ರಾಜ್ಯ

ಗ್ರೇಟರ್‌ ಬೆಂಗಳೂರು ಆಡಳಿತ 2ನೇ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ

ಬೆಳಗಾವಿ: ವಿಧಾನಸಭೆಯಲ್ಲಿ ಇಂದು ಗ್ರೇಟರ್‌ ಬೆಂಗಳೂರು ಆಡಳಿತ 2ನೇ ತಿದ್ದುಪಡಿ ವಿಧೇಯಕ ಮಂಡನೆ ಆಗಿದೆ.

ಡಿಸಿಎಂ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿ.ಕೆ.ಶಿವಕುಮಾರ್‌ ಅವರು ವಿಧಾನಸಭೆಯಲ್ಲಿ 2024ನೇ ಸಾಲಿನ ಗ್ರೇಟರ್‌ ಬೆಂಗಳೂರು ಆಡಳಿತ ವಿಧೇಯಕ ಮಂಡಿಸಿದರು.

ಬಳಿಕ ಮಾತನಾಡಿದ ಅವರು, ರಾಜ್ಯಸಭೆ ಸದಸ್ತೆ ಸುಧಾಮೂರ್ತಿ, ಚಿಕ್ಕಬಳ್ಳಾಪುರ ಸಂಸದ ಸುಧಾಕರ್‌ ಅವರ ಕ್ಷೇತ್ರದ ಕೆಲವು ಭಾಗ ಪಾಲಿಕೆ ವ್ಯಾಪ್ತಿಗೆ ಬರುತ್ತಿವೆ. ಜೊತೆಗೆ ಜಿಬಿಎ ಸದಸ್ಯರ ಪಟ್ಟಿಯಲ್ಲಿ ಪಾಲಿಕೆ ವ್ಯಾಪ್ತಿಯ ನಿವಾಸಿಯಾಗಿರುವ ಜನಪ್ರತಿನಿಧಿಗಳ ಹೆಸರು ಬಿಟ್ಟು ಹೋಗಿದ್ದು, ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು, ಪರಿಷತ್‌ ಸದಸ್ಯರನ್ನು ಜಿಬಿಎ ಸದಸ್ಯರನ್ನಾಗಿ ಸೇರಿಸಲು ಈ ತಿದ್ದುಪಡಿ ತರಲಾಗಿದೆ. ಸಿಎಂ ಅವರೇ ಜಿಬಿಎ ಮುಖ್ಯಸ್ಥರಾಗಿರುವ ಹಿನ್ನೆಲೆಯಲ್ಲಿ ಮುಖ್ಯ ಕಾರ್ಯದರ್ಶಿಗಳು ಹಾಗೂ ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅವರ ಹೆಸರು ಸೇರಿಸಲಾಗಿದೆ. ಇನ್ನು ಹಣಕಾಸು ಇಲಾಖೆ ಕಾರ್ಯದರ್ಶಿಗಳನ್ನು ಈ ಸದಸ್ಯರ ಸಮಿತಿಯಲ್ಲಿ ಸೇರಿಸಲು ನಿರ್ಧರಿಸಲಾಗಿದೆ. ಇತ್ತೀಚೆಗೆ ನಡೆದ ಜಿಬಿಎ ಮೊದಲ ಸಭೆಯಲ್ಲಿ ನಾವು ಈ ವಿಚಾರವನ್ನು ಗಮನಿಸಿದೆವು. ವಿರೋಧ ಪಕ್ಷದ ಸದಸ್ಯರು ತಮ್ಮ ರಾಜಕೀಯ ನಿಲುವಿನಿಂದಾಗಿ ಈ ಸಭೆಯಲ್ಲಿ ಭಾಗವಹಿಸಿರಲಿಲ್ಲ. ಹೀಗಾಗಿ ನಾವು ಈ ತಿದ್ದುಪಡಿ ತಂದು ಇವರುಗಳನ್ನು ಜಿಬಿಎ ಸದಸ್ಯರನ್ನಾಗಿ ಸೇರಿಸಲಾಗುತ್ತಿದೆ ಎಂದು ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

2 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

2 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

2 hours ago

ಸುಬ್ಬಮ್ಮ ಜೋಯಿಸ್ ಮೈಸೂರಿನಲ್ಲಿ ತ್ರಿವರ್ಣಧ್ವಜ ಹಾರಿಸಿದ್ದು

ಸೋನಿಯಾ ಎಮ್.ವಿ., ಉಪನ್ಯಾಸಕಿ, ಟೆರಿಷಿಯನ್ ಕಾಲೇಜ್ ಎಮ್. ಎನ್. ಜೋಯಿಸ್ ಮತ್ತು ಸುಬ್ಬಮ್ಮ ಜೋಯಿಸ್ ಮೈಸೂರಿನ ಸ್ವತಂತ್ರ ಹೋರಾಟಗಾರರಲ್ಲಿ ತಮ್ಮ…

2 hours ago

ಉರಿ ಉಂಡ ಕರ್ಪೂರ ಟಿ.ಎಸ್.ಸುಬ್ಬಣ್ಣ

ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…

2 hours ago

ಬ್ಯಾರಿಸ್ಟರ್ ಏನೋ ಆದೆ ಆದರೆ ಆಮೇಲೆ?

ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…

2 hours ago