ಬೆಂಗಳೂರು: ರಾಜ್ಯ ಸರ್ಕಾರ ಮಹತ್ವದ ಆದೇಶವೊಂದನ್ನು ಹೊರಡಿಸಿದ್ದು, ಇನ್ನು ಮುಂದೆ ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಿಸುವಂತಿಲ್ಲ ಎಂದು ಮಹತ್ವದ ಆದೇಶ ಹೊರಡಿಸಿದೆ.
ಈ ಬಗ್ಗೆ ಸುತ್ತೋಲೆ ಹೊರಡಿಸಿರುವ ರಾಜ್ಯ ಸರ್ಕಾರ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಶಾಲಾ ಸಂಸ್ಥೆಗಳಲ್ಲಿ ಸಿಬ್ಬಂದಿ, ಅಧಿಕಾರಿಗಳು, ಖಾಸಗಿ ವ್ಯಕ್ತಿಗಳು ಅಂದ್ರೆ, ಸೆಲೆಬ್ರಿಟಿಗಳು, ಗಣ್ಯವ್ಯಕ್ತಿಗಳು ಹಾಗೂ ಅವರ ಮಕ್ಕಳ ಹುಟ್ಟುಹಬ್ಬ ಆಚರಿಸದಂತೆ ಆದೇಶ ಹೊರಡಿಸಿದೆ.
ಗಣ್ಯ ವ್ಯಕ್ತಿಗಳು ತಮ್ಮ ಮಕ್ಕಳ ಹುಟ್ಟುಹಬ್ಬವನ್ನು ಕೇಕ್ ಕತ್ತರಿಸಿ ಆಚರಿಸಿಕೊಳ್ಳುತ್ತಾರೆ. ಇದರಿಂದ ಶಾಲೆಯಲ್ಲಿ ಓದುತ್ತಿರುವ ಮಕ್ಕಳಿಗೆ ನಮ್ಮ ಹುಟ್ಟುಹಬ್ಬವನ್ನು ಈ ರೀತಿ ಆಚರಿಸಿಕೊಳ್ಳಲು ಸಾಧ್ಯವಾಗ್ತಿಲ್ಲ ಎಂದು ಬೇಜಾರಾಗುತ್ತೆ.
ಈ ಎಲ್ಲಾ ಬೆಳವಣಿಗೆಗಳಿಂದ ಮಕ್ಕಳ ಮನಸ್ಸಿಗೆ ಆಘಾತವಾಗಿ ಮಕ್ಕಳ ಮನಸ್ಸು ದುರ್ಬಲವಾಗುವ ಸಂಭವ ಹೆಚ್ಚಾಗಿರುತ್ತದೆ. ಹೀಗಾಗಿ ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಣೆ ಮಾಡದಂತೆ ಆದೇಶ ಹೊರಡಿಸಲಾಗಿದೆ ಅಂತಾ ಸುತ್ತೋಲೆಯಲ್ಲಿ ತಿಳಿಸಲಾಗಿದೆ.
ಒಟ್ಟಾರೆಯಾಗಿ ರಾಜ್ಯ ಸರ್ಕಾರದ ಈ ಆದೇಶವನ್ನು ಎಲ್ಲಾ ಶಾಲೆಗಳು ಅನುಸರಿಸಲೇಬೇಕು. ಒಂದು ವೇಳೆ ಸರ್ಕಾರದ ಆದೇಶವನ್ನು ಪಾಲಿಸದಿದ್ದಲ್ಲಿ ಅಂತಹ ಶಾಲೆ ಮುಖ್ಯಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ.
ನಂಜನಗೂಡು : ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಮಹಿಳೆಯ ಕುಟುಂಬಕ್ಕೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ನೆರವು ನೀಡಿದ್ದಾರೆ. ನಂಜನಗೂಡು…
ಶಿವಮೊಗ್ಗ : ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ಘಾಟ್ ಪ್ರದೇಶದಲ್ಲಿ ರಸ್ತೆ ಅಗಲೀಕರಣ ಮತ್ತು ತಡೆಗೋಡೆ ದುರಸ್ತಿ ಕಾಮಗಾರಿ ನಡೆಯುತ್ತಿರುವಾಗ…
ಬೆಂಗಳೂರು : ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ನಿರ್ಧಾರದಂತೆ, ಇಂದಿನಿಂದ ಎಲ್ಲಾ ರಾಷ್ಟ್ರೀಯ ಹೆದ್ದಾರಿ ಟೋಲ್ ಪ್ಲಾಜಾಗಳಲ್ಲಿ ನಗದು…
ಕೊನೆಗೂ ಘೋಷಣೆಯಾಗಿದೆ ತಾತ್ಕಾಲಿಕ ಕದನ ವಿರಾಮ ತೆರೆಬಿದ್ದಿದೆ ಕೊಲ್ಲಿ ಯುದ್ಧಕೆ ನಿಟ್ಟುಸಿರು ಬಿಟ್ಟಿದೆ ಜನಜಗ! ಸಿಟ್ಟು ಸೆಡವು ಬದಿಗಿರಿಸಿ ನಡೆಯಲಿ…
ಕೊಲ್ಲಿ ಯುದ್ಧದ ನೆಪದಲ್ಲಿ ಬಂಡವಾಳಶಾಹಿಗಳು ಕೆಜಿಗೆ ರೂ. ೮೯ ಇದ್ದ ಆಟೋ ಗ್ಯಾಸ್ ಗ್ಯಾಸ್ ಅನ್ನು ರೂ. ೧೭೦ಕ್ಕೆ ಮಾರುತ್ತಾ…
ಇರಾನ್ ಮೇಲೆ ಇಸ್ರೇಲ್-ಅಮೆರಿಕ ಕಳೆದ ೪೦ ದಿನಗಳಿಂದ ನಡೆಸುತ್ತಿದ್ದ ಯುದ್ಧಕ್ಕೆ ಅಲ್ಪ ವಿರಾಮವನ್ನು ಘೋಷಿಸಲಾಗಿದೆ. ಈ ಯುದ್ಧದಿಂದಾಗಿ ಜಾಗತಿಕ ಆರ್ಥಿಕತೆಯ…