ರಾಜ್ಯ

ಅಂಬೇಡ್ಕರ್ ದೇಶ ಕಂಡ ಮಹಾನ್ ನಾಯಕರು ಹಾಗೂ ಮಾನವತಾವಾದಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸರ್ಕಾರ ಅಂಬೇಡ್ಕರ್ ಅವರು ಪ್ರತಿಪಾದಿಸಿದ್ದ ಶಿಕ್ಷಣ, ಸಂಘಟನೆ ಮತ್ತು ಹೋರಾಟದ ಮಂತ್ರ ಅನುಸರಿಸುವ ಪ್ರಯತ್ನ ಮಾಡುತ್ತಿದ್ದು, ಅವರು ಬಯಸಿದ ಸಮಾಜವನ್ನು ನಿರ್ಮಾಣ ಮಾಡಲು ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಇಂದು ಸಂವಿಧಾನ ಶಿಲ್ಪಿ ಡಾ: ಬಿ. ಆರ್.ಅಂಬೇಡ್ಕರ್ ಅವರ 134 ನೇ ಜನ್ಮ ದಿನಾಚರಣೆಯ ಅಂಗವಾಗಿ ವಿಧಾನಸೌಧದ ಪೂರ್ವ ದ್ವಾರದಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ನಮ್ಮ ಸರ್ಕಾರ ಅತ್ಯಂತ ಗೌರವ, ನಮ್ರತೆಯಿಂದ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜನ್ಮದಿನವನ್ನು ಆಚರಿಸುತ್ತಿದೆ. ಅಂಬೇಡ್ಕರ್ ಅವರು ಕೇವಲ ದಲಿತರ ನಾಯಕರಾಗಿರದೇ ಸಮಾಜದಲ್ಲಿ ಶೋಷಿತರು, ಅನ್ಯಾಯ ಹಾಗೂ ದೌರ್ಜನ್ಯಕ್ಕೆ ಒಳಗಾದವರ ಪರವಾಗಿ ಅನ್ಯಾಯದಿಂದ ಮುಕ್ತಿ ಪಡೆಯಬೇಕೆಂದು ತಮ್ಮ ಬದುಕನ್ನೇ ಮುಡಿಪಾಗಿಟ್ಟಿದ್ದರು.

ಅಂಬೇಡ್ಕರ್ ಎಲ್ಲರಿಗೂ ಆರ್ಥಿಕ, ಸಾಮಾಜಿಕ, ರಾಜಕೀಯ ಸ್ವಾತಂತ್ರ್ಯ ದೊರಕಿಸಲು ಶ್ರಮಿಸಿದವರು. ಮಹಾನ್ ಮೇಧಾವಿಯಾಗಿದ್ದ ಅಂಬೇಡ್ಕರ್, ಅವರ ಸ್ವಾರ್ಥಕ್ಕಾಗಿ ಓದಿಕೊಳ್ಳದೆ ಶೋಷಿತರ, ಅಸ್ಪೃಶ್ಯತೆಯಿಂದ ನರಳುತ್ತಿರುವವ ಜನರಿಗೆ ವಿಮೋಚನೆ ನೀಡಲೆಂದೇ ಜ್ಞಾನಾರ್ಜನೆ ಮಾಡಿಕೊಂಡಿದ್ದರು. ದೇಶದ ಕೆಲವೇ ಮೇಧಾವಿಗಳಲ್ಲಿ ಅವರೂ ಒಬ್ಬರು. ದೇಶ ಕಂಡ ಮಹಾನ್ ನಾಯಕರು ಹಾಗೂ ಮಾನವತಾವಾದಿ. ಎಲ್ಲರೂ ಮನುಷ್ಯರಾಗಿ ಬದುಕಬೇಕು. ಸಮಾಜದಲ್ಲಿ ಎಲ್ಲರಿಗೂ ಸಮಾನತೆ ದೊರಕಬೇಕು. ಆರ್ಥಿಕ, ಸಾಮಾಜಿಕ, ರಾಜಕೀಯ ಸ್ವಾತಂತ್ರ್ಯ ದೊರಕಬೇಕು. ಹಾಗಾದಾಗ ಮಾತ್ರ ದೇಶಕ್ಕೆ ನಿಜವಾದ ಸ್ವಾತಂತ್ರ್ಯ ಸಿಗುತ್ತದೆ. ಮಹಿಳೆಯರು ಆರ್ಥಿಕವಾಗಿ, ಸಾಮಾಜಿಕವಾಗಿ ಸಬಲರಾಗಬೇಕು. ಅಸ್ಪೃಶ್ಯತೆ ನಾಶವಾಗಬೇಕು ಎಂದು ಅಂಬೇಡ್ಕರ್ ಶ್ರಮಿಸಿದ್ದರು ಎಂದರು.

