ಬೆಂಗಳೂರು: ರಾಜ್ಯ ಸರ್ಕಾರಕ್ಕೆ ಶಾಕ್ ಮೇಲೆ ಶಾಕ್ ಎದುರಾಗಿದ್ದು, ಸರ್ಕಾರಿ ಸಾರಿಗೆ ನೌಕರರು ಮುಷ್ಕರಕ್ಕೆ ಪ್ಲಾನ್ ಮಾಡಿದ್ದಾರೆ.
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸರ್ಕಾರಿ ಸಾರಿಗೆ ನೌಕರರು ಮುಷ್ಕರಕ್ಕೆ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಂಡಿದ್ದು, ಒಂದು ವೇಳೆ ಬೇಡಿಕೆ ಈಡೇರಿಸದಿದ್ದರೆ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ನಿಗಮದ ಒಕ್ಕೂಟಗಳು ಬಂದ್‌ಗೆ ಕರೆ ನೀಡುತ್ತವೆ ಎಂದು ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಬಸ್ ಸಂಚಾರ ಬಂದ್ ಮಾಡಲು ಸಾರಿಗೆ ನೌಕರರು ಮುಂದಾಗುತ್ತಿದ್ದಾರೆ.
ಸಾರಿಗೆ ನೌಕರರು ಸರ್ಕಾರದ ಮುಂದೆ ಪ್ರಮುಖ ಬೇಡಿಕೆಗಳನ್ನು ಇಟ್ಟಿದ್ದಾರೆ. ಸಾರಿಗೆ ನೌಕರರಿಗೆ ಸರ್ಕಾರಿ ನೌಕರರಂತೆ ಸರಿ ಸಮಾನ ವೇತನ ನೀಡಬೇಕು. 38 ತಿಂಗಳ ವೇತನ ಹಿಂಬಾಕಿ ನೀಡಬೇಕು. ಕಾರ್ಮಿಕ ಸಂಘಟನೆಗಳ ಚುನಾವಣೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.