ಬೆಂಗಳೂರು : 2026-31ನೇ ಸಾಲಿನ ಗ್ರಾಮ ಪಂಚಾಯ್ತಿಗಳ ಚುನಾವಣೆಗೆ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ಕಾರ್ಯದರ್ಶಿ ಸೂಚನೆ ನೀಡಿದ್ದಾರೆ.
2020-25ನೇ ಅವಧಿಯ ಗ್ರಾಮ ಪಂಚಾಯಿತಿಗಳ ಅವಧಿಯು 2026ರ ಜನವರಿ ಮಾಹೆಯಿಂದ ಪೂರ್ಣಗೊಳ್ಳಲಿದೆ. ಸದರಿ ಅವಧಿಯು ಮುಕ್ತಾಯಗೊಳ್ಳುವ ಗ್ರಾಮ ಪಂಚಾಯ್ತಿಗಳಿಗೆ 2025ರ ಡಿಸೆಂಬರ್ ನಲ್ಲಿ ಸಾರ್ವತ್ರಿಕ ಚುನಾವಣೆಯನ್ನು ನಡೆಸಬೇಕಾಗಿತ್ತು. ಸಾರ್ವತ್ರಿಕ ಚುನಾವಣೆ ನಡೆಸುವ ಆರು ತಿಂಗಳು ಮುಂಚಿತವಾಗಿ ಮತದಾರರ ಪಟ್ಟಿ ಮುದ್ರಣ ಒಳಗೊಂಡಂತೆ, ಇತರ ಎಲ್ಲಾ ಪೂರ್ವಭಾವಿ ಸಿದ್ಧತೆಗಳನ್ನು ಆಯೋಗವು ಮಾಡಿಕೊಳ್ಳಬೇಕಾಗಿರುತ್ತದೆ. ಆದುದರಿಂದ ನಿಗದಿತ ಕಾಲಮಿತಿಯಲ್ಲಿ ಮೀಸಲಾತಿಯ ಅಧಿಸೂಚನೆಯನ್ನು ಹೊರಡಿಸಿ, ಅದರ ಪ್ರತಿಗಳನ್ನು ರಾಜ್ಯ ಚುನಾವಣಾ ಆಯೋಗಕ್ಕೆ ಒದಗಿಸುವಂತೆ ರಾಜ್ಯ ಚುನಾವಣಾ ಆಯೋಗ ಕೋರಿದೆ ಎಂದು ತಿಳಿಸಿದೆ.
ಪ್ರಸ್ತುತ ಬಹುತೇಕ ಗ್ರಾಮ ಪಂಚಾಯ್ತಿಗಳ ಅವಧಿಯು ಜನವರಿ-2026 ತಿಂಗಳನಿಂದ ಮಾರ್ಚ್-2026 ತಿಂಗಳವರೆಗೆ ಮುಕ್ತಾಯಗೊಳ್ಳಲಿದೆ. ಆದ್ದರಿಂದ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993ರ ಅಡಿ ಗ್ರಾಮ ಪಂಚಾಯಿತಿಗಳಿಗೆ 2026-31ನೇ ಸಾಲಿನ ಗ್ರಾಮ ಪಂಚಾಯಿತಿಯ ಸಾರ್ವತ್ರಿಕ ಚುನಾವಣೆ ನಡೆಸಲು ಬೇಕಾಗಿರುವ ಎಲ್ಲಾ ಅಗತ್ಯ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಸೂಚಿಸಿದೆ.
ಜಿಲ್ಲಾಧಿಕಾರಿಗಳು ಪೂರ್ವ ಸಿದ್ಧತೆಗೆ ಸಂಬಂಧಿಸಿದಂತೆ, ತೆಗೆದುಕೊಂಡ ಕ್ರಮದ ಬಗ್ಗೆ ವರದಿಯನ್ನು ಸರ್ಕಾರಕ್ಕೆ ಮತ್ತು ರಾಜ್ಯ ಚುನಾವಣೆ ಆಯೋಗಕ್ಕೆ ಸಲ್ಲಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ಕಾರ್ಯದರ್ಶಿ ಸೂಚನೆ ನೀಡಿದ್ದಾರೆ.
ಈ ನಡುವೆ ಗ್ರಾಮಪಂಚಾಯಿತಿಗಳ ಅವಧಿ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಆರು ತಿಂಗಳುಗಳ ಕಾಲ ಈಗಿರುವ ಆಡಳಿತ ಸಮಿತಿಯನ್ನು ಮುಂದುವರಿಸಬೇಕು ಎಂದು ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿಗಳ ಸದಸ್ಯರ ಒಕ್ಕೂಟ ಸರ್ಕಾರಕ್ಕೆ ಮನವಿ ಮಾಡಿದೆ. ಈ ಹಿಂದೆ ಕೋವಿಡ್ ಕಾಲಾವಧಿಯಲ್ಲಿ ಅಧಿಕಾರ ಅವಧಿ ಮುಗಿದ ಗ್ರಾಮ ಪಂಚಾಯಿತಿಗಳ ಆಡಳಿತವನ್ನು ಆರು ತಿಂಗಳ ಕಾಲ ಮುಂದುವರಿಸಬೇಕು ಎಂದು ಪ್ರತಿಪಕ್ಷ ಕಾಂಗ್ರೆಸ್ ಒತ್ತಾಯಿಸಿತ್ತು.
ಆಡಳಿತ ಅಧಿಕಾರಿ ನೇಮಕ ಮಾಡುವ ಆದೇಶ ಹಿಂದೆ ಪಡೆದು, ಈಗಿರುವ ಆಡಳಿತ ಸಮಿತಿಯನ್ನು ಮುಂದುವರೆಸಬೇಕು ಎಂದು ಒಕ್ಕೂಟ ಒತ್ತಾಯಿಸಿದೆ. ಹೀಗೆ ಹಲವು ಸಂದರ್ಭಗಳಲ್ಲಿ ಮಾಡಲಾಗಿದೆ. 90 ದಶಕದಲ್ಲಿ ಪಂಚಾಯಿತಿಗಳ ಅಧಿಕಾರ ಅವಧಿಯನ್ನು ವಿಸ್ತರಿಸಲಾಗಿತ್ತು. ಈಗಲೂ ಹಾಗೆಯೇ ಮಾಡಬಹುದು ಎಂದು ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿಗಳ ಸದಸ್ಯರ ಒಕ್ಕೂಟ ಸರ್ಕಾರಕ್ಕೆ ಮನವಿ ಮಾಡಿದೆ.
ಮಂಡ್ಯ: ನಾಗಮಂಗಲ ತಾಲೂಕು ಯರಗಟ್ಟಿ ಗೇಟ್ ಬಳಿ ಶುಕ್ರವಾರ ರಾತ್ರಿ ಅಪಘಾತಕ್ಕೊಳಗಾದ ಸ್ಕಾರ್ಪಿಯೋ ಕಾರಿನಲ್ಲಿ ಮೃತಪಟ್ಟಿರುವ ಹತ್ತಕ್ಕೂ ಹೆಚ್ಚು ಕರುಗಳು…
ಮದ್ದೂರು: ದುಷ್ಕರ್ಮಿಗಳು ದೇವಾಲಯಗಳ ಬಾಗಿಲು ಮುರಿದು ಸರಣಿ ಕಳ್ಳತನ ಮಾಡಿರುವ ಘಟನೆ ತಾಲ್ಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಡಗನಹಳ್ಳಿ…
ಮೈಸೂರು : ಎನ್‌ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ…
ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು…
ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್‌ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್‌ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…