ಇತ್ತೀಚೆಗೆ ಕೆಲವರು ಮಹಾತ್ಮ ಗಾಂಧಿ ಹಾಗೂ ಅಂಬೇಡ್ಕರ್ ಅವರನ್ನು ತಮಗೆ ಸೇರಿದವರೆಂದು ಬಿಂಬಿಸಲು ಪ್ರಾರಂಭಿಸಿದ್ದಾರೆ. ಮಹಾತ್ಮ ಗಾಂಧಿಯವರನ್ನು ಕೊಂದವರು, ಅಂಬೇಡ್ಕರ್ ಅವರ ಸಂವಿಧಾನವನ್ನು ವಿರೋಧಿಸಿದ ಮನುವಾದಿಗಳೇ ಇಂದು ಅವರನ್ನು ತಮ್ಮ ಸ್ವಂತ ಎನ್ನಲು ಪ್ರಾರಂಭಿಸಿದ್ದಾರೆ. ಸಂವಿಧಾನ ಜಾರಿಗೆ ಬಂದ ನಾಲ್ಕೈದು ದಿನಗಳಲ್ಲೇ ‘ದಿ ಆರ್ಗನೈಜರ್’ ಪತ್ರಿಕೆಯಲ್ಲಿ ವಿರೋಧ ಮಾಡಿ ಬರೆದಿದ್ದರು. ಈಗ ಅಂಬೇಡ್ಕರ್ ಅವರನ್ನು ಕಾಂಗ್ರೆಸ್ ಸೋಲಿಸಿತ್ತು ಎಂದು ಮಾತನಾಡುತ್ತಾರೆ. ಅಂಬೇಡ್ಕರ್ ಅವರು ‘ನಾನು ಹಿಂದೂ ಆಗಿ ಹುಟ್ಟಿದೆ ಆದರೆ ಹಿಂದೂವಾಗಿ ಸಾಯಲಾರೆ’ ಎಂದು ಹೇಳಿದ್ದರು. ಹಿಂದೂ ಧರ್ಮ ತ್ಯಜಿಸಿ ಭೌದ್ಧ ಧರ್ಮವನ್ನು ಸ್ವೀಕಾರ ಮಾಡಿದರು. ಹಿಂದೂ ಧರ್ಮದ ಸುಧಾರಣೆಗೆ ಪ್ರಯತ್ನಿಸಿ, ಅದು ಸಾಧ್ಯವಾಗುವುದಿಲ್ಲ ಎಂದು ಅರಿವಾದ ನಂತರ ಹಿಂದೂ ಧರ್ಮವನ್ನು ತ್ಯಜಿಸಿ, ಮಾನವೀಯತೆ ಮತ್ತು ಸಮಾನತೆ ಇದ್ದ ಭೌದ್ಧ ಧರ್ಮವನ್ನು ಸ್ವೀಕರಿಸಿದರು ಎಂದರು.

ಆಂದೋಲನ ಡೆಸ್ಕ್

Recent Posts

ಸಿಎಂಗೆ ವಿದ್ಯಾರ್ಥಿಗಳು ಪತ್ರ ಬರೆದ ಪ್ರಕರಣ: ಪಚ್ಚೆದೊಡ್ಡಿ ಸರ್ಕಾರಿ ಶಾಲೆಗೆ ಬಿಇಒ ಭೇಟಿ

ಜೀಪ್ ವ್ಯವಸ್ಥೆ ಮಾಡುವಂತೆ ತಹಸಿಲ್ದಾರ್‌ಗೆ ಮನವಿ ಮಾಡಿದ ಬಿಇಒ ಹನೂರು: ಹನೂರು ಶೈಕ್ಷಣಿಕ ವಲಯದ ಪಚ್ಚೆದೊಡ್ಡಿ ಗ್ರಾಮದ ಶಾಲೆಗೆ ಕ್ಷೇತ್ರ…

2 hours ago

ಕೋಟೆ ಪುರಸಭೆ ಪೌರಕಾರ್ಮಿಕರು, ನೌಕರರಿಗೆ ೫ ತಿಂಗಳಿಂದ ಸಂಬಳವಿಲ್ಲ

ಮಂಜು ಕೋಟೆ ಪ್ರತಿನಿತ್ಯ ಅಧಿಕಾರಿಗಳ ಬಳಿ ಅಲೆದಾಡುತ್ತಿರುವ ನೌಕರರು; ಕುಟುಂಬ ನಿರ್ವಹಣೆಗೆ ಪರದಾಟ ಎಚ್.ಡಿ.ಕೋಟೆ: ಪಟ್ಟಣದ ಪುರಸಭೆಯ ಪೌರಕಾರ್ಮಿಕರು ಮತ್ತು…

2 hours ago

ಕೈಬೀಸಿ ಕರೆಯುತ್ತಿದೆ ‘ಪ್ರಸಾರಾಂಗ ಪುಸ್ತಕೋತ್ಸವ’

ಪುಸ್ತಕ ಪ್ರಿಯರಿಗಾಗಿ ರಿಯಾಯಿತಿ ದರದಲ್ಲಿ ಪುಸ್ತಕ ಮಾರಾಟ ಮೈಸೂರು: ವಿಶ್ವಕೋಶ, ಶಬ್ಧಕೋಶ, ಇಂಗ್ಲಿಷ್-ಕನ್ನಡ ನಿಘಂಟು, ಕನ್ನಡ-ಇಂಗ್ಲಿಷ್ ನಿಘಂಟು, ಕನ್ನಡ ಗ್ರಂಥಮಾಲೆ,…

2 hours ago

ನಗರಪಾಲಿಕೆ ಆರ್ಥಿಕ ಬರ ನೀಗಿಸಿದ ತೆರಿಗೆ ಸಂಗ್ರಹ

ಕೆ.ಬಿ.ರಮೇಶನಾಯಕ ಅಕ್ಟೋಬರ್ ತಿಂಗಳ ಅಂತ್ಯಕ್ಕೆ ಶೇ.೮೨.೯೭ರಷ್ಟು ತೆರಿಗೆ ಸಂಗ್ರಹ ಮೈಸೂರು: ಗುತ್ತಿಗೆದಾರರಿಗೆ ಹಣ ಪಾವತಿಸಲಾಗದೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ಮೈಸೂರು…

2 hours ago

ತಾಪಮಾನ ಇಳಿಕೆ : ಬೆಂಗಳೂರಲ್ಲಿ ಚಳಿ ಹೆಚ್ಚಳ

ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…

13 hours ago