ಬೆಂಗಳೂರು : ಮಾರ್ಚ್ ಅಂತ್ಯದೊಳಗೆ ಎಲ್ಲಾ ಗ್ರಾಮ ಪಂಚಾಯಿತಿ ಸದಸ್ಯರ ಅಧಿಕಾರ ಅವಧಿ ಮುಕ್ತಾಯವಾಗಲಿರುವುದರಿಂದ ಗ್ರಾಮ ಪಂಚಾಯಿತಿ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುವಂತೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಈಗಾಗಲೇ ಆದೇಶ ಹೊರಡಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ ಖರ್ಗೆ ಅವರು ತಿಳಿಸಿದರು.
ವಿಧಾನಸಭೆಯಲ್ಲಿ ಗಮನ ಸೆಳೆಯುವ ಸೂಚನೆಯಡಿ ಶಾಸಕರಾದ ದೊಡ್ಡನಗೌಡ ಹನುಮಗೌಡ ಪಾಟೀಲ್ ಅವರು ರಾಜ್ಯ85 % ವ್ಯಾಪ್ತಿಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯರ ಅವಧಿಯು ಮುಕ್ತಾಯಗೊಳ್ಳುತ್ತಿರುವುದರಿಂದ ಮುಂದಿನ ಚುನಾವಣೆ ನಡೆಸುವವರೆಗೂ ಆಡಳಿತಾಧಿಕಾರಿಯನ್ನು ನೇಮಿಸುವ ಬದಲು ಈಗಿರುವ ಗ್ರಾಮ ಪಂಚಾಯಿತಿ ಸದಸ್ಯರನ್ನೇ ಮುಂದುವರೆಸಬೇಕೆಂದು ಮನವಿ ಮಾಡಿದರು
ಇದಕ್ಕೆ ಉತ್ತರಿಸಿದ ಸಚಿವರು, ಚುನಾವಣೆ ನಡೆಸುವುದು ತುಂಬಾ ತಡವಾಗುವುದಾದರೆ ಮಾತ್ರ ಕಾನೂನಿನಡಿ ಗ್ರಾಮ ಪಂಚಾಯಿತಿ ಸದಸ್ಯರನ್ನೇ ಮುಂದುವರೆಸಲು ಅವಕಾಶವಿರುತ್ತದೆ. ಆದರೆ ಈಗಾಗಲೇ ಜಿಲ್ಲಾಧಿಕಾರಿಗಳಿಗೆ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುವಂತೆ ಸೂಚಿಸಲಾಗಿರುವುದರಿಂದ ಗ್ರಾಮ ಪಂಚಾಯಿತಿ ಸದಸ್ಯರನ್ನೇ ಮುಂದುವರೆಸುವ ಅವಶ್ಯಕತೆ ಬರುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಚುನಾವಣೆಯನ್ನು ಸರ್ಕಾರ ಆದಷ್ಟು ಬೇಗ ನಡೆಸಲಿದೆ. ಆದಾಗ್ಯೂ ಚುನಾವಣೆ ನಡೆಸುವುದು ತಡವಾದಲ್ಲಿ ಸದಸ್ಯರ ಮನವಿ ಕುರಿತು ಕಾನೂನಿನಡಿ ಪರಿಶೀಲಿಸಲಾಗುವುದು ಎಂದರು.
ಮೈಸೂರು : ಸಾಂಸ್ಕ ತಿಕ ನಗರಿಯ ಜನತೆಯ ಅನುಕೂಲಕ್ಕಾಗಿ ಮೈಸೂರಿನಿಂದ ಮುತ್ತಿನ ನಗರಿ ಹೈದರಾಬಾದ್‌ಗೆ ಮತ್ತೊಂದು ವಿಮಾನ ಸಂಚಾರ ಅತಿ…
ನವದೆಹಲಿ : ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ.33 ಮೀಸಲಾತಿ ನೀಡುವ ಮಹಿಳಾ ಮೀಸಲಾತಿ ತಿದ್ದುಪಡಿ ಮಸೂದೆ (Women’s Reservation Bill) ಭಾರೀ…
ಟೆಹ್ರಾರ್ : ಇರಾನ್ ಹೊರ್ಮುಜ್ ಜಲಸಂಧಿಯಲ್ಲಿ ವಾಣಿಜ್ಯ ಹಡಗುಗಳ ಸಂಚಾರಕ್ಕೆ ಪೂರ್ಣ ಮುಕ್ತಿ ನೀಡಿದೆ ಎಂದು ಮಹತ್ವದ ಘೋಷಣೆ ಮಾಡಿದೆ.…
ಹನೂರು : ಕುಡಿಯುವ ನೀರು, ಇ-ಸ್ವತ್ತು, ಪೋಡಿ ಹಾಗೂ ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ಸೇರಿ ಹಲವು ಬೇಡಿಕೆಗಳನ್ನು ಈಡೇರಿಸುವಂತೆ…
ಮೈಸೂರು : ನಗರದಲ್ಲಿರುವ ರೈಲ್ವೇ ಗೂಡ್ಸ್ ಶೆಡನ್ನು ಪಾಂಡವಪುರಕ್ಕೆ ಸ್ಥಳಾಂತರಿಸಲು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ವಿ.ಸೋಮಣ್ಣ ಅವರು ಹುನ್ನಾರ…
ಕಾನೂನು ಸಚಿವಾಲಯದಿಂದ ಅಧಿಸೂಚನೆ ಪ್ರಕಟ ನವದೆಹಲಿ: ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಸ್ಥಾನ ಒದಗಿಸುವ ಮಹಿಳಾ ಮೀಸಲಾತಿ…