ಮಂಗಳೂರು: ಮಹಿಳೆಯನ್ನು ಆರ್ಥಿಕವಾಗಿ ಸಶಕ್ತಗೊಳಿಸಲು ಸರ್ಕಾರ ಜಾರಿಗೆ ತಂದಿರುವ ಗೃಹಲಕ್ಷ್ಮಿ ಯೋಜನೆಯನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ. ಯೋಜನೆಯನ್ನು ರಾಜಕೀಯ ದುರುದ್ದೇಶಕ್ಕೆ ಬಳಸಿಕೊಳ್ಳುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಹೇಳಿದ್ದಾರೆ.
ಶನಿವಾರ(ಜು.13) ಮಂಗಳೂರು ನಗರದ ಉರ್ವಸ್ಟೋರ್ ಬಳಿಯಿರುವ ಕರಾವಳಿ ಲೇಖಕಿಯರ ಮತ್ತು ವಾಚಕಿಯರ ಸಂಘದ ನವೀಕೃತ ಕಟ್ಟಡ ‘ಸಾಹಿತ್ಯ ಸದನ’ ವನ್ನು ಉದ್ಘಾಟಿಸಿ ಮಾತನಾಡಿದ ಸಚಿವರು, ರಾಜ್ಯ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಒತ್ತು ನೀಡಿದೆ. ಹಾಗಾಗಿ ಗೃಹಲಕ್ಷ್ಮಿ ಸೇರಿದಂತೆ ಎಲ್ಲ ಗ್ಯಾರಂಟಿ ಯೋಜನೆಗಳು ನಿತ್ಯ ನಿರಂತರವಾಗಿ ಮುಂದುವರೆಯಲಿವೆ ಎಂದರು.
ರಾಜ್ಯದ ಪ್ರತಿ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ನೀಡಬೇಕೆಂಬುದು ಸರ್ಕಾರದ ಆಶಯವಾಗಿದೆ. ಮನೆಗೆಲಸ ಮಾಡುವ ಪೋಷಕರ ಜತೆಗೆ ಐಎಎಸ್ ಅಧಿಕಾರಿಗಳಿಗೂ ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕೆಂಬ ಆಕಾಂಕ್ಷೆ ಇರುತ್ತದೆ. ಹಾಗಾಗಿ, ಎಲ್ಲಾ ಮಕ್ಕಳಿಗೂ ಗುಣಮಟ್ಟದ ಶಿಕ್ಷಣದ ಜೊತೆಗೆ ಪೌಷ್ಠಿಕ ಆಹಾರ ನೀಡುವುದರೊಂದಿಗೆ ಅಂಗನವಾಡಿಗಳನ್ನು ಗೌರ್ನಮೆಂಟ್ ಮೊಂಟೆಸರಿಗಳಾಗಿ ಪರಿವರ್ತಿಸಲಾಗುವುದು ಎಂದು ಅವರು ಹೇಳಿದರು.
ಮಹಿಳೆ ಎಂದರೆ ಸಂಘರ್ಷ. ಮಹಿಳೆಯರು ತಮ್ಮ ಅಸ್ತಿತ್ವಕ್ಕೆ ಹೋರಾಟ ಮಾಡುವುದು ಸ್ವಾತಂತ್ರ ಬಂದು 76 ವರ್ಷಗಳ ನಂತರವೂ ಮುಂದುವರಿದಿದೆ. ಇದು ಆತಂಕಕಾರಿ ಬೆಳವಣಿಗೆ ಎಂದು ಸಚಿವೆ ಹೇಳಿದರು.
