Mysore
25
clear sky

Social Media

ಗುರುವಾರ, 29 ಜನವರಿ 2026
Light
Dark

ಗೃಹಲಕ್ಷ್ಮೀಯರಿಗೆ ಮತ್ತೊಂದು ಗುಡ್‌ನ್ಯೂಸ್‌ ಕೊಟ್ಟ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ಕನಕಪುರ: ಶೀಘ್ರದಲ್ಲೇ ಗೃಹಲಕ್ಷ್ಮೀ ಸಂಘಗಳನ್ನು ಸ್ಥಾಪನೆ ಮಾಡಲಾಗುತ್ತದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಘೋಷಣೆ ಮಾಡಿದ್ದಾರೆ.

ಈ ಬಗ್ಗೆ ಕನಕಪುರದಲ್ಲಿ ಮಾತನಾಡಿದ ಅವರು, ದೇಶದ ಆರ್ಥಿಕ ಬೆಳವಣಿಗೆಯಲ್ಲಿ ಸ್ತ್ರೀಯರ ಹಾಗೂ ಸ್ತ್ರೀ ಶಕ್ತಿ ಸಂಘಗಳ ಪಾತ್ರ ಬಹಳ ದೊಡ್ಡದಿದೆ.

ಈ ಹಿನ್ನೆಲೆಯಲ್ಲಿ ಗೃಹಲಕ್ಷ್ಮೀ ಸಂಘಗಳನ್ನು ಸ್ಥಾಪಿಸುವ ಗುರಿ ಹೊಂದಲಾಗಿದೆ. ನಮ್ಮ ಸರ್ಕಾರ ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದಾಗಲೆಲ್ಲಾ ಮಹಿಳಾ ಪರ ಯೋಜನೆಗಳನ್ನು ಜಾರಿಗೆ ತರಲಾಗಿದೆ.

ಹಾಗಾಗಿ ಗೃಹಲಕ್ಷ್ಮೀ ಸಂಘಗಳ ಮೂಲಕ ಮಹಿಳೆಯರಿಗೆ ಮತ್ತಷ್ಟು ಶಕ್ತಿ ತುಂಬಲಾಗುವುದು ಎಂದು ತಿಳಿಸಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಬೆಲೆ ಏರಿಕೆಯಿಂದ ತತ್ತರಿಸಿದ್ದ ಜನರಿಗೆ ಅನುಕೂಲ ಮಾಡುವ ಸಲುವಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಯಿತು. ಇದರಿಂದ ಜನಸಾಮಾನ್ಯರಿಗೆ ತುಂಬಾ ಅನುಕೂಲವಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.

 

Tags:
error: Content is protected !!