ರಾಜ್ಯ

ಗೃಹಲಕ್ಷ್ಮಿ ಸಂಘಗಳ ಮೂಲಕ ಮಹಿಳೆಯರಿಗೆ ಆರ್ಥಿಕ ಬಲ ತುಂಬಲು ಯೋಜನೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೀದರ್ : ರಾಜ್ಯದಲ್ಲಿ 30 ರಿಂದ 40 ಲಕ್ಷ ಗೃಹಲಕ್ಷ್ಮಿ ಸಂಘಗಳನ್ನು ರಚಿಸುವ ಯೋಜನೆಯಿದ್ದು, ಈ ಮೂಲಕ ಯಜಮಾನಿಯರಿಗೆ ಆರ್ಥಿಕವಾಗಿ ಬಲ ತುಂಬಲು ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಬೀದರ್ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶನಿವಾರ ನಡೆದ ಕಲಬುರಗಿ ವಿಭಾಗ ಮಟ್ಟದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಎರಡನೇ ದಿನದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವರು ಮಾತನಾಡಿದರು. ‌

ಈ ವರ್ಷ ಅಂಗನವಾಡಿ ಆರಂಭವಾಗಿ 50 ವರ್ಷ ತುಂಬುತ್ತಿದ್ದು, ಅಕ್ಟೋಬರ್‌ನಲ್ಲಿ ಸುವರ್ಣ ಮಹೋತ್ಸವ ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಗೃಹಲಕ್ಷ್ಮಿ ಸಂಘಗಳ ಘೋಷಣೆ ಮಾಡಿ ಇನ್ನಷ್ಟು ಬಲ ತುಂಬಲಾಗುವುದು. ಇಲಾಖೆಯಲ್ಲಿ ಸಾಕಷ್ಟು ಯೋಜನೆಗಳಿದ್ದು, ಜನರಿಗೆ ತಿಳಿವಳಿಕೆ ಮೂಡಿಸಲು ಇನ್ನೂ ಹೆಚ್ಚಿನ ಕ್ರಮ ಕೈಗೊಳ್ಳಬೇಕು. ನಮ್ಮ ಇಲಾಖೆ ಜನರಿಗೆ, ಜನರ ಬದುಕಿಗೆ ಹತ್ತಿರವಾದ ಇಲಾಖೆ, ಅಧಿಕಾರಿಗಳು ಹೆಚ್ಚು ಕಾಳಜಿಯಿಂದ ಕೆಲಸ ಮಾಡಬೇಕು ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಬಾಲ್ಯ ವಿವಾಹ ತಡೆಯಲು ವಿಶೇಷ ಕ್ರಮ ಅಗತ್ಯ : ಬಾಲ್ಯ ವಿವಾಹವನ್ನು ತಡೆಯಲು ಅಧಿಕಾರಿಗಳು ವಿಶೇಷ ಕ್ರಮಕೈಗೊಳ್ಳಬೇಕು, ಸ್ವತಃ ಕರೆ ಮಾಡಿ ತನ್ನ ವಿವಾಹವನ್ನು ತಪ್ಪಿಸುವಂತೆ ಅಧಿಕಾರಿಗಳನ್ನು ಕೋರಿದ್ದ ಜಿಲ್ಲೆಯ ಬಾಲಕಿಯನ್ನು ಕರೆಸಿ ಸನ್ಮಾನಿಸಬೇಕು, ಜೊತೆಗೆ ಆರ್ಥಿಕ ಸಹಾಯ ಮಾಡಬೇಕು. ಇದರಿಂದ ಬೇರೆಯವರಿಗೂ‌ ಕೂಡ ಸಹಾಯವಾಗುತ್ತದೆ. ಎಲ್ಲಾ ಇಲಾಖೆಗಳು ಕೈಜೋಡಿಸಿದಾಗ ಅನಿಷ್ಟ ಪದ್ಧತಿಗಳನ್ನು ತಡೆಯಲು ಸಾಧ್ಯ. ಜಾಗೃತಿ ಮೂಡಿಸುವುದರ ಜೊತೆಗೆ ಕಠಿಣ ಕ್ರಮದ ಮೂಲಕ ಭಯ ಹುಟ್ಟಿಸಿದರೆ ಅನಿಷ್ಟ ಪದ್ಧತಿ ನಿಲ್ಲಲು ಸಾಧ್ಯ ಎಂದು ತಿಳಿಸಿದರು.

ಕೇಂದ್ರ ಹಾಗೂ ರಾಜ್ಯದಿಂದ ಕಾಲಕಾಲಕ್ಕೆ ನೀಡಲಾಗುವ ಗುರಿಯನ್ನು ತಲುಪಲೇಬೇಕು. ಇಲಾಖೆ ಯೋಜನೆ ಅನುಷ್ಠಾನದಲ್ಲಿ ಹಿಂದೆ ಬಿದ್ದಲ್ಲಿ ಅಧಿಕಾರಿ, ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು‌.

