ರಾಜ್ಯ

ಚಳಿಗಾಲ ಅಧಿವೇಶನದಲ್ಲಿ ವಿಪಕ್ಷಗಳ ಪ್ರಶ್ನೆಗೆ ಉತ್ತರಿಸಲು ಸರ್ಕಾರ ಸಿದ್ದ: ಸಿಎಂ

ಹಾವೇರಿ : ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ವಿರೋಧಪಕ್ಷಗಳು ಕೇಳುವ ಪ್ರಶ್ನೆಗಳಿಗೆ ಉತ್ತರಿಸಲು ನಮ್ಮ ಸರ್ಕಾರ ಸಿದ್ದವಿದೆ ಎಂದು ಸಿಎಂ ಸಿದ್ದರಾಮಯ್ಯ ಬುಧವಾರ ತಿಳಿಸಿದ್ದಾರೆ.

ನಗರದಲ್ಲಿಂದು ಮಾಧ್ಯಮದೊಂದಿಗೆ ಮಾತನಾಡಿದ ಅವರು, ಚಳಿಗಾಲ ಅಧಿವೇಶನದಲ್ಲಿ ಈ ಬಾರಿ ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ ಪ್ರಮುಖವಾಗಿ ಚರ್ಚಿಸಲಾಗುವುದು ಎಂದರು. ನಿಗಮ ಮಂಡಳಿ ಅಧ್ಯಕ್ಷರ ನೇಮಕಾತಿ ಸಂಬಂಧ ನಾನು ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ ಚರ್ಚಿಸಿ ಅಂತಿಮ ಪಟ್ಟಿ ಸಿದ್ದಪಡಿಸಿ ಹೈ ಕಮಾಂಡ್‌ ಮುಂದೆ ಇಡಲಾಗಿದ್ದು, ಪಕ್ಷದ ವರಿಷ್ಠರ ಅನುಮತಿಗಾಗಿ ನಿರೀಕ್ಷಿಸಲಾಗುತ್ತಿದೆ ಎಂದು ಹೇಳಿದರು.

ಬರಪರಿಹಾರದ ಸಂಬಂಧ ರಾಜ್ಯದಲ್ಲಿ ಬೆಳೆಹಾನಿ ಬಗ್ಗೆ ಸಮೀಕ್ಷೆ ನಡೆಸಲಾಗುತ್ತಿದೆ. ಎನ್ ಡಿ ಆರ್ ಎಫ್ ಮಾರ್ಗಸೂಚಿಯಂತೆ ನಿಗದಿಯಾಗಿರುವ ಪರಿಹಾರ ಮೊತ್ತವನ್ನು ನೀಡಲಾಗುವುದು. ಎನ್‌ಆರ್‌ಜಿಎಸ್ ಅಡಿ ಬರಗಾಲದ ಪರಿಸ್ಥಿತಿಯಲ್ಲಿ 150 ಮಾನವ ದಿನಗಳ ಉದ್ಯೋಗ ನೀಡುವ ಕೇಂದ್ರದ ನಿಯಮವಿದೆ. ಈ ಕ್ರಮಕ್ಕೆ ಕೇಂದ್ರ ಸರ್ಕಾರ ಇನ್ನೂ ಅನುಮತಿಯನ್ನು ನೀಡಿಲ್ಲ. ರಾಜ್ಯಕ್ಕೆ ಬರ ಅಧ್ಯಯನಕ್ಕಾಗಿ ಕೇಂದ್ರದ ತಂಡ ಬಂದು ಪರಿಶೀಲಿಸಿದ್ದರೂ ಕೇಂದ್ರದಿಂದ ಬರ ಪರಿಹಾರ ಬಿಡುಗಡೆಯಾಗಿಲ್ಲ. ರಾಜ್ಯದ ದುಡ್ಡನ್ನು ರಾಜ್ಯಕ್ಕೆ ಬಿಡುಗಡೆ ಮಾಡುತ್ತಿಲ್ಲ ಎಂದು ಕಿಡಿಕಾರಿದರು.

