ಬೆಂಗಳೂರು: ರಾಜ್ಯದ ಶಿಕ್ಷಣ ಸಂಸ್ಥೆಗಳಲ್ಲಿನ ಹಿಜಾಬ್ ನಿಷೇಧವನ್ನು ಹಿಂಪಡೆಯಲು ಸರ್ಕಾರ ಬದ್ಧವಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಸೋಮವಾರ ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚುನಾವಣಾ ಸಂದರ್ಭದಲ್ಲಿ ನಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ಹಿಜಾಬ್ ಮೇಲಿನ ನಿಷೇಧವನ್ನು ಹಿಂತೆಗೆದುಕೊಳ್ಳುವುದಾಗಿ ಘೋಷಿಸಿದ್ದೆವು, ನಮ್ಮ ಭರವಸೆಯನ್ನು ಈಡೇರಿಸಲು ನಾವು ಬದ್ಧರಾಗಿದ್ದೇವೆ ಎಂದು ಹೇಳಿದರು.
ಈ ಬಗ್ಗೆ ಸರ್ಕಾರ ತನ್ನ ನಿಲುವನ್ನು ಸ್ಪಷ್ಟಪಡಿಸಿದೆ. ನ್ಯಾಯಾಲಯಕ್ಕೆ ಸರ್ಕಾರದ ನಿಲುವು ತಿಳಿಸುತ್ತೇವೆ. ಹಿಜಾಬ್ ನಿಷೇಧ ಹಿಂಪಡೆಯುತ್ತೇವೆಂದು ಹೇಳುತ್ತೇವೆಂದು ತಿಳಿಸಿದರು.
ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿ, ಬೆಳಗಾವಿ ಮತ್ತು ಚಿಕ್ಕೋಡಿಯಿಂದ ಆಕಾಂಕ್ಷಿಗಳ ಅರ್ಜಿಗಳನ್ನು ಹೈಕಮಾಂಡ್‌ಗೆ ಕಳುಹಿಸಲಾಗುವುದು ಎಂದರು.
ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಏಳನೇ ವರ್ಷದ ಹನುಮೋತ್ಸವ ಮೆರವಣಿಗೆಯು…
ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ…
ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು…
ಮೈಸೂರು : ಚುಮು ಚುಮು ಚಳಿಯ ನಡುವೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಗ್ರಾಹಕರ ಆಕರ್ಷಿಸುವ ಹಾಗೂ ಗ್ರಾಮೀಣ ಸೊಗಡಿನ…
ಮಂಡ್ಯ : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸುತ್ತೂರಿನ ಆದಿ ಜಗದ್ಗುರು ಶ್ರೀ ಶಿವರಾತ್ರಿ ಶಿವ ಯೋಗಿಗಳರವರ 1066ನೇ ಜಯಂತಿ…
ಸಿದ್ದಾಪುರ : ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಗ್ರಾ.ಪಂ. ಮಾಜಿ ಅಧ್ಯಕ್ಷನ ವಿರುದ್ಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ…