ಹಾಸನ: ಅಸಹಜ ಲೈಂಗಿಕ ದೌರ್ಜನ್ಯ ಆರೋಪದಡಿಯಲ್ಲಿ ಜೆಡಿಎಸ್ ಪರಿಷತ್ ಸದಸ್ಯ ಸೂರಜ್ ರೇವಣ್ಣರನ್ನ ಈಗಾಗಲೇ ಬಂಧಿಸಲಾಗಿದೆ.
ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆ ಪೊಲೀಸರು ವಿಚಾರಣೆ ನಡೆಸಿ ವೈದ್ಯಕೀಯ ಪರೀಕ್ಷೆ ಮಾಡಿಸಿ ಬಳಿಕ ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ನಲ್ಲಿ ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಿದ್ದಾರೆ.
ಇನ್ನೊಂದೆಡೆ ಸೂರಜ್ ರೇವಣ್ಣ ಪರ ವಕಾಲತ್ತು ವಹಿಸಲು 10 ಜನರ ವಕೀಲರ ತಂಡವನ್ನು ರೆಡಿ ಮಾಡಲಾಗಿದ್ದು. ಈಗಾಗಲೇ ತನಿಖಾಧಿಕಾರಿಯನ್ನು ಭೇಟಿ ಮಾಡಿ ಪ್ರಕರಣದ ಬಗ್ಗೆ ಮಾಹಿತಿಯನ್ನು ಸಹ ಪಡೆದುಕೊಂಡಿದ್ದಾರೆ.