ಬೆಂಗಳೂರು: ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಡಿ.27 ರಿಂದ 29ರ ವರೆಗೆ ಕ್ಯಾಂಪ್‌ಗಳನ್ನು ಆಯೋಜಿಸಲು ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ.
ಕರ್ನಾಟಕ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಮತ್ತು ಮಹಿಳೆಯರನ್ನು ಸಬಲೀಕರಣಗೊಳಿಸುವ ಗುರಿ ಹೊಂದಿರುವ ಗೃಹಲಕ್ಷ್ಮೀ ಯೋಜನೆಗೆ ಜುಲೈ 19 ರಂದು ಚಾಲನೆ ನೀಡಲಾಗಿದೆ. ಇದುವರೆಗೂ, 1.17 ಕೋಟಿ ಮಹಿಳಾ ಕುಟುಂಬ ಮುಖ್ಯಸ್ಥರು ಯೋಜನೆಯಡಿ ನೋಂದಣಿ ಮಾಡಿಕೊಂಡಿದ್ದಾರೆ.
ಈ ಪ್ರಕ್ರಿಯೆಯಲ್ಲಿ ಸುಮಾರು 2.5 ಲಕ್ಷ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಆಧಾರ್ ಜೋಡಣೆ ಯಾಗದೇ ಇರುವುದು ಮತ್ತು ಸುಮಾರು 70,000 ನಿಷ್ಕ್ರಿಯ ಬ್ಯಾಂಕ್ ಖಾತೆಗಳಿಗೆ ಆಧಾರ್ ಜೋಡಣೆ ಮಾಡಿದ್ದರಿಂದ ನೇರ ನಗದು ಹಣ ವರ್ಗಾವಣೆಗೆ ತೊಂದರೆ ಯಾಗಿದೆ.
ನೇರ ನಗದು ವರ್ಗಾವಣೆ ಪ್ರಕ್ರಿಯೆಯನ್ನು ಸುಗಮಗೊಳಿಸಲು ಬ್ಯಾಂಕ್ ಖಾತೆಗಳಿಗೆ ಆಧಾರ್ ಜೋಡಣೆ ಮಾಡುವುದು ಅಗತ್ಯವಿರುತ್ತದೆ. ಆದ್ದರಿಂದ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸಮಸ್ಯೆಗಳನ್ನು ಪರಿಹರಿಸಲು ಕ್ಯಾಂಪ್ ಏರ್ಪಡಿಸಲು ರಾಜ್ಯ ಸರ್ಕಾರ ಸೂಚಿಸಿದೆ.
ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕ್ಯಾಂಪ್‌ಗಳಲ್ಲಿನ ಸೂಚನೆಗಳು
೧.ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನೇತೃತ್ವದಲ್ಲಿ ಕ್ಯಾಂಪ್‌ಗಳನ್ನು ಆಯೋಜಿಸತಕ್ಕದ್ದು.
೨.ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದ ಎಲ್ಲಾ ತಾಂತ್ರಿಕ ಮತ್ತು ಬ್ಯಾಂಕ್ ಸಂಬಂಧಿಸಿದ ಸಮಸ್ಯೆಗಳನ್ನು ಈ ಕ್ಯಾಂಪ್‌ಗಳಲ್ಲಿ ಪರಿಹರಿಸತಕ್ಕದ್ದು.
೩.ಸ್ಥಳೀಯ ಬಾಪೂಜಿ ಸೇವಾ ಕೇಂದ್ರದ ಗಣಕ ಯಂತ್ರ ನಿರ್ವಾಹಕರು, ಅಂಗನವಾಡಿ ಕಾರ್ಯಕರ್ತರು ಮತ್ತು Electronic Delivery of Citizen Services (EDCS) ತಂಡಗಳು ಈ ಕ್ಯಾಂಪ್‌ಗಳಲ್ಲಿ ಭಾಗವಹಿಸತಕ್ಕದ್ದು.
೪.ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ನ ಪ್ರತಿನಿಧಿಗಳು ಮತ್ತು ಇತರೆ ಬ್ಯಾಂಕ್‌ಗಳ ಪ್ರತಿನಿಧಿಗಳು ಈ ಕ್ಯಾಂಪ್‌ಗಳಲ್ಲಿ ಭಾಗವಹಿಸತಕ್ಕದ್ದು.
೫.ಕ್ಯಾಂಪ್‌ಗಳಲ್ಲಿ ಫಲಾನುಭವಿಗಳಿಗೆ ಈ ಕೆಳಕಂಡ ಸೌಲಭ್ಯಗಳನ್ನು ಒದಗಿಸತಕ್ಕದ್ದು.
ಬ್ಯಾಂಕ್ ಖಾತೆಗಳಿಗೆ ಆಧಾರ್ ಜೋಡಣೆ ಮಾಡುವುದು.
ಹೊಸ ಬ್ಯಾಂಕ್ ಖಾತೆಗಳನ್ನು ತೆರೆಯುವುದು ಮತ್ತು ಆಧಾರ್ ಜೋಡಣೆ ಮಾಡುವುದು.
ಇ-ಕೆವೈಸಿ ಅಪ್‌ಡೇಟ್ ಮಾಡುವುದು.
