ರಾಜ್ಯ

ರಾಜ್ಯದಲ್ಲಿ ನ್ಯಾನೋ ಟೆಕ್ನಾಲಜಿ ಸಂಶೋಧನೆಗೆ ಹೆಚ್ಚಿನ ಒತ್ತು: ಸಚಿವ ಎನ್.ಎಸ್ ಬೋಸರಾಜು

ಬೆಂಗಳೂರು: ಕರ್ನಾಟಕವನ್ನು ನ್ಯಾನೋ ಟೆಕ್ನಾಲಜಿಯ ಕ್ಷೇತ್ರದ ಪ್ರಮುಖ ಸಂಶೋಧನಾ ರಾಜ್ಯ ವನ್ನಾಗಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಇದಕ್ಕೆ ಹೆಚ್ಚಿನ ಆದ್ಯತೆ ನೀಡುವ ನಿಟ್ಟಿನಲ್ಲಿ ಕರ್ನಾಟಕ ರಿಸರ್ಚ್ ಫೌಂಡೇಶನ್ ಹಾಗೂ ಇ-ಕೆಆರ್‌ಡಿಐಪಿ (e-KRDIP ಕರ್ನಾಟಕ ಆರ್‌&ಡಿ ಇನ್ನೋವೇಷನ್‌ ಫ್ಲಾಟ್‌ಫಾರಂ Karnataka R&D Innovation Platform e-KRDIP) ಮೂಲಕ ನ್ಯಾನೋ ಸಂಶೋಧನೆಗೆ ಒತ್ತು ನೀಡಲಾಗುವುದು ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್ ಬೋಸರಾಜು ತಿಳಿಸಿದರು.

ಇಂದು ನಗರದ ಖಾಸಗಿ ಹೋಟೆಲ್ ನಲ್ಲಿ ಆಯೋಜಿಸಲಾಗಿದ್ದ ಬೆಂಗಳೂರು ಇಂಡಿಯಾ ನ್ಯಾನೋ 2024 ಕರ್ಟನ್ ರೈಸರ್ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದರು.

ಬೆಂಗಳೂರು ನಗರ ವಿಶ್ವದ ಪ್ರಮುಖ ಕರ್ನಾಟಕ ರಾಜ್ಯ ಕೈಗಾರಿಕಾ ಸ್ನೇಹಿ ರಾಜ್ಯಗಳಲ್ಲಿ ಪ್ರಮಖವಾಗಿದೆ. ಸ್ಟಾರ್ಟ್‌ ಅಪ್‌ಗಳ ಪ್ರೋತ್ಸಾಹಕ್ಕೆ, ಹೊಸ ಉದ್ಯಮಗಳ ಸ್ಥಾಪನೆಗೂ ರಾಜ್ಯ ಸರಕಾರ ಉತ್ತಮ ಸಹಕಾರ ನೀಡುತ್ತಿದೆ. ರಾಜ್ಯ ಸರಕಾರದ ಕ್ರಾಂತಿಕಾರಿ ಯೋಜನೆಗಳ ಪರಿಣಾಮದಿಂದ ವಿಶ್ವದ ಪ್ರಮುಖ ಸಂಸ್ಥೆಗಳು ಕರ್ನಾಟಕ ರಾಜ್ಯದಲ್ಲಿ ತಮ್ಮ ಘಟಕಗಳನ್ನು ಪ್ರಾರಂಭಿಸಿವೆ. ರಾಜ್ಯದಲ್ಲಿ ಸಂಶೋಧನೆಗೆ ಉತ್ತಮ ಪರಿಸರವಿದ್ದು, ಉತ್ತಮ ಮಾನವ ಸಂಪನ್ಮೂಲ ಕೂಡಾ ಲಭ್ಯವಿದೆ.

