ರಾಜ್ಯ

ಗೃಹಲಕ್ಮಿ | ವಿಪಕ್ಷಗಳಿಗೆ ಅತ್ತೆ-ಸೊಸೆ ಉತ್ತರ ನೀಡಿದ್ದಾರೆ; ಲಕ್ಷ್ಮಿ ಹೆಬ್ಬಾಳಕರ

ಬೆಳಗಾವಿ : ಗೃಹಲಕ್ಷ್ಮಿ ಯೋಜನೆಯ ಹಣ ನೀಡುವ ಮೂಲಕ ಸರ್ಕಾರ ಅತ್ತೆ-ಸೊಸೆ ನಡುವೆ ಜಗಳ ತಂದಿಡುವ ಕೆಲಸ ಮಾಡುತ್ತಿದೆ ಎಂದು ಆರೋಪಿಸುತ್ತಿದ್ದ ವಿಪಕ್ಷಗಳಿಗೆ ಗದಗದ ಅತ್ತೆ-ಸೊಸೆ ಗೃಹಲಕ್ಷ್ಮಿ ಹಣ ಕೂಡಿಟ್ಟು ಬೋರ್ ವೆಲ್ ಕೊರೆಸಿ ಉತ್ತರ ನೀಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳಕರ್ ಹೇಳಿದ್ದಾರೆ. ‌

ಭಾನುವಾರ ತಮ್ಮ ಗೃಹ ಕಚೇರಿಯಲ್ಲಿ ಮಾತನಾಡಿದ ಅವರು, ಗದಗದ ಅತ್ತೆ, ಸೊಸೆ ಎಲ್ಲರಿಗೂ ಮಾದರಿ ಆಗಿದ್ದಾರೆ ಎಂದರು‌.‌

ಗದಗ ಜಿಲ್ಲೆಯ ಗಜೇಂದ್ರಗಡದ ಅತ್ತೆ, ಸೊಸೆ ಕಾರ್ಯ ನೋಡಿ ತುಂಬಾ ಖುಷಿ ಆಯಿತು. ಗೃಹಲಕ್ಷ್ಮಿ ಯೋಜನೆಯ ಹಣ ಅತ್ತೆಗೊ, ಸೊಸೆಗೊ ಎಂದು ಹೇಳುವ ಮೂಲಕ ವಿರೋಧ ಪಕ್ಷದವರು ಜಗಳ ಹಚ್ಚುವ ಕೆಲಸ ಮಾಡುತ್ತಿದ್ದರು.‌ ಈಗ ಅತ್ತೆ, ಸೊಸೆ ಇಬ್ಬರೂ ಕೂಡಿಟ್ಟ ಹಣದಿಂದ ಬೊರವೆಲ್ ಕೊರೆಸಿ, ಮಾದರಿಯಾಗಿದ್ದಾರೆ ಎಂದರು‌.

ಬೋರ್ ವೆಲ್ ನಿಂದ ನೀರು ಹರಿಸಿ, ವ್ಯವಸಾಯ ಮಾಡುತ್ತಿದ್ದಾರೆ. ಗದಗದ ಅತ್ತೆ, ಸೊಸೆ ನಿಜವಾಗಿಯೂ ಆದರ್ಶವಾದಿಗಳು ಆಗಿದ್ದಾರೆ. ಮಹಿಳೆಯರ ಆರ್ಥಿಕ ಸಬಲೀಕರಣ ಮಾಡುವ ಸಲುವಾಗಿ ಎರಡು ಸಾವಿರ ಹಣ ಕೊಡಲಾಗುತ್ತಿದೆ. ಈ ರೀತಿಯ ಹಣವನ್ನ ಕೂಡಿಟ್ಟು ಒಳ್ಳೆಯ ಕೆಲಸ ಮಾಡುತ್ತಿದ್ದಾರೆ ಎಂದು ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು.

ಐತಿಹಾಸಿಕ ಗಾಂಧಿ ಭಾರತ ಕಾರ್ಯಕ್ರಮ
ಇದೇ 26,27 ರಂದು ಬೆಳಗಾವಿಯಲ್ಲಿ ನಡೆಯಲಿರುವ ಎಐಸಿಸಿ ಅಧಿವೇಶನ ಐತಿಹಾಸಿಕ ಕಾರ್ಯಕ್ರಮವಾಗಲಿದೆ. ಮಹಾತ್ಮಗಾಂಧಿ ಅವರ ಸಾರಥ್ಯದಲ್ಲಿ ನಡೆದ ಏಕೈಕ ಅಧಿವೇಶನ ಬೆಳಗಾವಿ ಅದಿವೇಶನ. ಇದು 100 ವರ್ಷ ಪೂರೈಸುತ್ತಿರುವ‌ ಹಿನ್ನೆಲೆಯಲ್ಲಿ ಇದೀಗ ಎರಡು ದಿನಗಳ ಕಾಲ ಅದ್ದೂರಿ ಕಾರ್ಯಕ್ರಮ ನಡೆಯಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಶತಕ ಬಾರಿಸಿದ ಸಿಎಂ ಎದುರು ಸವಾಲುಗಳೂ ಇವೆ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…

20 hours ago

ಎಐ; ಮನುಕುಲದ ವಿನಾಶಕ್ಕೆ ಕಾರಣವಾಗಲಿದೆಯೇ?

ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…

20 hours ago

ರಾಜ್ಯದಲ್ಲಿ ೧೯೮೩ರ ಇತಿಹಾಸ ಮರುಕಳಿಸುತ್ತದೆಯೇ?

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ರಾಜಕೀಯದಲ್ಲಿ ೧೯೮೩ರ ರಾಜಕೀಯ ಸನ್ನಿವೇಶ ರೂಪುಗೊಳ್ಳುತ್ತಿದೆಯೇ ಎಂಬ ಅನುಮಾನಗಳು ಶುರುವಾಗಿವೆ. ಅಂದ ಹಾಗೆ…

20 hours ago

ಕೆಎಚ್‌ಬಿ ಕಾಲೋನಿ ನಿವಾಸಿಗಳ ಜೀವನ ಹೈರಾಣ

ಎಂ.ಕೇಶವ ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು ಮೈಸೂರು: ಒಂದರ ಮೇಲೊಂದರಂತೆ ಎರಡು…

20 hours ago

ಗಣೇಶೋತ್ಸವಕ್ಕೆ ಡಿಜೆ ನಿಷೇಧ: ಮಿಶ್ರ ಪ್ರತಿಕ್ರಿಯೆ

ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…

20 hours ago

50 ವರ್ಷಗಳ ನಂತರ ಮೊದಲ ಬಾರಿ ಬರಿದಾದ ಕಾರಿಗನಹಳ್ಳಿ ಅಣೆಕಟ್ಟೆ

ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ  ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…

21 hours ago