ಹುಬ್ಬಳ್ಳಿ: ಪಂಚಮಸಾಲಿ ಮೀಸಲಾತಿಗೆ ಆಗ್ರಹಿಸಿ ಬೆಳಗಾವಿಯಲ್ಲಿ ಹೋರಾಟ ಮಾಡಿದವರು ಗೂಂಡಾಗಳಾಗಿರಲಿಲ್ಲ ಹೋರಾಟಗಾರರಾಗಿದ್ದರು. ಆದರೆ, ಸರ್ಕಾರದಿಂದ ಅವರ ಮೇಲೆ ನಡೆಸಿದ ದೌರ್ಜನ್ಯ ಖಂಡನೀಯವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜಿಲ್ಲೆಯಲ್ಲಿ ಇಂದು(ಡಿಸೆಂಬರ್.15) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪೊಲೀಸರು ಲಾಠಿ ಬೀಸಿದ್ದಾರೆ ಎಂದರೆ, ಮುಖ್ಯಮಂತ್ರಿ ಸಿದ್ದರಾಮಯ್ಯರೇ ಅದಕ್ಕೆ ಬಾಧ್ಯಸ್ಥರು. ಹೋರಾಟದ ವಿಚಾರವಾಗಿ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ್ ಹಾಗೂ ಅರವಿಂದ ಬೆಲ್ಲದ್ ಹಾಗೂ ಬಸವಜಯ ಮೃತ್ಯುಂಜಯ ಸ್ವಾಮೀಜಿ ನನಗೆ ಕರೆ ಮಾಡಿದ್ದರು. ಅಲ್ಲದೇ ನನಗೆ ಬಂದಿರುವ ಮಾಹಿತಿ ಪ್ರಕಾರ ಹೋರಾಟಗಾರರು ಪ್ರತಿಭಟನೆ ಮಾಡುತ್ತಿದ್ದರು. ಆ ವೇಳೆ ಪೊಲೀಸರು ಕನಿಷ್ಠ ಬಲಪ್ರಯೋಗ ಮಾಡಬಹುದಿತ್ತು. ಆದರೆ ಗರಿಷ್ಠ ಬಲ ಪ್ರಯೋಗ ಮಾಡಿ ಶತ್ರುಗಳ ಹಾಗೇ ವರ್ತಿಸಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇನ್ನು ಕೋವಿಡ್ ಸಂದರ್ಭದಲ್ಲಿ ಅವ್ಯವಹಾರ ನಡೆದಿದೆ ಎಂದು ಸಿಎಂ ಸಿದ್ದರಾಮಯ್ಯ ಬೆದರಿಸುವ ತಂತ್ರ ಮಾಡುತ್ತಿದ್ದಾರೆ. ಇದಕ್ಕೆಲ್ಲಾ ನಾವು ಹೆದರಲ್ಲವೆಂದ ಕೂಡಲೇ ಪ್ರಕರಣ ದಾಖಲಿಸಿ ತನಿಖೆಯೆನ್ನುತ್ತ ಯಾರಾದ್ದೋ ಹೆಸರು ಹೇಳುತ್ತಿದ್ದಾರೆ. ಆದರೆ ಕಾಂಗ್ರೆಸ್ ಸರ್ಕಾರ ಅನಗತ್ಯವಾಗಿ ಮಾಜಿ ಸಿಎಂಗಳಾದ ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಮಾಜಿ ಸಚಿವ ಕೆ.ಸುಧಾಕರ್ ಹೆಸರು ಹೇಳುತ್ತಿದ್ದಾರೆ. ಹೀಗಾಗಿ ಸಿದ್ದರಾಮಯ್ಯ ವಿರುದ್ಧ ಅವರೆಲ್ಲಾ ಮಾನಹಾನಿ ಪ್ರಕರಣ ದಾಖಲಿಸುವಂತಾಗಬೇಕು ಎಂದು ಹೇಳಿದ್ದಾರೆ.
ಕೆ.ಬಿ.ರಮೇಶನಾಯಕ ರಾಜ್ಯ ಸರ್ಕಾರದ ಗಡುವಿನೊಳಗೆ ಪ್ರಕ್ರಿಯೆ ಮುಗಿಸಲು ಇಲಾಖೆ ಕಸರತ್ತು. ಮೈಸೂರು: ನಕಲಿ ಫಲಾನುಭವಿಗಳನ್ನು ಕೈಬಿಟ್ಟು ಪಾರದರ್ಶಕತೆ ಕಾಯ್ದುಕೊಳ್ಳಲು ಹಾಗೂ…
ಹಾಸನ: ಇಡೀ ದೇಶವೇ ಅಲ್ಲೋಲ, ಕಲ್ಲೋಲ ಆಗುವ ಸುದ್ದಿ ಕೊಡುತ್ತೇನೆ ಎಂಬ ಮಾತನ್ನು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪುನರುಚ್ಛರಿಸಿದ್ದಾರೆ. ಈ…
ಇಸ್ಲಾಮಾಬಾದ್: ಉಗ್ರ ಮಸೂದ್ ಅಜರ್ ಸುಳಿವು ಕೊಟ್ಟವರಿಗೆ 24 ಲಕ್ಷ ರೂ ಬಹುಮಾನ ನೀಡುವುದಾಗಿ ಪಾಕಿಸ್ತಾನ ಘೋಷಣೆ ಮಾಡಿದೆ. ದೇಶದ…
ಬೆಂಗಳೂರು: ಮುಂಗಾರು ಮಳೆಯ ಅಬ್ಬರ ಕಾಣಬೇಕಿದ್ದ ಸೆಪ್ಟೆಂಬರ್ ತಿಂಗಳಲ್ಲೇ ಕರ್ನಾಟಕದಲ್ಲಿ ಬಿರು ಬೇಸಿಗೆಯ ವಾತಾವರಣ ನಿರ್ಮಾಣವಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ…
ಮಂಡ್ಯ: ಮೈಸೂರು ದಸರಾಗಿಂತಲೂ ಪುರಾತನವಾದ ಶ್ರೀರಂಗಪಟ್ಟಣ ದಸರಾವನ್ನು ಈ ಬಾರಿ ಬರಗಾಲದ ಹಿನ್ನೆಲೆಯಲ್ಲಿ ಅದ್ದೂರಿತನದ ಬದಲು ಸಾಂಪ್ರದಾಯಿಕವಾಗಿ ಆಚರಿಸಲು ತೀರ್ಮಾನಿಸಲಾಗಿದೆ…