ಬೆಂಗಳೂರು: ರಾಜ್ಯದ ಜನರಲ್ಲಿ ಡೆಂಗ್ಯೂ ಬಗ್ಗೆ ಉಂಟಾಗಿರುವ ಆತಂಕವನ್ನು ನಿವಾರಿಸಲು ಸರ್ಕಾರ ಜಾಗೃತಿ ಮೂಡಿಸಬೇಕು ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹೇಳಿದರು.
ಭಾನುವಾರ(ಜು.7) ಜಯನಗರದ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ, ಡೆಂಗ್ಯೂ ರೋಗಿಗಳನ್ನು ಭೇಟಿ ಮಾಡಿ, ಆರೋಗ್ಯ ವಿಚಾರಿಸಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರೋಗ್ಯ ಸಚಿವರು ಎಲ್ಲ ಜಿಲ್ಲೆಗಳಿಗೆ ಹೋಗಿ ಜನರನ್ನು ಭೇಟಿ ಮಾಡಬೇಕು. ಕಾಂಗ್ರೆಸ್‌ನ ಎಲ್ಲ ಸಚಿವರು, ಶಾಸಕರು ಕೂಡ ಆಸ್ಪತ್ರೆಗೆ ಭೇಟಿ ನೀಡಿ ಜನರಿಗೆ ಧೈರ್ಯ ಹೇಳಬೇಕು ಎಂದು ಸಲಹೆ ನೀಡಿದರು.
ಉದ್ಯಾನ, ಸಾರ್ವಜನಿಕ ಸ್ಥಳ, ನೀರು ನಿಲ್ಲುವ ಸ್ಥಳ ಸೇರಿದಂತೆ ಸೊಳ್ಳೆಗಳ ನಿಯಂತ್ರಣಕ್ಕೆ ಫಾಗಿಂಗ್ ಮಾಡಿಸಬೇಕು ಎಂದರು.
ಡೆಂಗ್ಯೂ ಜೊತೆಗೆ ಝೀಕಾ, ಕಾಲರಾ ಕೂಡ ಕಂಡುಬಂದಿದೆ. ಸಿಎಂ ಸಿದ್ದರಾಮಯ್ಯ ಅವರ ಜಿಲ್ಲೆಯಲ್ಲೇ ಜನರು ಕಲುಷಿತ ನೀರು ಕುಡಿದು ಸತ್ತಿದ್ದಾರೆ. ಈ ಮೂರು ರೋಗಗಳಿಂದ ಜನರನ್ನು ಕಾಪಾಡಲು ಸರ್ಕಾರ ಹೆಚ್ಚು ಗಮನಹರಿಸಬೇಕು. ಬಿಬಿಎಂಪಿ ಆಯುಕ್ತರಿಗೇ ಸೊಳ್ಳೆ ಕಚ್ಚಿ ಡೆಂಗ್ಯೂ ಬಂದಿರುವುದಾಗ ಬಿಬಿಎಂಪಿ ಬೇರೆಯವರನ್ನು ಕಾಪಾಡಲು ಸಾಧ್ಯವಿಲ್ಲ ಎಂಬ ಆತಂಕ ಜನರಲ್ಲಿ ಮೂಡಿದೆ. ಸಾರ್ವಜನಿಕರರಲ್ಲಿ ಅರಿವು ಮೂಡಿಸಿ ಈ ಆತಂಕಗಳನ್ನೆಲ್ಲಾ ದೂರ ಮಾಡಿ ಎಂದರು.
ಸಭೆ ಮಾಡುವುದರಿಂದ ಏನೂ ಆಗುವುದಿಲ್ಲ. ಅಧಿಕಾರಿಗಳು ಸ್ಥಳಕ್ಕೆ ಬಂದು ಕೆಲಸ ಮಾಡಬೇಕು. ನಗರದಲ್ಲಿ ಬಿದ್ದಿರುವ ರಾಶಿ ಕಸವನ್ನು ವಿಲೇವಾರಿ ಮಾಡಲು ಅಭಿಯಾನದ ಮಾದರಿಯಲ್ಲಿ ಕೆಲಸ ಮಾಡಬೇಕು. ಹೆಚ್ಚು ಹಣ ನೀಡಬೇಕು ಎಂದರು.
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…