ಕಲಬುರಗಿ ವಿಭಾಗದಲ್ಲಿ ಗೃಹಲಕ್ಷ್ಮಿ ಯೋಜನೆಗೆ 10 ಸಾವಿರ ಕೋಟಿ ಈ ಭಾಗಕ್ಕೆ ಗೃಹ ಲಕ್ಷ್ಮೀ ಯೋಜನೆ ಮೂಲಕ 10 ಸಾವಿರ ಕೋಟಿ ರೂಪಾಯಿ ನೀಡಲಾಗಿದೆ. ಯಾರಿಗೂ ಯೋಜನೆ ಕೈ ತಪ್ಪದಂತೆ ಕ್ರಮ ಕೈಗೊಳ್ಳಬೇಕು. ಗೃಹ ಲಕ್ಷ್ಮೀ ಹಣದಿಂದ ಮಹಿಳೆಯರು ಸಾಕಷ್ಟು ಕಾರ್ಯಕ್ರಮ ಮಾಡುತ್ತಿದ್ದಾರೆ. ಅವುಗಳನ್ನು ಪ್ರಚಾರ ಮಾಡುವುದರಿಂದ ಇತರರಿಗೂ ಲಾಭವಾಗುತ್ತದೆ. ಗೃಹ ಲಕ್ಷ್ಮೀ ಸಂಘಗಳ ಮೂಲಕ ಇನ್ನೂ ಹೆಚ್ಚಿನ ಪ್ರಯೋಜನವಾಗುವಂತೆ ಹೇಗೆ ಮಾಡಬಹುದು ಎನ್ನುವ ಚಿಂತನೆ ಮಾಡುತ್ತಿದ್ದೇವೆ ಎಂದು ತಿಳಿಸಿದರು.

ಅಕ್ಕ ಪಡೆಗೆ ಸಚಿವರ ಶ್ಲಾಘನೆ: ಬೀದರ್ ಜಿಲ್ಲೆಯಲ್ಲಿ 10 ಜನ ಮಹಿಳಾ ಪೊಲೀಸ್ ತಂಡದಿಂದ ಅಕ್ಕ ಪಡೆ ರಚಿಸಿ ಶಾಲಾ- ಕಾಲೇಜು, ಗಾರ್ಡನ್, ಹಾಸ್ಟೆಲ್ ಮೊದಲಾದ ಕಡೆ ನಿರಂತರ ನಿಗಾ ವಹಿಸುವ ಮೂಲಕ ಹೆಣ್ಣು ಮಕ್ಕಳಿಗೆ ವಿಶೇಷ ರಕ್ಷಣೆ ನೀಡುತ್ತಿರುವ ಬಗ್ಗೆ ಮಾಹಿತಿ ಪಡೆದ ಸಚಿವರು, ಇದೇ ಯೋಜನೆಯನ್ನು ರಾಜ್ಯಾದ್ಯಂತ ಜಾರಿಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಅಂಗನವಾಡಿ ಕಟ್ಟಡಗಳ ದುರಸ್ತಿಗೆ ಆದ್ಯತೆ: ಅಂಗನವಾಡಿ ಕಟ್ಟಡಗಳ ದುರಸ್ತಿಗೆ ಹೆಚ್ಚಿನ ಆದ್ಯತೆ ನೀಡಬೇಕು, ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಸಿಇಒ ಅಂಗನವಾಡಿ ಕೇಂದ್ರಗಳಿಗೆ ಆಗಾಗ ಭೇಟಿ ನೀಡುತ್ತಿರಬೇಕು. ಎಲ್ಲಾ ಇಲಾಖೆಯ ಅಧಿಕಾರಿಗಳು ಸಾಮಾಜಿಕ ಜವಾಬ್ದಾರಿಯಿಂದ ಕೆಲಸ ಮಾಡಬೇಕು, ಸಮಸ್ಯೆಗಳಿಗೆ ತಕ್ಷಣವೇ ಸ್ಪಂದಿಸಬೇಕು. ಆಗ ಮಾತ್ರ ಸರ್ಕಾರಕ್ಕೂ ಒಳ್ಳೆ ಹೆಸರು ಬರುತ್ತದೆ. ಸಮಾಜಕ್ಕೂ ಸಹಾಯವಾಗುತ್ತದೆ ಎಂದು ಮಾಹಿತಿ ಹಂಚಿಕೊಂಡರು.

ಯೋಜನೆಗಳ ಕುರಿತು ಜನರಿಗೆ ಅರಿವು: ಇಲಾಖೆಯಲ್ಲಿ ಸಾಕಷ್ಟು ಯೋಜನೆಗಳಿವೆ. ಅವುಗಳ ಕುರಿತು ಜನರಿಗೆ ಸರಿಯಾದ ಅರಿವಿಲ್ಲ. ಯೋಜನೆಗಳನ್ನು ಜನರಿಗೆ ತಲುಪಿಸಬೇಕು. ಮಹಿಳೆಯರಿಗೆ ಸಹಾಯ ಮಾಡಲು ಬೇಕಾದಷ್ಟು ಅವಕಾಶಗಳಿವೆ. ಈ ಮೂಲಕ ಹೆಚ್ಚು ಹೆಚ್ಚು ಜನರನ್ನು ತಲುಪಬೇಕು ಎಂದು ಕರೆ ನೀಡಿದರು.

