ಬೆಳಗಾವಿ : ಗೃಹಲಕ್ಷ್ಮಿ ಯೋಜನೆಯ ಹಣ ನೀಡುವ ಮೂಲಕ ಸರ್ಕಾರ ಅತ್ತೆ-ಸೊಸೆ ನಡುವೆ ಜಗಳ ತಂದಿಡುವ ಕೆಲಸ ಮಾಡುತ್ತಿದೆ ಎಂದು ಆರೋಪಿಸುತ್ತಿದ್ದ ವಿಪಕ್ಷಗಳಿಗೆ ಗದಗದ ಅತ್ತೆ-ಸೊಸೆ ಗೃಹಲಕ್ಷ್ಮಿ ಹಣ ಕೂಡಿಟ್ಟು ಬೋರ್ ವೆಲ್ ಕೊರೆಸಿ ಉತ್ತರ ನೀಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳಕರ್ ಹೇಳಿದ್ದಾರೆ.
ಭಾನುವಾರ ತಮ್ಮ ಗೃಹ ಕಚೇರಿಯಲ್ಲಿ ಮಾತನಾಡಿದ ಅವರು, ಗದಗದ ಅತ್ತೆ, ಸೊಸೆ ಎಲ್ಲರಿಗೂ ಮಾದರಿ ಆಗಿದ್ದಾರೆ ಎಂದರು.
ಗದಗ ಜಿಲ್ಲೆಯ ಗಜೇಂದ್ರಗಡದ ಅತ್ತೆ, ಸೊಸೆ ಕಾರ್ಯ ನೋಡಿ ತುಂಬಾ ಖುಷಿ ಆಯಿತು. ಗೃಹಲಕ್ಷ್ಮಿ ಯೋಜನೆಯ ಹಣ ಅತ್ತೆಗೊ, ಸೊಸೆಗೊ ಎಂದು ಹೇಳುವ ಮೂಲಕ ವಿರೋಧ ಪಕ್ಷದವರು ಜಗಳ ಹಚ್ಚುವ ಕೆಲಸ ಮಾಡುತ್ತಿದ್ದರು. ಈಗ ಅತ್ತೆ, ಸೊಸೆ ಇಬ್ಬರೂ ಕೂಡಿಟ್ಟ ಹಣದಿಂದ ಬೊರವೆಲ್ ಕೊರೆಸಿ, ಮಾದರಿಯಾಗಿದ್ದಾರೆ ಎಂದರು.
ಬೋರ್ ವೆಲ್ ನಿಂದ ನೀರು ಹರಿಸಿ, ವ್ಯವಸಾಯ ಮಾಡುತ್ತಿದ್ದಾರೆ. ಗದಗದ ಅತ್ತೆ, ಸೊಸೆ ನಿಜವಾಗಿಯೂ ಆದರ್ಶವಾದಿಗಳು ಆಗಿದ್ದಾರೆ. ಮಹಿಳೆಯರ ಆರ್ಥಿಕ ಸಬಲೀಕರಣ ಮಾಡುವ ಸಲುವಾಗಿ ಎರಡು ಸಾವಿರ ಹಣ ಕೊಡಲಾಗುತ್ತಿದೆ. ಈ ರೀತಿಯ ಹಣವನ್ನ ಕೂಡಿಟ್ಟು ಒಳ್ಳೆಯ ಕೆಲಸ ಮಾಡುತ್ತಿದ್ದಾರೆ ಎಂದು ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು.
ಐತಿಹಾಸಿಕ ಗಾಂಧಿ ಭಾರತ ಕಾರ್ಯಕ್ರಮ
ಇದೇ 26,27 ರಂದು ಬೆಳಗಾವಿಯಲ್ಲಿ ನಡೆಯಲಿರುವ ಎಐಸಿಸಿ ಅಧಿವೇಶನ ಐತಿಹಾಸಿಕ ಕಾರ್ಯಕ್ರಮವಾಗಲಿದೆ. ಮಹಾತ್ಮಗಾಂಧಿ ಅವರ ಸಾರಥ್ಯದಲ್ಲಿ ನಡೆದ ಏಕೈಕ ಅಧಿವೇಶನ ಬೆಳಗಾವಿ ಅದಿವೇಶನ. ಇದು 100 ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಇದೀಗ ಎರಡು ದಿನಗಳ ಕಾಲ ಅದ್ದೂರಿ ಕಾರ್ಯಕ್ರಮ ನಡೆಯಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಬೆಂಗಳೂರು: ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರನ್ನು ಕಾಂಗ್ರೆಸ್‌ನಿಂದ ಅಮಾನತುಗೊಳಿಸಿ ಡಿಸಿಎಂ ಡಿ.ಕೆ.ಶಿವಕುಮಾರ್ ಆದೇಶ ಹೊರಡಿಸಿದ್ದಾರೆ. ದಾವಣಗೆರೆ ದಕ್ಷಿಣ ಕ್ಷೇತ್ರದ…
ಪಾಟ್ನಾ: ಬಿಹಾರದ ನೂತನ ಸಿಎಂ ಆಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕರಿಸಿದರು. ಪಾಟ್ನಾದ ಲೋಕಭವನದಲ್ಲಿ ರಾಜ್ಯಪಾಲ ಸೈಯದ್…
ಶ್ರೀರಂಗಪಟ್ಟಣ : ಶ್ರೀರಂಗಪಟ್ಟಣದ ಟೌನ್‌ನಲ್ಲಿ ನಡೆದ ಮುತ್ತು ಮಾರಮ್ಮ ದೇವಿ ಕರಗದ ವೇಳೆ ಕೊಂಡದಲ್ಲಿ ಬಿದ್ದು ಇಬ್ಬರು ಗಾಯಗೊಂಡ ಘಟನೆ…
ಮಂಡ್ಯ: ಜಿಲ್ಲೆಯ ನಾಗಮಂಗಲದ ಶ್ರೀ ಆದಿಚುಂಚನಗಿರಿ ಕ್ಷೇತ್ರಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಬಹುಕೋಟಿ ರೂ ವೆಚ್ಚದಲ್ಲಿ ನಿರ್ಮಿಸಿರುವ…
ಢಾಕಾ: ಭಾರೀ ಬಿರುಗಾಳಿಯಿಂದ ಅಂಡಮಾನ್ ಸಮುದ್ರದಲ್ಲಿ ಜನದಟ್ಟಣೆಯಿಂದ ತುಂಬಿದ್ದ ದೋಣಿ ಮುಳುಗಿ ರೋಹಿಂಗ್ಯಾ ನಿರಾಶ್ರಿತರು ಮತ್ತು ಬಾಂಗ್ಲಾದೇಶಿ ಪ್ರಜೆಗಳು ಸೇರಿದಂತೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಪ್ಪ ಗ್ರಾಮದ ನೀರಿನ…