Mysore
22
mist

Social Media

ಶನಿವಾರ, 06 ಡಿಸೆಂಬರ್ 2025
Light
Dark

ಕರ್ತವ್ಯದ ವೇಳೆ ಹುತಾತ್ಮರಾಗುವ ಪೊಲೀಸ್ ಸಿಬ್ಬಂದಿಯ ಗುಂಪು ವಿಮಾ 50 ಲಕ್ಷಕ್ಕೆ ಏರಿಕೆ : ಸಿಎಂ ಘೋಷಣೆ

ಬೆಂಗಳೂರು : ಕರ್ತವ್ಯದ ಮೇಲಿದ್ದಾಗ ಹುತಾತ್ಮರಾಗುವ ಪೊಲೀಸ್ ಸಿಬ್ಬಂದಿಯ ಗುಂಪು ವಿಮಾ ಮೊತ್ತವನ್ನು 20 ಲಕ್ಷದಿಂದ 50 ಲಕ್ಷಕ್ಕೆ ಏರಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು.

ಪೊಲೀಸ್ ಸಂಸ್ಮರಣ ದಿನದ ಅಂಗವಾಗಿ ಮೈಸೂರು ರಸ್ತೆಯ ಹುತಾತ್ಮರ ಉದ್ಯಾನವನದಲ್ಲಿ ಹುತಾತ್ಮರಿಗೆ ಪುಷ್ಪಚಕ್ರ ಅರ್ಪಿಸಿ ನಮನ ಸಲ್ಲಿಸಿ ಮಾತನಾಡಿದರು.
ಪೊಲೀಸ್ ವ್ಯವಸ್ಥೆ ರಾಜ್ಯದ , ಸರ್ಕಾರದ ಘನತೆಯನ್ನು ಹೆಚ್ಚಿಸುವಂತೆ ಕೆಲಸ ಮಾಡುತ್ತದೆ. ಅಭಿವೃದ್ಧಿ ಮತ್ತು ಕಾನೂನು ಸುವ್ಯವಸ್ಥೆಗೆ ನೇರ ಸಂಬಂಧವಿದೆ.ಯಾವ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಮರ್ಪಕವಾಗಿರುತ್ತದೋ ಅಲ್ಲಿಗೆ ಬಂಡವಾಳ ಹೆಚ್ಚಾಗಿ ಬರುತ್ತದೆ. ಇದರಿಂದ ಉದ್ಯೋಗ ಸೃಷ್ಟಿ ಹೆಚ್ಚಾಗಿ, ಅಭಿವೃದ್ಧಿ ವೇಗ ಪಡೆದುಕೊಳ್ಳುತ್ತದೆ. ಇದರ ಪರಿಣಾಮ ನಾಡಿನ ಜನರ ತಲಾ ಆದಾಯದ ಪ್ರಮಾಣವೂ ಹೆಚ್ಚಾಗುತ್ತದೆ. ಆದ್ದರಿಂದ ನಾಡಿನ ಕಾನೂನು ಸುವ್ಯವಸ್ಥೆಯನ್ನು ಪೊಲೀಸ್ ಇಲಾಖೆ ಕಟ್ಟು ನಿಟ್ಟಾಗಿ ನಿರ್ವಹಿಸಬೇಕು ಎಂದು ಕರೆ ನೀಡಿದರು.

ಸುಳ್ಳು ಸುದ್ದಿ ಹರಡುವವರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು.ಸುಳ್ಳು ಸುದ್ದಿ ಹರಡುವ ಜಾಲ ತಾಣಗಳು ಮತ್ತು ಅವನ್ನು ನಿರ್ವಹಿಸುತ್ತಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿಗಳು ಸೂಚಿಸಿದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!