ಬೆಂಗಳೂರು: ಕರ್ನಾಟಕದಿಂದ ಹಜ್ ಯಾತ್ರೆ ಕೈಗೊಳ್ಳುವ ಯಾತ್ರಿಗಳಿಗೆ ರಾಜ್ಯ ಹಜ್ ಸಮಿತಿ, ಕೇಂದ್ರ ಅಥವಾ ರಾಜ್ಯ ಸರ್ಕಾರದಿಂದ ಯಾವುದೇ ಅನುದಾನ, ಸಹಾಯಧನ ನೀಡುತ್ತಿಲ್ಲ. ಆದರೆ, ಸುಗಮ ಯಾತ್ರೆಗಾಗಿ ವಿವಿಧ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ.
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಬರುವ ಸಾಯತ ಸ್ವಾಯತ್ತ ಸಂಸ್ಥೆಯಾಗಿರುವ ರಾಜ್ಯ ಹಜ್ ಸಮಿತಿಯಿಂದ ಯಾತ್ರೆ ಪ್ರಾರಂಭ ವಾಗುವ ಮುನ್ನ ಹಜ್ ಕ್ಯಾಂಪ್ ಆಯೋ ಜಿಸಲಾಗುತ್ತದೆ. ಈ ವೇಳೆ ಯಾತ್ರಿಗಳು ಉಳಿದುಕೊಳ್ಳಲು ಬೋರ್ಡಿಂಗ್ ಮತ್ತು ಲಾಡ್ಡಿಂಗ್ ವ್ಯವಸ್ಥೆಗಳನ್ನು ಮಾಡಲಾಗುತ್ತದೆ.
ಕಾಗದ ಪತ್ರ, ವಿದೇಶಿ ವಿನಿಮಯ ಹಂಚಿಕೆ ವ್ಯವಸ್ಥೆ, ವಿಮಾನ ನಿಲ್ದಾಣಕ್ಕೆ ತಲುಪಿಸುವುದು ಸೇರಿದಂತೆ ಅಗತ್ಯ ವ್ಯವಸ್ಥೆಗಳನ್ನು ಸಂಬಂಧ ಪಟ್ಟ ಇಲಾಖೆಗಳ ಸಹಕಾರದೊಂದಿಗೆಒದಗಿಸಲಾಗುತ್ತದೆ ಎಂದು ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ ಇತ್ತೀಚೆಗೆ ನಡೆದ ವಿಧಾನಸಭಾ ಅಧಿವೇಶನದಲ್ಲಿ ಉತ್ತರ ನೀಡಿದ್ದಾರೆ.
ಜನಸಂಖ್ಯೆ ಆಧಾರದ ಮೇಲೆ ಎಷ್ಟುಯಾತ್ರಿಕರನ್ನು ಹಜ್ ಯಾತ್ರೆಗೆ ಕಳುಹಿಸ ಬೇಕು ಎಂಬುದನ್ನು ಮುಂಬೈ ನಲ್ಲಿರುವ ಹಜ್ ಸಮಿತಿ ನಿರ್ಧರಿಸುತ್ತದೆ. ಈ ಸಮಿತಿಯೊಂದಿಗೆ ರಾಜ್ಯ ಹಜ್ ಸಮಿತಿ ಸಂಯೋಜನೆ ಮಾಡುತ್ತದೆ. ಅರೇಬಿಯಾದಲ್ಲಿ ಕರ್ನಾಟಕದಿಂದ ತೆರಳುವ ಯಾತ್ರಿಕರ ಯೋಗಕ್ಷೇಮಕ್ಕೆ ಸ್ವಯಂ ಸೇವಕರನ್ನು ನಿಯೋಜಿಸಲಾಗುತ್ತದೆ.
ನವದೆಹಲಿ: ವರ್ತಕರಿಗೆ ದೀಪಾವಳಿ ಸಂದರ್ಭದಲ್ಲಿ ತಾತ್ಕಾಲಿಕ ನಿರಾಳತೆ ಸಿಕ್ಕಿದೆ. ಅಕ್ಟೋಬರ್ 15ರಿಂದ ಜಾರಿಯಾಗಬೇಕಿದ್ದ ಆಯ್ದ UPI ಮರ್ಚೆಂಟ್ ಪಾವತಿಗಳ ಮೇಲಿನ…
ಮೈಸೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಪುಟ್ಟರಂಗಶೆಟ್ಟಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. “ಸ್ಟಿಂಗ್ ಆಪರೇಷನ್ ಅಂದರೇನು ಎಂಬುದು…
ಮೈಸೂರು: ಸ್ಟಿಂಗ್ ಆಪರೇಷನ್ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುವ ಬದಲು, ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಶಾಸಕ ತನ್ವೀರ್ ಸೇಠ್…
ಮೈಸೂರು: ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರು: ಮಾಜಿ ಮುಖ್ಯಮಂತ್ರಿ…
ನಂಜನಗೂಡು: ಜಮೀನಿಗೆ ರಾತ್ರಿ ಕಾವಲು ಕಾಯಲು ತೆರಳಿದ್ದ ರೈತ, ಬೆಳಿಗ್ಗೆ ಮನೆಗೆ ಮರಳುವಾಗ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ನಂಜನಗೂಡು ತಾಲ್ಲೂಕಿನ…
ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…