ಗೃಹಲಕ್ಷ್ಮೀ ಅರ್ಜಿಯ ಸ್ಥಿತಿ ಪರಿಶೀಲಿಸುವುದು.
ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದ ಇತರೆ ಸಮಸ್ಯೆಗಳನ್ನು ಪರಿಹರಿಸುವುದು.
೬.ಕ್ಯಾಂಪ್‌ಗಳನ್ನು ಆಯೋಜಿಸುವ ಕುರಿತು ಡಿ.22 ರಂದು ಕ್ಯಾಂಪ್ ಆಯೋಜಿಸುವ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ತರಬೇತಿ ಆಯೋಜಿಸುವುದು.
೭.ಪ್ರತಿ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಡಿ.27 ರಿಂದ 29ರ ವರೆಗೆ ಪ್ರತಿದಿನ ಬೆಳಿಗ್ಗೆ 9.00 ರಿಂದ ಸಂಜೆ 5.00 ಗಂಟೆಯವರೆಗೆ ಕ್ಯಾಂಪ್‌ಗಳನ್ನು ಆಯೋಜಿಸುವುದು.
೮.ಕ್ಯಾಂಪ್ ಆಯೋಜಿಸುವ ಕುರಿತು ಫಲಾನುಭವಿಗಳಿಗೆ EDCS ರವರು SMS ಮೂಲಕ ಮಾಹಿತಿ ನೀಡುವುದು.
೯.ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕ್ಷೇತ್ರಮಟ್ಟದ ಸಿಬ್ಬಂದಿಗಳು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಮಾಹಿತಿ ನೀಡಿ, ಅವರನ್ನು ಕ್ಯಾಂಪ್‌ಗಳಿಗೆ ಕರೆತರುವ ಜವಾಬ್ದಾರಿ ನಿರ್ವಹಿಸುವುದು.
೧೦.ಕ್ಯಾಂಪ್ ಆಯೋಜಿಸುವ ಕುರಿತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಪತ್ರಿಕೆ ಮತ್ತು ಇತರೆ ಮಾಧ್ಯಮಗಳ ಮೂಲಕ ವ್ಯಾಪಕ ಪ್ರಚಾರ ನೀಡತಕ್ಕದ್ದು.
ಮೈಸೂರು: ಸಕ್ಕರೆ ನಾಡು ಮಂಡ್ಯದಲ್ಲಿ ಇಂದಿನಿಂದ (ಡಿ.20) 87ನೇ ಕನ್ನಡ ಸಾಹಿತ್ಯ ಸಮ್ಮೇಳನ ಶುರುವಾಗಿದೆ. ಆದರೆ ಈ ಸಮ್ಮೇಳನವನ್ನು ಯಾವ…
ಮಂಡ್ಯ: ಹಾಸ್ಯ ಸಾಹಿತ್ಯ ಆಧುನಿಕ ಬದುಕಿನಗೆ ಔಷಧಿಯಾಗಿದೆ ಎಂದು ಪ್ರಾಧ್ಯಾಪಕ ಡಾ.ಜೆ.ಕರಿಯಪ್ಪ ಮಾಳಿಗೆ ಹೇಳಿದರು. 87ಅಖಿಲ ಭಾರತ ಕನ್ನಡ ಸಾಹಿತ್ಯ…
ಮಡಿಕೇರಿ: ಸಿ ಮತ್ತು ಡಿ ಭೂಮಿಗೆ ಸಂಬಂಧಿಸಿದಂತೆ ಕಂದಾಯ ಸಚಿವರು ಉನ್ನತ ಮಟ್ಟದ ಸಮಿತಿ ರಚನೆಗೆ ಮುಂದಾಗಿದ್ದು, ಸಮಸ್ಯೆ ಪರಿಹಾರವಾಗಲಿ…
ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಕ್ಷೇಪಾರ್ಹ ಪದ ಬಳಸಿದ್ದಾರೆ ಎಂಬ ಆರೋಪದ ಮೇಲೆ ಎಂಎಲ್‌ಸಿ ಸಿ.ಟಿ.ರವಿಯವರನ್ನು ಪೊಲೀಸರೇ ಕೊಲೆ…
ವಿರಾಜಪೇಟೆ: ಗೋಣಿಕೊಪ್ಪ-ಕೇರಳ ಹೆದ್ದಾರಿಯ ಬಿಟ್ಟಂಗಾಲ ಆಟೋ ನಿಲ್ದಾಣದ ಬಳಿ ಚಿರತೆ ಬೆಕ್ಕೊಂದು ಅಪಘಾತಕೀಡಾಗಿ ಸಾವನಪ್ಪಿದ ಘಟನೆ ಶುಕ್ರವಾರ ರಾತ್ರಿ 9…
ಮೈಸೂರು: ನಟ ದರ್ಶನ್ ಅವರು ಮೈಸೂರಿನ ತಿ.ನರಸೀಪುರ ಮುಖ್ಯರಸ್ತೆಯಲ್ಲಿರುವ ಕೆಂಪಯ್ಯನಹುಂಡಿ ಬಳಿಯ ತಮ್ಮ ಫಾರ್ಮ್‌ಹೌಸ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಶುಕ್ರವಾರ ಇಲ್ಲಿಗ…