ಇನ್ನೂ ವಕೀಲರಾಗಿ ಡಿಕೆ ಶಿವಕುಮಾರ್‌ ಅವರ ತನಿಖೆ ಆದೇಶ ಹಿಂಡೆದದ್ದು ಸರಿಯೇ ಎಂಬ ಎಚ್‌ ಡಿ ಕುಮಾರಸ್ವಾಮಿ ಹೇಳಿಕೆಗೆ, ನಾನು ವಕೀಲನಾಗಿರುವುದರಿಂದಲೇ ಹಿಂದಿನ ಬಿಜೆಪಿ ಸರ್ಕಾರ ಸಿಬಿಐಗೆ ನೀಡಿದ್ದ ಪ್ರಕರಣ ಕಾನೂನು ರೀತಿಯಲ್ಲಿ ಇಲ್ಲವೆಂದು ಅದನ್ನು ವಾಪಾಸ್‌ ಪಡೆಯಲಾಗಿದೆ. ನನಗೆ ಕಾನೂನು ಅರಿವು ಇಲ್ಲದಿದ್ದರೇ ಮಾಜಿ ಸಿಎಂಗಳಾದ ಬಿಎಸ್‌ ಯಡಿಯೂರಪ್ಪ ಮತ್ತು ಎಚ್‌ಡಿ ಕುಮಾರಸ್ವಾಮಿ ರೀತಿಯಲ್ಲಿ ಕಾನೂನು ಬಾಹಿರವಾಗಿದ್ದರೂ ಪ್ರಕರಣದ ತನಿಖೆಗಾಗಿ ಸಮ್ಮತಿಸುತ್ತಿದ್ದೆ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

andolanait

Recent Posts

ಫ್ಲೈಓವರ್ ಕಾಮಗಾರಿ ಕುಂಟುತ್ತಿದೆಯೇಕೆ?

ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…

2 hours ago

ಸಕ್ಕರೆ ಬೆಲೆ ಗಗನಮುಖಿ; ಗ್ರಾಹಕರಿಗೆ ಬರೆ

ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…

3 hours ago

ಮಣ್ಣಿನ ಘಮ, ನಾಟಿ ಸಂಭ್ರಮ, ಗ್ರಾಮೀಣ ಕ್ರೀಡೆಗಳ ಉತ್ಸಾಹ

ಲಕ್ಷ್ಮೀಕಾಂತ್ ಕೊಮಾರಪ್ಪ ಮಣ್ಣಿನೊಂದಿಗೆ ಯುವಜನರ ನಂಟು ಬೆಸೆಯುವ ಉದ್ದೇಶ  ನಾಳೆ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಗದ್ದೆ ನಾಟಿ…

3 hours ago

ಮಳೆ ಕೊರತೆ; ರೈತರ ಕೈ ಸೇರದ ಬೆಳೆಗಳು

ಎಂ.ನಾರಾಯಣ ತಿ.ನರಸೀಪುರ: ಹೂ ಕಚ್ಚದ ಕಡಲೆಕಾಯಿ, ಸೂರ್ಯಕಾಂತಿ, ಮುಸುಕಿನ ಜೋಳದ ಬೆಳೆಗಳು ತಿ.ನರಸೀಪುರ: ತಾಲ್ಲೂಕಿನಲ್ಲಿ ಸಮರ್ಪಕ ಮಳೆ ಬಾರದಿರುವುದರಿಂದ ರೈತರು…

3 hours ago

ದುಬಾರಿ ಬಾಡಿಗೆ: ಬಾಡಿಗೆದಾರರಿಲ್ಲದೆ ಖಾಲಿ ಬಿದ್ದ ಮಳಿಗೆಗಳು

ಭೇರ್ಯ ಮಹೇಶ್ ಭೇರ್ಯ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಮಳಿಗೆಗಳು ತೆರೆಯದೆ ಪ್ರಯಾಣಿಕರಿಗೆ ಸಮಸ್ಯೆ ಭೇರ್ಯ: ಭೇರ್ಯ ಗ್ರಾಮದ ಬಸ್ ನಿಲ್ದಾಣದಲ್ಲಿ…

3 hours ago