ಈ ವೇಳೆ ಇಲಾಖೆಯ ಕಾರ್ಯದರ್ಶಿ ಡಾ.ಶಾಮ್ಲಾ ಇಕ್ಬಾಲ್, ಜಿಲ್ಲಾಧಿಕಾರಿ ಶಿಲ್ಪಾ‌ ಶರ್ಮ, ಜಿಲ್ಲಾ ಪಂಚಾಯತ್ ಸಿಇಒ ಗಿರೀಶ್ ಬಡೊಲೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ, ಇಲಾಖೆಯ ನಿರ್ದೇಶಕ ರಾಘವೇಂದ್ರ, ಜಂಟಿ ಕಾರ್ಯದರ್ಶಿ ಹಾಗೂ ಸಚಿವರ ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್.ನಿಶ್ಚಲ್ , ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಅಧಿನಿಯಮದ ರಾಜ್ಯ ಆಯುಕ್ತ ದಾಸ್ ಸೂರ್ಯವಂಶಿ ಸೇರಿದಂತೆ ಇಲಾಖೆಯ ಜಂಟಿ ನಿರ್ದೇಶಕರು, ಉಪ ನಿರ್ದೇಶಕರು, ಅಧಿಕಾರಿ ವರ್ಗದವರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಮಂಡ್ಯ ಕೃಷಿ ಪ್ರದಾನ ಜಿಲ್ಲೆ: ಸಿಎಂ ಸಿದ್ದರಾಮಯ್ಯ

ಮಂಡ್ಯ: ಲ್ಯಾಬ್‌ ಟು ಲ್ಯಾಂಡ್‌ ಆದರೆ ಮಾತ್ರ ರೈತರಿಗೆ ಸಂಪೂರ್ಣ ಅನುಕೂಲವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಈ ಕುರಿತು…

16 mins ago

ಹೊಸ ದಾಖಲೆ ನಿರ್ಮಿಸಿದ ಬೆಂಗಳೂರು ಪೊಲೀಸರು: ಏನದು ಗೊತ್ತಾ?

ಬೆಂಗಳೂರು: ಮಾದಕದ್ರವ್ಯ ಮಾರಾಟ ಮತ್ತು ಮಾದಕದ್ರವ್ಯ ಸೇವನೆಯನ್ನು ನಿಗ್ರಹಿಸುವ ನಿಟ್ಟಿನಲ್ಲಿ ಬೆಂಗಳೂರು ಪೊಲೀಸರು ಹೊಸ ದಾಖಲೆ ನಿರ್ಮಿಸಿದ್ದಾರೆ. ಪ್ರಸಕ್ತ ಸಾಲಿನ…

22 mins ago

ನಮ್ಮ ಸರ್ಕಾರ ರೈತರ ಪರ ಸರ್ಕಾರ: ಸಚಿವ ಚಲುವರಾಯಸ್ವಾಮಿ

ಮಂಡ್ಯ: ಸಿಎಂ ಸಿದ್ದರಾಮಯ್ಯ ರೈತರ ಬಗ್ಗೆ ಹಾಗೂ ಸಾಮಾನ್ಯರ ಬಗ್ಗೆ ಅತೀ ಹೆಚ್ಚಿನ ಕಾಳಜಿ ಇಟ್ಟುಕೊಂಡಿದ್ದಾರೆ ಎಂದು ಕೃಷಿ ಹಾಗೂ…

34 mins ago

ಮಂಡ್ಯದಲ್ಲಿ ಕೃಷಿ ಮೇಳ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

ಮಂಡ್ಯ: ಮೂರು ದಿನಗಳ ಕಾಲ ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯಲಿರುವ ಕೃಷಿ ಮೇಳಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ಕೃಷಿ…

50 mins ago

ಚಳಿಗಾಲದ ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ: ಆರ್.‌ಅಶೋಕ್‌

ಬೆಂಗಳೂರು: ಸೋಮವಾರದಿಂದ ಬೆಳಗಾವಿಯ ಸುವರ್ಣ ಸೌಧದಲ್ಲಿ ಆರಂಭವಾಗುವ ಚಳಿಗಾಲದ ಅಧಿವೇಶನದ ವೇಳೆ ಆಡಳಿತರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ…

1 hour ago

ಸಿಎಂ ಬದಲಾವಣೆ ಚರ್ಚೆಗೆ ಸಚಿವ ದಿನೇಶ್‌ ಗುಂಡೂರಾವ್‌ ಪ್ರತಿಕ್ರಿಯೆ

ಮೈಸೂರು: ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ಸಚಿವ ದಿನೇಶ್‌ ಗುಂಡೂರಾವ್‌ ಸ್ಪಷ್ಟಪಡಿಸಿದ್ದಾರೆ. ಸಿಎಂ ಬದಲಾವಣೆ ಕುರಿತ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ…

2 hours ago