ಬೆಳಗಾವಿ : ಗೃಹಲಕ್ಷ್ಮಿ ಯೋಜನೆಯ ಫೆಬ್ರವರಿ ತಿಂಗಳ ಹಣ ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹಲಕ್ಷ್ಮಿ ಯೋಜನೆಯ ಜನವರಿ ತಿಂಗಳ ಹಣವೂ ಈಗಾಗಲೇ ಫಲಾನುಭವಿಗಳ ಖಾತೆಗೆ ಸಂದಾಯವಾಗಿದೆ. ಜೊತೆಗೆ ಫೆಬ್ರವರಿ ತಿಂಗಳ ಹಣ ಕೂಡ ಈಗಾಗಲೇ ಬಿಡುಗಡೆಯಾಗಿದ್ದು, ಶೀಘ್ರವೇ ಫೆಬ್ರವರಿ ತಿಂಗಳ ಹಣ ಸಂದಾಯವಾಗಲಿದೆ ಎಂದು ತಿಳಿಸಿದರು.
ಯತ್ನಾಳ್ ಅವರ ಅವಶ್ಯಕತೆ ಕಾಂಗ್ರೆಸ್ ಪಕ್ಷಕ್ಕಿಲ್ಲ
ಬಿಜೆಪಿಯಿಂದ ಉಚ್ಛಾಟನೆಗೊಂಡಿರುವ ಬಸವನಗೌಡ ಪಾಟೀಲ್ ಯತ್ನಾಳ್ ಅವರ ಅವಶ್ಯಕತೆ ಕಾಂಗ್ರೆಸ್ ಪಕ್ಷಕ್ಕೆ ಇಲ್ಲ. ಕಾಂಗ್ರೆಸ್ ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಹೊಂದಿರುವ ಪಕ್ಷ. ಸರ್ವಜನಾಂಗಕ್ಕೂ ಬೇಕಾಗಿರುವ ಪಕ್ಷ ಕಾಂಗ್ರೆಸ್ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.





