ರಾಜ್ಯ

ಬಿಎಂಟಿಸಿ ಸಿಬ್ಬಂದಿ ಮುಷ್ಕರಕ್ಕೆ ಸರ್ಕಾರ ಬ್ರೇಕ್; 6 ತಿಂಗಳು ಪ್ರತಿಭಟನೆ ಮಾಡದಂತೆ ಅಧಿಸೂಚನೆ

ಬೆಂಗಳೂರು: ವೇತನ ಹೆಚ್ಚಳ ಮಾಡುವಂತೆ ಆಗ್ರಹಿಸಿ ಕಳೆದ ಕೆಲ ದಿನಗಳಿಂದ ಮುಷ್ಕರಕ್ಕೆ ಇಳಿದಿದ್ದ ಬಿಎಂಟಿಸಿ ಸಿಬ್ಬಂದಿಗಳಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದೆ.

ಕಳೆದ 3 ವರ್ಷಗಳಿಂದ ಸಾರಿಗೆ ಇಲಾಖೆ ವೇತನ ಬಾಕಿ ಉಳಿಸಿಕೊಂಡಿದೆ ಎಂದು ಆರೋಪಿಸಿ ಬಿಎಂಟಿಸಿ ಸಿಬ್ಬಂದಿ ಕಳೆದ ಕೆಲ ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದರು. ವೇತನ ಬಾಕಿ ಉಳಿಸಿಕೊಂಡಿರುವ ಪರಿಣಾಮ ನಮಗೆ ಜೀವನ ನಡೆಸುವುದೇ ಬಲು ಕಷ್ಟ ಎಂದು ಬಿಎಂಟಿಸಿ ಸಿಬ್ಬಂದಿ ಸರ್ಕಾರದ ವಿರುದ್ಧ ಭಾರೀ ಅಸಮಾಧಾನ ಹೊರಹಾಕಿದ್ದರು.

ಈ ಹಿನ್ನೆಲೆಯಲ್ಲಿ ಬಾಕಿ ಉಳಿದಿರುವ ವೇತನದ ಜೊತೆಗೆ ನಮಗೆ ವೇತನ ಹೆಚ್ಚಳ ಮಾಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದರು. ಆದರೂ ರಾಜ್ಯ ಸರ್ಕಾರ ಮಾತ್ರ ಬಿಎಂಟಿಸಿ ಸಿಬ್ಬಂದಿ ಮನವಿಗೆ ಕ್ಯಾರೇ ಎಂದಿರಲಿಲ್ಲ. ಇದರಿಂದ ರೊಚ್ಚಿಗೆದ್ದ ಸಿಬ್ಬಂದಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದರು.

ಪ್ರತಿಭಟನೆಯಿಂದ ಎಚ್ಚೆತ್ತ ಸರ್ಕಾರ ಮುಂದಿನ 6 ತಿಂಗಳು ಯಾವುದೇ ಪ್ರತಿಭಟನೆ ಮಾಡುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ. ಈ ಮೂಲಕ ನೌಕರರ ಪ್ರತಿಭಟನೆ ತಡೆಯಲು ಸರ್ಕಾರ ಅಧಿಸೂಚನೆ ಹೊರಡಿಸಿದ್ದು, ನೌಕರರಿಗೆ ಭಾರೀ ನಿರಾಸೆ ಆಗಿದೆ ಎನ್ನಲಾಗುತ್ತಿದೆ.

andolana

Recent Posts

ಓದುಗರ ಪತ್ರ: ಅರಳುವ ಪ್ರತಿಭೆಗಳಿಗೆ ಸಮಯ ಹೆಚ್ಚು ಸಿಗಲಿ

ಖ್ಯಾತನಾಮರಿಗೆ ವೇದಿಕೆಯ ಕಾರ್ಯಕ್ರಮದಲ್ಲಿ ಸ್ವಲ್ಪ ಕಡಿಮೆ ಸಮಯ ದೊರೆತರೂ ಪರವಾಗಿಲ್ಲ. ಅರಳುವ ಪ್ರತಿಭೆಗಳಿಗೆ ಸಾಕಷ್ಟು ಸಮಯ ಸಿಗಬೇಕೆಂಬ ಆಶಯ ಇರಬೇಕೆಂದು…

3 hours ago

ಅಗಲಿದ ದೃಶ್ಯಬ್ರಹ್ಮ ಸಿಂಗೀತಂ, ‘ನಟಸಮ್ರಾಟ್’ ನಾನಾ

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ   ಜಲಸಂರಕ್ಷಣೆಯ ಬೃಹತ್ ಕ್ರಾಂತಿಯನ್ನೇ ಮಾಡಿದ ಪಾಟೇಕರ್ ಭಾರತೀಯ ಚಿತ್ರರಂಗದ ಇತಿಹಾಸದಲ್ಲಿ ಕೆಲವೊಮ್ಮೆ ಕಾಲವು ತರುವ…

3 hours ago

ಮಹಾಲಯ ಅಮಾವಾಸ್ಯೆಗೆ ಮ.ಬೆಟ್ಟ ಸಜ್ಜು

ಮಹಾದೇಶ್ ಎಂ.ಗೌಡ ೩ ದಿನಗಳ ಜಾತ್ರೆಗೆ ಲಕ್ಷಾಂತರ ಭಕ್ತರ ಆಗಮನ ನಿರೀಕ್ಷೆ; ಪ್ರಾಧಿಕಾರದಿಂದ ಸಕಲ ಸಿದ್ಧತೆ  ಹನೂರು: ಮಹಾಲಯ ಅಮಾವಾಸ್ಯೆ…

3 hours ago

ಮಹೇಂದ್ರನ ಸುತ್ತ ಅನುಮಾನದ ಹುತ್ತ!

ಚಿರಂಜೀವಿ ಸಿ.ಹುಲ್ಲಹಳ್ಳಿ ಕಬಿನಿ ಕಿಂಗ್ ಮಹೇಂದ್ರ ತಾಲೀಮು ಅರ್ಧಕ್ಕೆ ಮೊಟಕು ಆತಂಕದಲ್ಲಿ ದಸರಾ ಗಜಪಡೆಯ ಅಭಿಮಾನಿಗಳು ಮೈಸೂರು: ಮಹಾಭಾರತದ ಭೀಮನ…

3 hours ago

ನಲ್ಲೂರು ಅಮಾನಿ ಕೆರೆಗೆ ಹರಿದು ಬಂದ ನೀರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ ವ್ಯಾಪ್ತಿಯಲ್ಲಿ ಕೃಪೆ ತೋರಿದ ವರುಣ ಮಳೆ ಮುಂದುವರಿದರೆ ತಾಲ್ಲೂಕಿನ ದೊಡ್ಡ ಕೆರೆ ತುಂಬುವುದು ಖಚಿತ  ಗುಂಡ್ಲುಪೇಟೆ:…

3 hours ago

ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು: ಸಿಎಂ ಡಿಕೆಶಿ ಬಾಂಬ್

ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

17 hours ago