ರಾಜ್ಯದಲ್ಲಿ ಸ್ಟಾರ್ಟ್‌ ಅಪ್‌ಗಳು ಮತ್ತು ಉದ್ದಿಮೆಗಳು ನೂತನ ಉತ್ಪನ್ನಗಳ ಸಂಶೋಧನೆಗೆ ಮತ್ತು ಉತ್ಪಾದನೆಗೆ ಪೂರಕ ವಾತಾವರಣ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಸಂಶೋಧನಾ ಫೌಂಡೇಶನ್‌ ಸ್ಥಾಪಿಸಲಾಗಿದೆ. ರಾಜ್ಯವನ್ನು ಸಂಶೋಧನಾ ಹಬ್‌ ಆಗಿಸುವ ನಿಟ್ಟಿನಲ್ಲಿ ಇದೊಂದು ಕ್ರಾಂತಿಕಾರಿ ಹೆಜ್ಜೆಯಾಗಿದೆ. ಹೊಸ ಸಂಶೋಧನೆಗಳು ಫಲ ಜನ ಸಾಮಾನ್ಯರಿಗೆ, ಸ್ಟಾರ್ಟ್‌ ಅಪ್‌ಗಳಿಗೆ, ಉದ್ದಿಮೆಗಳಿಗೆ ತಲುಪಿಸುವ ನಿಟ್ಟಿನಲ್ಲಿ ಇ-ಕೆಆರ್‌ಡಿಐಪಿ (ಕರ್ನಾಟಕ ಆರ್‌&ಡಿ ಇನ್ನೋವೇಷನ್‌ ಫ್ಲಾಟ್‌ಫಾರಂ Karnataka R&D Innovation Platform e-KRDIP) ಯನ್ನು ಕೂಡಾ ಸ್ಥಾಪಿಸಲಾಗುತ್ತಿದೆ. ಈ ಎರಡು ಸಂಸ್ಥೆಗಳ ಮೂಲಕ ನ್ಯಾನೋ ಟೆಕ್ನಾಲಜಿ ಸಂಶೋಧನೆ ಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದರು.

ಬೆಂಗಳೂರು ಇಂಡಿಯಾ ನ್ಯಾನೋ 2024 ಮಹತ್ವದ ಸಮಾವೇಶ ವಾಗಿದ್ದು ಆಗಸ್ಟ್ 1 ರಿಂದ 3 ರ ವರೆಗೆ ನಡೆಯಲಿದೆ. ಈ ಬಾರಿ ನ್ಯಾನೋ ಟೆಕ್ನಾಲಜಿ ಫಾರ್ ಸಸ್ಟೆನಬಲ್ ಕ್ಲೈಮೇಟ್, ಎನರ್ಜಿ ಮತ್ತು ಹೆಲ್ತ್ ಕೇರ್ ಥೀಮ್ ಅಡಿಯಲ್ಲಿ ನಡೆಯಲಿದ್ದು. ಈಗಾಗಲೇ ನಮ್ಮ ಇಲಾಖೆಯ ಅಡಿಯಲ್ಲಿ ಸಂಶೋಧನೆ ಗೆ ಅಗತ್ಯ ಅನುದಾನ ನೀಡಲಾಗುತ್ತಿದೆ. ಈ ಕ್ಷೇತ್ರದಲ್ಲಿ ಇನ್ನು ಹೆಚ್ಚಿನ ಸಂಶೋಧನೆ ಅಗತ್ಯವಿದ್ದು ಈ ಬಗ್ಗೆ ಅಗತ್ಯ ಕಾರ್ಯಕ್ರಮಗಳಿಗೆ ಸರಕಾರದ ಮಟ್ಟದಲ್ಲಿ ಚಿಂತನೆ ನಡೆಸಲಾಗಿದೆ ಎಂದರು.

ಕಾರ್ಯಕ್ರಮ ದಲ್ಲಿ ಇಲಾಖೆಯ ಕಾರ್ಯದರ್ಶಿ ಗಳಾದ ಏಕ್ ರೂಪ ಕೌರ್, ಕೆಸ್ಟೆಪ್ಸ್ ವ್ಯವಸ್ಥಾಪಕ ನಿರ್ದೇಶಕರಾದ ಪವನ್ ಕುಮಾರ್ ಮಾಲಪಟಿ, ನ್ಯಾನೋ ಟೆಕ್ನಾಲಜಿ ವಿಷನ್ ಗ್ರೂಪ್ ನ ಚೇರ್ಮನ್ ಪ್ರೊ. ನವಕಾಂತ್ ಭಟ್, ಬೆಂಗಳೂರು ಇಂಡಿಯಾ ನ್ಯಾನೋ 2024 ಕಾರ್ಯಕ್ರಮ ದ ಉಸ್ತುವಾರಿ ಪ್ರೊ. ಪಿ ಎಸ್ ಅನಿಲ್ ಕುಮಾರ್ ಉಪಸ್ಥಿತರಿದ್ದರು

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

2 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

3 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

4 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

4 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

5 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

6 hours ago