ಹಾವೇರಿ: ನರ್ಸ್ ಆಗಿದ್ದ ಸ್ವಾತಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ 5 ಲಕ್ಷ ರೂ ಪರಿಹಾರ ಘೋಷಣೆ ಮಾಡಲಾಗಿದೆ.
ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಸಚಿವ ಶಿವಾನಂದ್ ಪಾಟೀಲ್ ಅವರು ಈ ಆದೇಶ ಹೊರಡಿಸಿದ್ದಾರೆ.
ಕಳೆದ ಕೆಲ ದಿನಗಳ ಹಿಂದೆ ರಟ್ಟಿಹಳ್ಳಿ ತಾಲ್ಲೂಕಿನ ಮಾಸೂರು ಗ್ರಾಮದ ಸ್ವಾತಿ ಎಂಬುವವರು ಹತ್ಯೆಗೀಡಾಗಿದ್ದರು.
ಪ್ರಕರಣ ಸಂಬಂಧ ಸಿಎಂ ಸಿದ್ದರಾಮಯ್ಯ ಅವರನ್ನು ಶಾಸ ಯು.ಬಿ.ಬಣಕಾರ್ ಅವರೊಂದಿಗೆ ಸಚಿವ ಶಿವಾನಂದ್ ಪಾಟೀಲ್ ಭೇಟಿಯಾಗಿದ್ದರು.
ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದರು. ಶಾಸಕ ಹಾಗೂ ಸಚಿವರ ಮನವಿಗೆ ಸ್ಪಂದಿಸಿದ ಸಿಎಂ ಸಂತ್ರಸ್ತೆ ಕುಟುಂಬಕ್ಕೆ 5 ಲಕ್ಷ ರೂ ಪರಿಹಾರ ಬಿಡುಗಡೆ ಮಾಡಿದ್ದಾರೆ.





