Mysore
23
few clouds

Social Media

ಸೋಮವಾರ, 26 ಜನವರಿ 2026
Light
Dark

ಮೂರು ತಿಂಗಳಿನಿಂದ ಗೃಹಲಕ್ಷ್ಮೀ ಹಣ ಬಂದಿಲ್ಲ ಎಂದ ಸಂಸದ ಗೋವಿಂದ ಜಾರಕೋಳ

ಬೆಳಗಾವಿ: ಇಂದು ಚುನಾವಣೆ ನಡೆದರೆ ಕಾಂಗ್ರೆಸ್‌ಗೆ ಕೇವಲ 20 ಸೀಟು ಬರುತ್ತದೆ ಎಂದು ಬಿಜೆಪಿ ಸಂಸದ ಗೋವಿಂದ ಕಾರಜೋಳ ಭವಿಷ್ಯ ನುಡಿದಿದ್ದಾರೆ.

ಈ ಕುರಿತು ಬೆಳಗಾವಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಸರ್ಕಾರ ಬಂದು ಎರಡು ವರ್ಷವಾಗಿದೆ. ಭಂಡತನದಿಂದ ಐದು ಗ್ಯಾರಂಟಿ ಕೊಡುತ್ತೇವೆ ಎಂದಿದ್ದರು. ಆದರೆ ಈಗ ಗ್ಯಾರಂಟಿ ಹಣವನ್ನೂ ಕೊಡುತ್ತಿಲ್ಲ. ಗೃಹಲಕ್ಷ್ಮೀ ಹಣ ಮೂರು ತಿಂಗಳಿನಿಂದ ಖಾತೆಗೆ ಜಮೆ ಆಗಿಲ್ಲ ಎಂದು ವಾಗ್ದಾಳಿ ನಡೆಸಿದರು.

ರಾಜ್ಯದಲ್ಲಿ ದಿನನಿತ್ಯ ಕೊಲೆ ಸುಲಿಗೆ ಆಗುತ್ತಿವೆ. ಬೇರೆ ರಾಜ್ಯದವರು ಬಂದು ಕಳ್ಳತನ ಮಾಡ್ತಿದ್ದಾರೆ. ಜನರಿಗೆ, ಹೆಣ್ಣು ಮಕ್ಕಳಿಗೆ ರಕ್ಷಣೆಯಿಲ್ಲ. ಪುಂಡರ ಹಾವಳಿ ಜಾಸ್ತಿ ಆಗಿದೆ. ಸರ್ಕಾರದ ಹಿಡಿತ ತಪ್ಪಿ ಹೋಗಿದ್ದು, ಸಿದ್ದರಾಮಯ್ಯ ಎಲ್ಲದರಲ್ಲೂ ವಿಫಲರಾಗಿದ್ದಾರೆ ಎಂದು ಕಿಡಿಕಾರಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಕರ್ನಾಟಕದಲ್ಲಿ ದಲಿತ ಸಿಎಂ ಮಾಡಲು ಅವಕಾಶ ಇದೆ. ಖರ್ಗೆ ಅವರು ಯಾರನ್ನಾದರೂ ಮಾಡಲಿ. ದಲಿತ ಸಿಎಂ ಮಾಡುತ್ತೇವೆ ಎಂದು ಘೋಷಣೆ ಮಾಡಲಿ. ಪರಮೇಶ್ವರ್‌, ಮುನಿಯಪ್ಪ ಅವರನ್ನು ಮಾಡಬೇಕು. ಇಲ್ಲವಾದರೆ ಖರ್ಗೆ ಅವರೇ ದಲಿತ ಸಿಎಂ ಆಗಲಿ ಎಂದು ಅಭಿಪ್ರಾಯಪಟ್ಟರು.

 

 

Tags:
error: Content is protected !!