ಬೆಂಗಳೂರು: 2022-23ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಗೆ ಹಾಜರಾಗುತ್ತಿರುವ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಸಿಹಿ ಸುದ್ದಿಯೊಂದನ್ನ ನೀಡಿದೆ. ಕಳೆದ ಎರಡು ವರ್ಷದಿಂದ ಕೊರೊನ ಕಾರಣಕ್ಕೆ ಶೇಕಡ 10 ರಷ್ಟು ಗ್ರೇಸ್ ಮಾರ್ಕ್ಸ್ ನೀಡಲಾಗಿತ್ತು. ಆದರೆ ಈ ಬಾರಿಯೂ ಕೂಡಾ ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್ ನೀಡಲು ಶಿಕ್ಷಣ ಇಲಾಖೆ ಮುಂದಾಗಿದೆ.
ಈ ಕುರಿತು ಮಾಹಿತಿ ನೀಡಿರುವ ಎಸ್ಎಸ್ಎಲ್ಸಿ ಬೋರ್ಡ್ ನಿರ್ದೇಶಕ ರಾಮಚಂದ್ರ ಅವರು, ಕಳೆದ ಎರಡು ವರ್ಷಗಳಲ್ಲಿ 8,9ನೇ ತರಗತಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯದೆ ತೇರ್ಗಡೆ ಹೊಂದಿದ ಕಾರಣ ಈ ವರ್ಷವೂ ಶೇಕಡ 10 ರಷ್ಟು ಗ್ರೇಸ್ ಮಾರ್ಕ್ಸ್ ನೀಡಲು ಬೋರ್ಡ್ ನಿರ್ಧಾರ ತೆಗೆದುಕೊಂಡಿದೆ.
ಮೂರು ವಿಷಯಗಳಿಗೆ ಮಾತ್ರ ಗ್ರೇಸ್ ಮಾರ್ಕ್ಸ್ ಅಂಕ ನೀಡಲಾಗುತ್ತಿದೆ. ಭಾಷಾ ಹಾಗೂ ಕೋರ್ ವಿಷಯಗಳಿಗೆ ಮಾತ್ರ ಗ್ರೇಸ್ ಅಂಕ ಕೊಡಲಾಗುತ್ತದೆ. ತೇರ್ಗಡೆ ಕಡಿಮೆ ಅಂಕ ಪಡೆಯುವ ವಿದ್ಯಾರ್ಥಿಗಳಿಗೆ ಮಾತ್ರ ಇದು ಅನ್ವಯವಾಗಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.