ಸಮಾಜದಲ್ಲಿ ಇಂದು ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ, ಬಾಲಗರ್ಭಿಣಿ, ದೌರ್ಜನ್ಯ ಹೀಗೆ ನಿರಂತರ ಶೋಷಣೆ ನಡೆಯುವುದನ್ನು ಕಾಣುತ್ತಿದ್ದೇವೆ. ಆದರೂ, ಮಹಿಳೆ ಮಾನಸಿಕ ಸದೃಢತೆ ಹೊಂದಿರುವವಳು. ಇದರಿಂದಾಗಿಯೇ ಒಲಿಂಪಿಕ್ಸ್ ಕ್ರೀಡೆ, ಶಿಕ್ಷಣ ಸೇರಿದಂತೆ ಎಲ್ಲಾ ಕ್ಷೇತ್ರದಲ್ಲೂ ಮಹಿಳೆ ಮುಂದೆ ಇದ್ದಾಳೆ. ಹೀಗಿದ್ದರೂ ರಾಜಕೀಯದಲ್ಲಿ ಮಹಿಳೆಯರ ಹಾಜರಾತಿಗೆ ಇನ್ನೂ ಒತ್ತು ನೀಡಬೇಕಾದ ಪ್ರಸಂಗ ಸಮಾಜದಲ್ಲಿದೆ. ಆ ನಿಟ್ಟಿನಲ್ಲಿ ಕರಾವಳಿ ಲೇಖಕಿಯರ ಮತ್ತು ರಾಜಕೀಯ ಸಂಘದಂತಹ ಮಹಿಳಾಪರ ಸಂಘ- ಸಂಸ್ಥೆಗಳ ಕಾರ್ಯಾಚರಣೆಗಳು ಪೂರಕವಾಗಿವೆ ಎಂದು ಸಚಿವರು ಹೇಳಿದರು.
ಬೆಳಗಾವಿ : ಉತ್ತರ ಕರ್ನಾಟಕದ ಸಮಸ್ಯೆ, ಕಾನೂನು ಸುವ್ಯವಸ್ಥೆಯಲ್ಲಿ ಲೋಪ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಇನ್ನೂ ದೀರ್ಘ ಚರ್ಚೆ…
ಬೆಳಗಾವಿ : ಮೊಟ್ಟೆಯಲ್ಲಿ ಕ್ಯಾನ್ಸರ್ಕಾರಕ ಅಂಶವಿದೆ ಎಂಬ ವಿಚಾರದ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿ ವರದಿ ನೀಡಲು ಇಲಾಖೆಗೆ ಸೂಚಿಸಲಾಗಿದೆ ಎಂದು…
ಹೊಸದಿಲ್ಲಿ : ದಿಲ್ಲಿಯಲ್ಲಿ ಉಂಟಾದ ದಟ್ಟವಾದ ಹೊಗೆ ಹಾಗೂ ತೀವ್ರ ಹವಾಮಾನ ವೈಪರೀತ್ಯದಿಂದಾಗಿ ಕರ್ನಾಟಕದ 21 ಶಾಸಕರು ಮತ್ತು 7…
ಹೊಸದಿಲ್ಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ನೋಟೀಸ್ʼಗೆ ಉತ್ತರ ನೀಡಲು ಕಾಲಾವಕಾಶ ಕೋರುವೆ ಎಂದು ಡಿಸಿಎಂ…
ಬಳ್ಳಾರಿ : ನಗರದಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ ಲಾರಿಯಲ್ಲಿ ಸಾಗಿಸುತ್ತಿದ್ದ ಯಮಹಾ ಕಂಪನಿಯ 40 ಬೈಕ್ಗಳು ಸಂಪೂರ್ಣವಾಗಿ ಸುಟ್ಟು…
ಬೆಂಗಳೂರು : ಆಸ್ಪ್ರೇಲಿಯಾದ ಬೀಚ್ನಲ್ಲಿ ಭಾನುವಾರ ಮಧ್ಯಾಹ್ನ ಭೀಕರ ಗುಂಡಿನ ದಾಳಿ ನಡೆದಿದ್ದು, ಇಬ್ಬರು ಪೊಲೀಸರು ಸೇರಿದಂತೆ 12 ಮಂದಿ…