Mysore
29
few clouds

Social Media

ಮಂಗಳವಾರ, 11 ಮಾರ್ಚ್ 2025
Light
Dark

ಪೊಲೀಸ್‌ ಸಿಬ್ಬಂದಿಯ ಹಿತ ರಕ್ಷಿಸಲು ಸರ್ಕಾರ ಬದ್ದ: ಸಿಎಂ

ಬೆಂಗಳೂರು: ಪೊಲೀಸರು ಮುಕ್ತವಾಗಿ, ಸ್ವತಂತ್ರವಾಗಿ ಕೆಲಸ ಮಾಡಲು ನಮ್ಮ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಸೋಮವಾರ ಪೊಲೀಸ್‌ ಹುತಾತ್ಮ ದಿನದಂದು, ಹುತಾತ್ಮ ಪೊಲೀಸ್‌ ಸಿಬ್ಬಂದಿಗೆ ನಮನ ಸಲ್ಲಿಸಿ ಅವರು ಮಾತನಾಡಿದರು.

ಸಾರ್ವಜನಿಕರ ಪ್ರಾಣ, ಆಸ್ತಿ ರಕ್ಷಿಸುವ ಪೊಲೀಸ್‌ ಸಿಬ್ಬಂದಿಯ ಹಿತ ಕಾಯಲು ಸರ್ಕಾರ ಬದ್ದವಾಗಿದೆ. ಇದಕ್ಕಾಗಿ ರಾಜ್ಯದಲ್ಲಿ, ಹತ್ತು ಸಾವಿರ ಪೊಲೀಸ್‌ ಕ್ವಾಟ್ರರ್ಸ್‌ಗಳನ್ನು 2025ರ ವೇಳೆಗೆ ನಿರ್ಮಿಸಲಾಗುವುದು. ಇದಕ್ಕಾಗಿ 2,000 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ. ಅಲ್ಲದೇ, 100 ಹೊಸ ಪೊಲೀಸ್‌ ಠಾಣೆಗಳನ್ನು ನಿರ್ಮಾಣ ಮಾಡಲು 200 ಕೋಟಿ ರೂ.ಗಳನ್ನು ಮಂಜೂರು ಮಾಡಲಾಗಿದೆ. ಜೊತೆಗೆ ಪೊಲೀಸ್‌ ಅಧಿಕಾರಿಗಳ ಮಕ್ಕಳಿಗಾಗಿ 7 ಪ್ರಮುಖ ಸ್ಥಳಗಳಲ್ಲಿ ಪಬ್ಲಿಕ್‌ ಶಾಲೆಗಳನ್ನು ತೆರೆಯಲಾಗುತ್ತದೆ ಎಂದು ಘೋಷಿಸಿದರು.

Tags: