ಬೆಳಗಾವಿ: ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಖಾತೆಗೆ ಕೆಲ ತಿಂಗಳಿಂದ ಹಣ ಜಮೆಯಾಗಿದಿರುವುದು ರಾಜ್ಯಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ.
ಇದನ್ನು ಓದಿ: ಗೃಹ ಲಕ್ಷ್ಮಿ ಹೊಸ ನೋಂದಣಿ ಸ್ಥಗಿಂತಗೊಂಡಿಲ್ಲ, ಇದು ನಿರಂತರವಾಗಿ ನಡೆಯುವ ಯೋಜನೆ: ಲಕ್ಷ್ಮಿ ಹೆಬ್ಬಾಳ್ಕರ್
ಗೃಹಲಕ್ಷ್ಮಿ ಯೋಜನೆ ಹಣದ ಗೊಂದಲದ ವಿಚಾರವಾಗಿ ಸದನದಲ್ಲಿ ಪ್ರತಿಕ್ರಿಯೆ ನೀಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು, ನಾನು ಏನು ಹೇಳಿದ್ದೇನೆ ಅದಕ್ಕೆ ಈಗಲೂ ಬದ್ಧನಾಗಿದ್ದೇನೆ. ಆಗಸ್ಟ್ ತಿಂಗಳವರೆಗೆ ಗೃಹಲಕ್ಷ್ಮಿ ಹಣ ಫಲಾನುಭವಿಗಳ ಖಾತೆಗೆ ಜಮೆ ಆಗಿದೆ ಎಂದು ಹೇಳಿದರು.
ಗೃಹಲಕ್ಷ್ಮಿಯರಿಗೆ 23 ಕಂತುಗಳ ಹಣ ಪಾವತಿ ಮಾಡಿದ್ದೇನೆ. ಕಳೆದ ಆಗಸ್ಟ್‌ವರೆಗೆ 46 ಸಾವಿರ ಕೋಟಿ ಹಣ ಪಾವತಿಯಾಗಿದೆ. ಯಾವುದೇ ಮಧ್ಯವರ್ತಿಗಳ ಹಾವಳಿಯಿಲ್ಲದೇ ನೇರವಾಗಿ ಗೃಹಲಕ್ಷ್ಮಿಯರ ಖಾತೆಗೆ ಹಣ ಜಮೆಯಾಗಿದೆ ಎಂದು ಹೇಳಿದರು.





