ಬೆಂಗಳೂರು: ರಾಜ್ಯದಲ್ಲಿ ಭ್ರೂಣಹತ್ಯೆ ಪ್ರಕರಣಗಳನ್ನು ತಡೆಗಟ್ಟಲು ಆರೋಗ್ಯ ಇಲಾಖೆ ದಿಟ್ಟ ಹೆಜ್ಜೆ ಇಟ್ಟಿದೆ. ರಾಜ್ಯದಲ್ಲಿ ಭ್ರೂಣಹತ್ಯೆಯನ್ನು ಸಂಪೂರ್ಣವಾಗಿ ತಡೆಗಟ್ಟಲು ಆರೋಗ್ಯ ಇಲಾಖೆ ಮುಂದಾಗಿದ್ದು, ಈ ಬಗ್ಗೆ ಸುಳಿವು ನೀಡುವವರಿಗೆ 1 ಲಕ್ಷ ರೂಪಾಯಿ ಬಹುಮಾನ ಘೋಷಿಸಿದೆ.
ಇತ್ತೀಚೆಗೆ ಭ್ರೂಣ ಹತ್ಯೆ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇವೆ. ರಾಜ್ಯದಲ್ಲಿ ಲೈಸೆನ್ಸ್ ಇಲ್ಲದ ಕ್ಲಿನಿಕ್‌ಗಳು ಹಾಗೂ ಚಿಕ್ಕ ಚಿಕ್ಕ ಆಸ್ಪತ್ರೆಗಳನ್ನು ತೆರೆದು ಈ ಕೃತ್ಯಕ್ಕೆ ಕೈ ಹಾಕಲಾಗುತ್ತಿದೆ. ಈ ಬೆನ್ನಲ್ಲೇ ಆರೋಗ್ಯ ಇಲಾಖೆ ಬಿಗ್ ಪ್ಲಾನ್ ಮಾಡಿದ್ದು, ಭ್ರೂಣಹತ್ಯೆ ಪ್ರಕರಣದ ಸುಳಿವು ಕೊಟ್ಟವರಿಗೆ ಒಂದು ಲಕ್ಷ ರೂ ಬಹುಮಾನ ಘೋಷಿಸಿದೆ.
ಈ ಮೊದಲು ಭ್ರೂಣಹತ್ಯೆ ಪ್ರಕರಣದ ಸುಳಿವು ನೀಡಿದವರಿಗೆ ಕೇವಲ 50 ಸಾವಿರ ರೂಪಾಯಿ ಬಹುಮಾನ ನೀಡಲಾಗುತ್ತಿತ್ತು. ಆದರೂ ರಾಜ್ಯದಲ್ಲಿ ಯಾರಿಗೂ ಕಾಣದಂತೆ ಯಥೇಚ್ಛವಾಗಿ ಭ್ರೂಣಲಿಂಗ ಹತ್ಯೆ ಪ್ರಕರಣಗಳು ನಡೆಯುತ್ತಲೇ ಇದ್ದವು.
ಇದರಿಂದ ಎಚ್ಚೆತ್ತ ಆರೋಗ್ಯ ಇಲಾಖೆ ಪ್ರಕರಣದ ಸುಳಿವು ನೀಡಿದವರಿಗೆ ಒಂದು ಲಕ್ಷ ರೂಪಾಯಿ ಬಹುಮಾನ ಘೋಷಣೆ ಮಾಡಿದೆ. ರಾಷ್ಟ್ರೀಯ ಅಭಿಯಾನದಡಿ 50 ಸಾವಿರ ಹಾಗೂ ಆಯಾಯ ಜಿಲ್ಲೆಗಳಲ್ಲಿ ಸಂಗ್ರಹಿಸಿರುವ ಪಿಸಿ ಅಂಡ್ ಪಿಎನ್‌ಟಿಡಿ ಶುಲ್ಕದಿಂದ 50 ಸಾವಿರ ರೂ ನೀಡಲು ಮುಂದಾಗಿದೆ.
ಕಾಡಾನೆಗಳ ಹಾವಳಿಯಿಂದಾಗಿ ಕಾಡಂಚಿನ ಜನರಿಗೆ ತೊಂದರೆಯಾಗುತ್ತಿದೆ. ಆದ್ದರಿಂದ ಆನೆಗಳನ್ನು ಕೊಲ್ಲಲು ಅನುಮತಿ ನೀಡಬೇಕು ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ…
ರಾಜ್ಯಸಭೆಯ ಕಲಾಪದ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತನಾಡುವ ಭರದಲ್ಲಿ ಕೆಲವರು ಅಂಬೇಡ್ಕರ್ ಎನ್ನುವುದನ್ನು ಈಗ ಫ್ಯಾಷನ್…
ದಾ.ರಾ. ಮಹೇಶ್ ವೀರನಹೊಸಹಳ್ಳಿ: ತಾಲ್ಲೂಕಿನ ಬನ್ನಿಕುಪ್ಪೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿತ್ಯ ಅವರೆಕಾಯಿ ಮಾರಾಟದಿಂದಾಗಿ ಟ್ರಾಫಿಕ್ ಜಾಮ್ ಆಗುತ್ತಿದ್ದು, ವಾಹನಗಳ ಸಂಚಾರಕ್ಕೆ…
ಮಂಡ್ಯ: ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20,21 ಮತ್ತು 22ರಂದು ಮೂರು ದಿನಗಳ ಕಾಲ ಜರುಗಲಿರುವ ಕನ್ನಡ ನುಡಿ ಜಾತ್ರೆ…
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…