ಪಕ್ಷಾತೀತವಾಗಿ ಗೃಹಲಕ್ಷ್ಮೀ ಯೋಜನೆಯ ಹಣ ಸಂದಾಯ
ಬೆಂಗಳೂರು: ಗ್ಯಾರಂಟಿ ಯೋಜನೆಗಳು ಇರುವುದೇ ಬಡವರಿಗಾಗಿ, ಪಕ್ಷಾತೀತವಾಗಿ ಗೃಹಲಕ್ಷ್ಮೀ ಯೋಜನೆಯ ಹಣವನ್ನು ಯಜಮಾನಿಯರ ಖಾತೆಗೆ ಹಾಕಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಚುನಾವಣೆ ನಡೆಯುವ ಕ್ಷೇತ್ರಗಳಿಗೆ ಮಾತ್ರ ಗೃಹಲಕ್ಷ್ಮೀ ಹಣ ಹಾಕಲಾಗುತ್ತದೆ ಎಂಬುದು ಶುದ್ಧ ಸುಳ್ಳು. ಇದು ಆಧಾರರಹಿತ ಆರೋಪ ಎಂದರು.
ಜಿಎಸ್ಟಿ, ಜಿಎಸ್ಟಿಯೇತರ, ಆದಾಯ ತೆರಿಗೆ… ಹೀಗೆ ಫಲಾನುಭವಿಗಳನ್ನು ವಿಂಗಡಿಸಲಾಗಿದೆ. ಈಗಾಗಲೇ ನವೆಂಬರ್, ಡಿಸೆಂಬರ್ ತಿಂಗಳ ಬಿಲ್ ಆಗಿದ್ದು, ಈ ವಾರದೊಳಗೆ ಎಲ್ಲಾ ಫಲಾನುಭವಿಗಳಿಗೂ ಹಣ ಸಂದಾಯವಾಗಲಿದೆ ಎಂದು ತಿಳಿಸಿದರು.
ಇದು ಚುನಾವಣೆಗೋಸ್ಕರ ಮಾಡಿರುವ ಯೋಜನೆಗಳಲ್ಲ. ಚುನಾವಣೆ ಮುಗಿದ ಬಳಿಕವೂ ಯೋಜನೆಗಳು ಮುಂದುವರಿದಿವೆ. ಗೃಹಲಕ್ಷ್ಮೀ ಯೋಜನೆ ನಿರಂತರವಾಗಿ ಮುಂದುವರಿಯಲಿದೆ. ಕಾಂಗ್ರೆಸ್ ಸರ್ಕಾರ ಇರುವವರೆಗೂ ಗೃಹಲಕ್ಷ್ಮೀ ಯೋಜನೆ ಇರಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಈ ವೇಳೆ ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ್ ಹಟ್ಟಿಹೊಳಿ ಹಾಜರಿದ್ದರು.
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…
ಮಂಡ್ಯ: ಸುಮಾರು 15 ತಿಂಗಳಿನಿಂದ ವೇತನ ಸಿಗದೇ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಮಂಡ್ಯದ ಮೈಶುಗರ್ ಶಾಲೆಯ ಶಿಕ್ಷಕರ ಬಾಕಿ ವೇತನಕ್ಕಾಗಿ…
ಹಾಸನ: ಗ್ಯಾರಂಟಿಗೆ ಕೋಟಿಗಟ್ಟಲೇ ಹಣ ಖರ್ಚು ಮಾಡ್ತಿರೋದು ಸಮಾನತೆ ತರಲು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಹಾಸನದಲ್ಲಿ…
ಬಳ್ಳಾರಿ: ಹೊಸಪೇಟೆ ಹೊರವಲಯದಲ್ಲಿರುವ ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಅಳವಡಿಕೆ ಕಾರ್ಯಕ್ಕೆ ಚಾಲನೆ ಸಿಕ್ಕಿದೆ. ಜಲಾಶಯದ ಮೇಲ್ಬಾಗದಲ್ಲಿ ಗೇಟ್ ಮುಂದೆ…
ಮೈಸೂರು: ಮದುವೆ ಆಗುವುದಾಗಿ ನಂಬಿಸಿ ಮಹಿಳಾ ವಕೀಲೆಯೊಬ್ಬರೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ನಂತರ ಮೋಸ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ವಕೀಲ…
ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ನೊಟೀಸ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ…