಟು ಭಯ ಸೃಷ್ಟಿಸುವವರಿಗೆ ಹೂಗುಚ್ಚ ಕೊಟ್ಟು ಸ್ವಾಗತಿಸಿ ಸಮೋಸಾ ನೀಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಿಎಂ ಸಿದ್ದರಾಮಯ್ಯ ಅವರ ಗೃಹ ಕಚೇರಿ ಅರ್ಬನ್ ನಕ್ಸಲರ ಪಾಲಿಟ್ ಬ್ಯೂರೋ ಆಗಿ ಬದಲಾಗಿದೆ. ಖುದ್ದು ಸಿದ್ದರಾಮಯ್ಯನವರೇ ಅರ್ಬನ್ ನಕ್ಸಲರ ಕೋರ್ ಕಮಿಟಿ ಸದಸ್ಯರಾಗಿದ್ದಾರೆ. ಕಾಂಗ್ರೆಸ್ ತತ್ವ- ಸಿದ್ಧಾಂತ ಅರ್ಬನ್ ನಕ್ಸಲರು ಹೈಜಾಕ್ ಮಾಡಿದ್ದಾರೆ ಎಂದು ಟೀಕಿಸಿದ್ದಾರೆ.
ಅಮಾಯಕರಿಗೆ ಕ್ಷಮಾದಾನ ನೀಡಲೇಬಾರದು ಎಂಬುದು ನಮ್ಮ ವಾದವಲ್ಲ. ಆದರೆ ಶರಣಾದ ರೀತಿ, ಪ್ಯಾಕೇಜ್ ಘೋಷಣೆ ವಿಧಾನ, ಪ್ರಕರಣ ರದ್ಧತಿ ವಿಚಾರದಲ್ಲಿ ಸರ್ಕಾರ ನಡೆದುಕೊಂಡ ರೀತಿಯ ಬಗ್ಗೆ ಆಕ್ಷೇಪವಿದೆ. ಸಿದ್ದರಾಮಯ್ಯನವರ ಕೋರ್ ಕಮಿಟಿ ಸದಸ್ಯರು ಸಾಮಾಜಿಕ ಜಾಲತಾಣದಲ್ಲಿ ಎಷ್ಟೇ ಅರಚಿದರೂ ನಾವು ಹೆದರುವುದಿಲ್ಲ. ಅಷ್ಟಕ್ಕೂ ಬೇಕಾಬಿಟ್ಟಿ ಪ್ಯಾಕೇಜ್ ಘೋಷಿಸುವುದಕ್ಕೆ ರಾಜ್ಯದ ಬೊಕ್ಕಸದ ಹಣ ಯಾರದೋ ಜಮೀನು ನುಂಗಿ- ನೀರು ಕುಡಿದು ಸಂಪಾದಿಸಿದ ಸ್ವಯಾರ್ಜಿತ ಸೈಟಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಶರಣಾಗತಿ ಪ್ರಕ್ರಿಯೆ ಬಗ್ಗೆ ಸಾಕಷ್ಟು ಅನುಮಾನಗಳಿವೆ. ವಿಕ್ರಮ್ ಗೌಡ ಎನ್ ಕೌಂಟರ್ ಬಳಿಕ ಅರ್ಬನ್ ನಕ್ಸಲರು ಶರಣಾಗತಿ ಪ್ರಕ್ರಿಯೆ ಬಗ್ಗೆ ನಡೆಸಿದ ಪ್ರಹಸನದಲ್ಲಿ ಸಿಎಂ ನಿರ್ದೇಶನದ ಭಾಗವೆಷ್ಟು ಎಂಬುದು ಬಹಿರಂಗವಾಗಬೇಕು ಎಂದು ಆಗ್ರಹಿಸಿದ್ದಾರೆ.
ಒಂದೆಡೆ ನಕ್ಸಲ್ ಶರಣಾಗತಿ ಬಗ್ಗೆ ಮಾತನಾಡುವ ಸರ್ಕಾರ, ಅರಣ್ಯ ವಾಸಿಗಳಿಗೆ ಪುನರ್ಸತಿ ಬಗ್ಗೆ ಯಾವ ನಿಲುವು ಹೊಂದಿದೆ ಎಂಬುದನ್ನೂ ಸ್ಪಷ್ಟಪಡಿಸಲಿ ಎಂದು ಒತ್ತಾಯಿಸಿದ್ದಾರೆ.
ಅರ್ಧ ಶತಮಾನಕ್ಕೂ ಹಿಂದಿನ ಕಾಲದ ಚಿತ್ರಗಳು ಓ.ಎಲ್.ನಾಗಭೂಷಣ ಸ್ವಾಮಿ ದೇವನೂರ ಮಹಾದೇವ ಕನ್ನಡಿಗರ ಮನಸಿನಲ್ಲಿ ಮನೆ ಮಾಡಿರುವವರು. ಒಬ್ಬೊಬ್ಬರೂ ಮಹಾದೇವರ…
ದೇಮ ಎಂಬ ನೈತಿಕ ಕೈಮರ ಸುರೇಶ ಕಂಜರ್ಪಣೆ ಅಂದಕಾಲತ್ತಿಲೇ ನಾನು ಅರಕಲಗೂಡಲ್ಲಿ ಪಾಠ ಮಾಡುತ್ತಿದ್ದಾಗ ಅಲ್ಲಿನ ದೇವಸ್ಥಾನದಲ್ಲಿ ಶಿವರಾತ್ರಿಯಂದು ನಡೆದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅಂತರ್ಜಲ ಮಟ್ಟ ಹೆಚ್ಚಳ ಮಾಡುವ ನಿಟ್ಟಿನಲ್ಲಿ ಮಳೆಯ ನೀರು ಸಂಗ್ರಹಿಸಲು…
ಮಂಡ್ಯ: ಬೇಸಿಗೆ ರಜೆ ಹಾಗೂ ವೀಕೆಂಡ್ ಹಿನ್ನೆಲೆಯಲ್ಲಿ ಮಂಡ್ಯ ಭಾಗದ ಪ್ರವಾಸಿ ತಾಣಗಳಾದ ಬಲಮುರಿ ಮತ್ತು ಎಡಮುರಿ ತಾಣಗಳಿಗೆ ನಿಷೇಧ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮೇವು ನೀರು ಅರಸಿ ಜಮೀನಿನತ್ತ ಬಂದಿದ್ದ ಜಿಂಕೆಯೊಂದರ ಮೇಲೆ ಬೀದಿ…
ನವೀನ್ ಡಿಸೋಜ ಜಿಲ್ಲೆಯಲ್ಲಿ ಸು.೧೭೪,೧೧೪ ಕುಟುಂಬಗಳು, ಗಣತಿ ಕಾರ್ಯಕ್ಕೆ ಗುರುತು, ೭,೩೭೯ ಕುಟುಂಬಗಳಿಂದ ಸ್ವಯಂ ಗಣತಿ ಮಡಿಕೇರಿ: ನಮ್ಮ ಗಣತಿ,…