Minister N. Cheluvarayaswamy instructs action against officials harassing for bribes.
ಬೆಂಗಳೂರು: ರಾಜ್ಯಾದ್ಯಂತ ಅಕ್ರಮ ಮರಳುಗಾರಿಕೆ ತಡೆಗಟ್ಟಲು ಜಿಪಿಎಸ್ ಅಳವಡಿಕೆ ಹಾಗೂ ಸ್ಕ್ವಾಡ್ ತಂಡವನ್ನು ಬಿಗಿಗೊಳಿಸಲಾಗುವುದು ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ವಿಧಾನಪರಿಷತ್‌ನಲ್ಲಿ ತಿಳಿಸಿದರು.
ಸದಸ್ಯೆ ಹೇಮಲತಾ ನಾಯಕ್ ಅವರು ತೋಟಗಾರಿಕೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರಿಗೆ ಪ್ರಶ್ನೆ ಕೇಳಿದ್ದರು. ಸಚಿವರ ಪರವಾಗಿ ಉತ್ತರಿಸಿದ ಚಲುವರಾಯಸ್ವಾಮಿಯವರು, ಅಕ್ರಮ ಮರಳುಗಾರಿಕೆ ತಡೆಗಟ್ಟುವುದು ಸರ್ಕಾರದ ಪ್ರಥಮ ಆದ್ಯತೆಯಾಗಿದೆ ಎಂದು ಹೇಳಿದರು.
ಎಲ್ಲೆಲ್ಲಿ ಮರಳುಗಾರಿಕೆ ನಡೆಯುತ್ತದೆಯೋ ಅಂತಹ ಕಡೆ ಜಿಪಿಎಸ್ ಅಳವಡಿಕೆ ಮತ್ತು ಈಗಿರುವ ಸ್ಕ್ವಾಡ್ ತಂಡವನ್ನು ಮತ್ತಷ್ಟು ಬಲಪಡಿಸಲಾಗುವುದು. ಕಟ್ಟುನಿಟ್ಟಿನ ಕ್ರಮದ ನಡುವೆಯೂ ಕೆಲವು ಕಡೆ ಇಂತಹ ಕಾನೂನುಬಾಹಿರ ಚಟುವಟಿಕೆಗಳು ನಡೆಯುತ್ತವೆ ಎಂದರು.
ಅಕ್ರಮ ಮರಳುಗಾರಿಕೆ ತಡೆಗಟ್ಟಲು ಜಿಲ್ಲಾಧಿಕಾರಿಗಳು, ತಹಸೀಲ್ದಾರ್ ಸೇರಿದಂತೆ ಮತ್ತಿತರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ರಾಜ್ಯ ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟಾಗದಂತೆ ಬಿಗಿಯಾದ ಕಾನೂನು ಕ್ರಮಗಳನ್ನು ತೆಗೆದುಕೊಂಡಿದ್ದೇವೆ ಎಂದು ಮಾಹಿತಿ ನೀಡಿದರು.
ನವೀನ್ ಡಿಸೋಜ ಮಡಿಕೇರಿ ಪ್ರಾದೇಶಿಕ ಸಾರಿಗೆ ಕಚೇರಿ ಅಧಿಕಾರಿಗಳ ಸಾಧನೆ ಜಿಲ್ಲೆಯಾದ್ಯಂತ ನಿರಂತರ ವ್ಯಾಪಕ ತಪಾಸಣಾ ಕ್ರಮ ಮಡಿಕೇರಿ: ಪ್ರಾದೇಶಿಕ…
ನಾಗರಹೊಳೆ ಅರಣ್ಯದ ಮಧ್ಯಭಾಗದಲ್ಲಿರುವ ದೇವಸ್ಥಾನಕ್ಕೆ ವಿವಿಧೆಡೆಯಿಂದ ಸಾವಿರಾರು ಮಂದಿ ಭೇಟಿ ಪಿರಿಯಾಪಟ್ಟಣ: ತಾಲ್ಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಆನೆಚೌಕೂರು ಮೀಸಲು…
ಎಂ.ಗೂಳೀಪುರ ನಂದೀಶ್ ಕೆಸ್ತೂರು ಪ್ರೌಢಶಾಲೆಯ ಸುತ್ತುಗೋಡೆಯಲ್ಲಿ ಕನ್ನಡ ಸಾಹಿತಿಗಳ, ಸಾಧಕರ ಸೊಗಸಾದ ಚಿತ್ರಗಳ ಚಿತ್ತಾರ ಯಳಂದೂರು: ಶಾಲೆಯ ಸುತ್ತುಗೋಡೆಯಲ್ಲಿ ರಾರಾಜಿಸುತ್ತಿರುವ…
ಎಂ.ಬಿ.ರಂಗಸ್ವಾಮಿ ಮೂಗೂರಿನ ತ್ರಿಪುರ ಸುಂದರಿ ದೇಗುಲದ ನೂತನ ಕಲ್ಯಾಣಿಯಲ್ಲಿ ೪ ವರ್ಷಗಳಿಂದ ನಡೆಯದ ತೆಪ್ಪೋತ್ಸವ ಮೂಗೂರು: ಐತಿಹಾಸಿಕ ಹಿನ್ನೆಲೆಯುಳ್ಳ ಧಾರ್ಮಿಕ…
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್…